TSK

TSK · ಹೋಶೇ 2:19

مراجع Treasury of Scripture Knowledge في ಕನ್ನಡ IRV.

العودة إلى المقطع

ಆತನ ಶಾಶ್ವತ ಪ್ರೀತಿ ಮತ್ತು ನಂಬಿಗಸ್ತಿಕೆ ಒಂದನ್ನೊಂದು ಕೂಡಿರುವವು; ನೀತಿಯು, ಸಮಾಧಾನವು ಮುದ್ದಿಟ್ಟುಕೊಳ್ಳುವವು.

ನನ್ನಷ್ಟಕ್ಕೆ ನಾನೇ ಆಣೆಯನ್ನು ಇಟ್ಟಿದ್ದೇನೆ, ಸತ್ಯದ ವಾಕ್ಯವು ನನ್ನ ಬಾಯಿಂದ ಹೊರಟಿದೆ, ಅದು ಹಿಂದಿರುಗದು. ಎಲ್ಲರೂ ನನಗೆ ಅಡ್ಡಬೀಳುವರು, ಎಲ್ಲರೂ ನನ್ನನ್ನು ದೇವರೆಂದು ಪ್ರತಿಜ್ಞೆಮಾಡುವರು.

ತಟ್ಟನೆ ಉಬ್ಬಿ ಹರಿಯುವ ಕೋಪದಿಂದ ಒಂದು ಕ್ಷಣ ಮಾತ್ರ ನನ್ನ ಮುಖವನ್ನು ನಿನಗೆ ಮರೆಮಾಡಿಕೊಂಡಿದ್ದೆನು, ಶಾಶ್ವತ ಕೃಪೆಯಿಂದ ನಿನ್ನನ್ನು ಕರುಣಿಸುವೆನು” ಎಂದು ನಿನ್ನ ವಿಮೋಚಕನಾದ ಯೆಹೋವನು ಅನ್ನುತ್ತಾನೆ.

ನೀನು ಯೆಹೋವನ ಕೈಯಲ್ಲಿ ಸುಂದರವಾದ ಕಿರೀಟವಾಗಿಯೂ, ನಿನ್ನ ದೇವರ ಹಸ್ತದಲ್ಲಿ ರಾಜಶಿರೋಭೂಷಣವಾಗಿಯೂ ಇರುವಿ.

‘ಯೆಹೋವನ ಜೀವದಾಣೆ’ ಎಂದು ಸತ್ಯ, ನ್ಯಾಯ ಮತ್ತು ಧರ್ಮಾನುಸಾರವಾಗಿ ನೀನು ಪ್ರಮಾಣ ಮಾಡಿದರೆ, ಜನಾಂಗಗಳು ಆತನಿಂದ ತಮ್ಮನ್ನು ಆಶೀರ್ವದಿಸಿಕೊಂಡು ಆತನಲ್ಲಿ ಹೆಚ್ಚಳಪಡುವರು” ಎಂದು ಹೇಳುತ್ತಾನೆ.

ಅವರು ನನಗೆ ಜನರಾಗಿರುವರು, ನಾನು ಅವರಿಗೆ ದೇವರಾಗಿರುವೆನು.

ಇನ್ನೆಂದಿಗೂ ನಾನು ನನ್ನ ಮುಖವನ್ನು ಮರೆಮಾಡುವುದಿಲ್ಲ. ಇಸ್ರಾಯೇಲ್ ವಂಶದ ಮೇಲೆ ನನ್ನ ಆತ್ಮವನ್ನು ಸುರಿಸಿದ್ದೇನೆ” ಇದು ಕರ್ತನಾದ ಯೆಹೋವನ ನುಡಿ.

ಆದರೆ ಯೆಹೂದವು ಸದಾ ಜನಭರಿತವಾಗಿರುವುದು, ಯೆರೂಸಲೇಮ್ ತಲತಲಾಂತರಕ್ಕೂ ನಿವಾಸಸ್ಥಾನವಾಗಿರುವುದು.

ಮದಲಗಿತ್ತಿಯುಳ್ಳವನೇ ಮದಲಿಂಗನು. ಆದರೂ ಮದಲಿಂಗನ ಗೆಳೆಯನು ಅವನ ಹತ್ತಿರ ನಿಂತುಕೊಂಡು ಅವನ ಮಾತುಗಳನ್ನು ಕೇಳಿ ಮದಲಿಂಗನ ಧ್ವನಿಗೆ ಬಹು ಸಂತೋಷಪಡುತ್ತಾನಲ್ಲವೇ. ಆದಕಾರಣ ಈ ನನ್ನ ಸಂತೋಷವು ಪರಿಪೂರ್ಣವಾಯಿತು.

ಹಾಗೆಯೇ ನನ್ನ ಸಹೋದರರೇ, ನೀವು ಸಹ ಕ್ರಿಸ್ತನ ದೇಹದ ಮೂಲಕವಾಗಿ ಧರ್ಮಶಾಸ್ತ್ರದ ಪಾಲಿಗೆ ಸತ್ತಿದ್ದೀರಿ. ದೇವರಿಗೆ ಫಲಕೊಡುವುದಕ್ಕಾಗಿ ಮತ್ತೊಬ್ಬನನ್ನು ಅಂದರೆ ಸತ್ತು ಜೀವಿತನಾಗಿ ಎದ್ದಾತನನ್ನು ಸೇರಿಕೊಂಡಿದ್ದೀರಿ.

ಯೇಸುಕ್ರಿಸ್ತನು ನಮಗೋಸ್ಕರ ಸುರಿಸಿದ ರಕ್ತದ ಮೂಲಕ ನಮಗೆ ಆತನ ಕೃಪೆಯ ಐಶ್ವರ್ಯಕ್ಕನುಸಾರವಾಗಿ ಪಾಪ ಕ್ಷಮಾಪಣೆಯೆಂಬ ವಿಮೋಚನೆಯು ಉಂಟಾಯಿತು.

ಯಜ್ಞದ ಕುರಿಮರಿಯಾದಾತನ ವಿವಾಹಕಾಲವು ಬಂದಿತೆಂದು ಸಂತೋಷಪಡೋಣ, ಹರ್ಷಗೊಳ್ಳೋಣ, ಆತನನ್ನು ಘನಪಡಿಸೋಣ, ಏಕೆಂದರೆ ಆತನನ್ನು ವಿವಾಹವಾಗುವ ಕನ್ಯೆಯು ತನ್ನನ್ನು ತಾನೇ ಸಿದ್ಧಮಾಡಿಕೊಂಡಿದ್ದಾಳೆ” ಎಂದು ಹೇಳಿತು.

¶ ಕಡೇ ಏಳು ಉಪದ್ರವಗಳಿಂದ ತುಂಬಿದ ಏಳು ಬಟ್ಟಲುಗಳನ್ನು ಹಿಡಿದಿದ್ದ ಏಳು ಮಂದಿ ದೇವದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡುತ್ತಾ, “ಬಾ ಕುರಿಮರಿಯಾದಾತನಿಗೆ ಹೆಂಡತಿಯಾಗಲಿರುವ ವಧುವನ್ನು ನಿನಗೆ ತೋರಿಸುವೆನು” ಎಂದು ಹೇಳಿ,