كل أسفار ಕನ್ನಡ IRV

ಹೋಶೇ 3

ಕನ್ನಡ IRV · الأصحاح 3

14 أصحاحات

ಕನ್ನಡ IRV / ಹೋಶೇ / الأصحاح 3

ಕನ್ನಡ IRV · الأصحاح 3

1 ¶ ಯೆಹೋವನು ನನಗೆ, “ನೀನು ಅನ್ಯದೇವತೆಗಳ ಕಡೆಗೆ ತಿರುಗಿಕೊಂಡು, ದೀಪದ್ರಾಕ್ಷೆಯ ಅಡೆಗಳನ್ನು ಪ್ರೀತಿಸುವ ಇಸ್ರಾಯೇಲರನ್ನು ಯೆಹೋವನು ಪ್ರೀತಿಸುವ ಪ್ರಕಾರ, ನೀನು ಜಾರನಿಗೆ ಪ್ರಿಯಳೂ, ವ್ಯಭಿಚಾರಾಸಕ್ತಳೂ ಆದ ಹೆಂಗಸನ್ನು ಪ್ರೀತಿಸುತ್ತಾ ಬಾ” ಎಂದು ಅಪ್ಪಣೆ ಕೊಟ್ಟನು.

2 ಆಗ ನಾನು ಹದಿನೈದು ಬೆಳ್ಳಿ ನಾಣ್ಯಗಳನ್ನೂ ಮತ್ತು ಒಂದುವರೆ ಹೋಮೆರ್ ಜವೆಗೋದಿಯನ್ನೂ ಕೊಟ್ಟು ಅವಳನ್ನು ಕೊಂಡುಕೊಂಡೆನು.

3 ನಾನು ಅವಳಿಗೆ, “ನನಗಾಗಿ ಬಹು ದಿನಗಳು ತಾಳಿಕೊಂಡಿರು; ವ್ಯಭಿಚಾರ ಮಾಡಬೇಡ, ಯಾರೊಂದಿಗೂ ವ್ಯಭಿಚಾರಮಾಡಬೇಡ. ನಾನು ಸಹ ನಿನ್ನವನೇ, ನಿನ್ನ ಸಂಗಡ ವಾಸಿಸುವೆನು” ಎಂದು ಹೇಳಿದೆನು.

4 ¶ ಇದರಂತೆ ರಾಜಮುಖಂಡ, ಯಜ್ಞ, ಸ್ತಂಭ, ಏಫೋದು, ವಿಗ್ರಹಗಳಿಲ್ಲದೆ ಇಸ್ರಾಯೇಲರು ಬಹಳ ದಿನಗಳು ತಾಳಿಕೊಂಡಿರುವರು.

5 ಅನಂತರ ಅವರು ತಮ್ಮ ದೇವರಾದ ಯೆಹೋವನನ್ನೂ ಮತ್ತು ತಮ್ಮ ರಾಜನಾದ ದಾವೀದನನ್ನೂ ಪುನಃ ಆಶ್ರಯಿಸುವರು. ಹೌದು, ಅಂತ್ಯಕಾಲದಲ್ಲಿ ಯೆಹೋವನನ್ನೂ, ಆತನ ದಯೆಯನ್ನೂ ಭಯಭಕ್ತಿಯಿಂದ ಪಡೆಯುವರು.