TSK

TSK · ಹೋಶೇ 4:18

مراجع Treasury of Scripture Knowledge في ಕನ್ನಡ IRV.

العودة إلى المقطع

ಲಂಚವನ್ನು ತೆಗೆದುಕೊಳ್ಳಬಾರದು, ಲಂಚವು ಕಣ್ಣುಳ್ಳವರನ್ನು ಕುರುಡರಂತೆ ಮಾಡುತ್ತದೆ, ನಿರಪರಾಧಿಗೆ ದೊರಕಬೇಕಾದ ನ್ಯಾಯವನ್ನು ತಪ್ಪಿಸುತ್ತದೆ.

ಅವರು ಸೊದೋಮ್ಯರೆಂಬ ದ್ರಾಕ್ಷಾಲತೆಯ ಒಂದು ಬಳ್ಳಿಯಂತಿದ್ದಾರೆ; ಮತ್ತು ಅದು ಗೊಮೋರ ಪಟ್ಟಣದ ತೋಟಗಳಲ್ಲಿ ಬೆಳೆಯುವ ಜಾತಿ. ಅದರ ದ್ರಾಕ್ಷಿಹಣ್ಣು ವಿಷದ ದ್ರಾಕ್ಷಿಹಣ್ಣು; ಅದರ ಗೊಂಚಲು ಕಹಿ.

ಇಲ್ಲಿ ನಿಂತುಕೊಂಡಿರುವ ನಾನು ಯಾರ ಎತ್ತನ್ನಾಗಲಿ, ಕತ್ತೆಯನ್ನಾಗಲಿ ತೆಗೆದುಕೊಂಡು ಯಾರನ್ನಾದರೂ ವಂಚಿಸಿ, ಪೀಡಿಸಿದ್ದೂ, ಲಂಚ ತೆಗೆದುಕೊಂಡು ಕುರುಡನಂತೆ ತೀರ್ಪು ಮಾಡಿದ್ದೂ ಉಂಟೋ? ಇದ್ದರೆ ಯೆಹೋವನ ಮುಂದೆಯೂ ಆತನ ಅಭಿಷಿಕ್ತನ ಮುಂದೆಯೂ ಹೇಳಿರಿ; ನಾನು ಅದನ್ನು ಹಿಂದಕ್ಕೆ ಕೊಡುತ್ತೇನೆ” ಅಂದನು.

ಜನಾಂಗಗಳನ್ನು ಆಳುವ ಪ್ರಭುಗಳು ಅಬ್ರಹಾಮನ ದೇವರ ಪ್ರಜೆಗಳೊಂದಿಗೆ ಸೇರಿಕೊಂಡಿದ್ದಾರೆ; ಏಕೆಂದರೆ ಭೂಪರಲೋಕದ ಗುರಾಣಿಗಳು ದೇವರಿಗೆ ಸೇರಿದವುಗಳೇ. ಆತನೇ ಸರ್ವೋನ್ನತನು.

¶ ಅಯ್ಯೋ, ನಂಬಿಕೆಯುಳ್ಳ ನಗರಿಯು ಸೂಳೆಯಾದಳಲ್ಲಾ! ನ್ಯಾಯದಿಂದ ತುಂಬಿ ಧರ್ಮಕ್ಕೆ ನೆಲೆಯಾಗಿದ್ದ ನಗರ ಈಗ ಕೊಲೆಪಾತಕರಿಗೆ ನೆಲೆಯಾಗಿದೆ.

¶ “ಆದರೆ ನೀನು ನಿನ್ನ ಸೌಂದರ್ಯದಲ್ಲಿಯೇ ನಂಬಿಕೆಯಿಟ್ಟು, ನಾನು ಪ್ರಸಿದ್ಧಳಾಗಿದ್ದೇನಲ್ಲಾ ಎಂದು ಉಬ್ಬಿಕೊಂಡು ವ್ಯಭಿಚಾರಮಾಡಿದಿ; ಹಾದುಹೋಗುವ ಪ್ರತಿಯೊಬ್ಬನ ಸಂಗಡ ಮಿತಿಮೀರಿ ವ್ಯಭಿಚಾರಮಾಡಿದೆ, ಪ್ರತಿಯೊಬ್ಬನ ಸಂಗಡ ವ್ಯಭಿಚಾರಕ್ಕೆ ಒಳಗಾದೆ.

ಅವರು ಉಣ್ಣುತ್ತಿದ್ದರೂ ತೃಪ್ತಿ ದೊರೆಯದು, ಹಾದರ ಮಾಡುತ್ತಿದ್ದರೂ ಪ್ರಜಾಭಿವೃದ್ಧಿಯಾಗದು; ಯೆಹೋವನ ಕಡೆಗೆ ಗಮನಿಸುವುದನ್ನು ಬಿಟ್ಟುಬಿಟ್ಟಿದ್ದಾರಷ್ಟೆ.

ಮುಖಂಡರು ಲಂಚಕ್ಕೆ ನ್ಯಾಯತೀರಿಸುತ್ತಾರೆ. ಯಾಜಕರು ಸಂಬಳಕ್ಕಾಗಿ ಉಪದೇಶಿಸುತ್ತಾರೆ. ಪ್ರವಾದಿಗಳು ಹಣಕ್ಕೋಸ್ಕರ ಕಣಿಹೇಳುತ್ತಾರೆ. ಆದರೂ ಯೆಹೋವನ ಮೇಲೆ ಭಾರ ಹಾಕಿ, “ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನಲ್ಲಾ, ನಮಗೆ ಯಾವ ಕೇಡೂ ಸಂಭವಿಸದು” ಅಂದುಕೊಳ್ಳುತ್ತಾರೆ.