TSK

TSK · ಹೋಶೇ 4:9

مراجع Treasury of Scripture Knowledge في ಕನ್ನಡ IRV.

العودة إلى المقطع

ಶಪಿಸುವುದು ಅವನಿಗೆ ಇಷ್ಟವಾಗಿತ್ತು, ಅದೇ ಅವನಿಗೆ ಬರಲಿ! ಆಶೀರ್ವದಿಸುವುದು ಅವನಿಗೆ ಇಷ್ಟವಿರಲ್ಲಿಲ್ಲ, ಅದು ಅವನಿಂದ ದೂರವಿರಲಿ!

ಶಿಷ್ಟನು ಭೂಮಿಯಲ್ಲಿ ತನ್ನ ಕ್ರಿಯಾಫಲವನ್ನು ಅನುಭವಿಸುವಲ್ಲಿ, ದುಷ್ಟನೂ, ಪಾಪಿಯೂ ದಂಡನೆಯನ್ನು ಅನುಭವಿಸುವರು ಎಂದು ಹೇಳಬೇಕಾಗಿಲ್ಲ.

ಆದಕಾರಣ ಯೆಹೋವನು ಇಸ್ರಾಯೇಲಿನಿಂದ ತಲೆ ಮತ್ತು ಬಾಲಗಳನ್ನು, ಖರ್ಜೂರದ ಕೊಂಬೆಗಳನ್ನು ಮತ್ತು ಬೇರುಗಳನ್ನು ಒಂದೇ ದಿನದಲ್ಲಿ ಕಡಿದು ಹಾಕುವನು.

ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ, ಯಾಜಕರು ಅವರಿಂದ ಅಧಿಕಾರ ಹೊಂದಿ ದೊರೆತನ ಮಾಡುತ್ತಾರೆ. ನನ್ನ ಜನರು ಇದನ್ನೇ ಪ್ರೀತಿಸುತ್ತಾರೆ; ಕಟ್ಟಕಡೆಗೆ ನೀವು ಏನು ಮಾಡುವಿರಿ?

ಪ್ರವಾದಿಗಳು ಭ್ರಷ್ಟರು, ಯಾಜಕರೂ ಭ್ರಷ್ಟರು. ಹೌದು ನನ್ನ ಆಲಯದಲ್ಲಿಯೇ ಅವರ ಕೆಟ್ಟತನವನ್ನು ಕಂಡಿದ್ದೇನೆ ಎಂದು ಯೆಹೋವನು ಅನ್ನುತ್ತಾನೆ.

¶ “‘ಇಸ್ರಾಯೇಲರು ನನ್ನನ್ನು ತೊರೆದು, ತಮ್ಮ ವಿಗ್ರಹಗಳ ಕಡೆಗೆ ತಿರುಗಿಕೊಂಡು ನನಗೆ ದೂರವಾಗಿ ಹೋದ ಲೇವಿಯರು ಸಹ ತಮ್ಮ ದೋಷಫಲವನ್ನು ಅನುಭವಿಸುವರು.

ಯೆಹೋವನು ಅವನನ್ನು ಕುರಿತು, “ಈ ಮಗುವಿಗೆ ಇಜ್ರೇಲ್ ಎಂಬ ಹೆಸರಿಡು; ಇಜ್ರೇಲಿನಲ್ಲಿ ಸುರಿಸಿದ ರಕ್ತಕ್ಕೆ ಪ್ರತಿಯಾಗಿ ಸ್ವಲ್ಪ ಕಾಲದೊಳಗೆ ನಾನು ಯೇಹು ವಂಶದವರಿಗೆ ಮುಯ್ಯಿ ತೀರಿಸಿ ಇಸ್ರಾಯೇಲ್ ಜನಾಂಗವನ್ನು ನಿರ್ನಾಮ ಮಾಡುವೆನು.

ಪೂರ್ವದಲ್ಲಿ ಗಿಬ್ಯದವರು ಕೆಡಿಸಿಕೊಂಡಂತೆ ಎಫ್ರಾಯೀಮ್ಯರು ತಮ್ಮನ್ನು ತೀರಾ ಕೆಡಿಸಿಕೊಂಡಿದ್ದಾರೆ. ದೇವರು ಅವರ ಅಧರ್ಮವನ್ನು ಜ್ಞಾಪಕಕ್ಕೆ ತಂದುಕೊಂಡು ಅವರ ಪಾಪಗಳಿಗೆ ಪ್ರತಿದಂಡನೆ ಮಾಡುವನು.

ಆದರೆ ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿದ ನನ್ನ ವಾಕ್ಯಗಳೂ ಮತ್ತು ವಿಧಿಗಳೂ ನಿಮ್ಮ ಪೂರ್ವಿಕರನ್ನು ಹಿಂದಟ್ಟಿ ಹಿಡಿದು ಶಾಶ್ವತವಾಗಿ ಉಳಿದಿದೆ. ಅವರು ತಿರುಗಿಕೊಂಡು, ಸೇನಾಧೀಶ್ವರ ಯೆಹೋವನಿಗೆ ‘ನಮ್ಮ ದುಷ್ಕೃತ್ಯಗಳಿಗೆ ತಕ್ಕ ಹಾಗೆ ನಮಗೆ ಏನು ಮಾಡಬೇಕೆಂದು ಸಂಕಲ್ಪಿಸಿದನೋ ಅದನ್ನು ನಮಗೆ ಮಾಡಿದ್ದಾನಲ್ಲಾ’” ಅಂದುಕೊಂಡರು.