TSK

TSK · ಹೋಶೇ 6:4

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಇಸ್ರಾಯೇಲ್ಯರು ಪುನಃ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದರು; ಆತನು ಅವರ ದ್ರೋಹದ ನಿಮಿತ್ತ ಮೋವಾಬ್ಯರ ಅರಸನಾದ ಎಗ್ಲೋನನನ್ನು ಅವರಿಗೆ ವಿರೋಧವಾಗಿ ಬಲಪಡಿಸಿದನು.

ಇಸ್ರಾಯೇಲಿಗೆ ಇಷ್ಟು ದಂಡನೆಯಾದರೂ ಯೆಹೂದವೆಂಬ ದ್ರೋಹಿಯಾದ ಅವಳ ತಂಗಿಯು ನನ್ನ ಕಡೆಗೆ ಪೂರ್ಣಮನದಿಂದಲ್ಲ, ಕಪಟದಿಂದಲೇ ನನ್ನ ಕಡೆ ತಿರುಗಿಕೊಂಡಿದ್ದಾಳೆ” ಎಂಬುದೇ ಯೆಹೋವನಾದ ನನ್ನ ನುಡಿ.

ಯೆಹೋವನು, “ನಾನು ನಿನ್ನನ್ನು ಹೇಗೆ ಕ್ಷಮಿಸಲಿ? ನಿನ್ನ ಜನರು ನನ್ನನ್ನು ಬಿಟ್ಟು ದೇವರಲ್ಲದವುಗಳ ಮೇಲೆ ಆಣೆಯಿಟ್ಟಿದ್ದಾರೆ. ನಾನು ಅವರಿಗೆ ಹೊಟ್ಟೆ ತುಂಬಾ ಆಹಾರಕೊಟ್ಟ ಮೇಲೂ ಅವರು ವ್ಯಭಿಚಾರ ಮಾಡಿದರು, ವ್ಯಭಿಚಾರಿಣಿಯರ ಮನೆಗಳಲ್ಲಿ ಗುಂಪುಕೂಡಿದರು.

ಈ ಜನರ ಹೃದಯವೋ ನನ್ನ ಅಧೀನ ತಪ್ಪಿ ತಿರುಗಿಬಿದ್ದಿದೆ; ಇವರು ನನ್ನ ಅಧೀನವನ್ನು ಮೀರಿ ಬಿಟ್ಟುಹೋಗಿದ್ದಾರೆ.

ನೀವೋ ಈಗಲೇ ಮನಮರುಗಿ ನಿಮ್ಮ ನಿಮ್ಮ ನೆರೆಹೊರೆಯವರಿಗೆ ವಿಮೋಚನೆಯನ್ನು ಪ್ರಕಟಿಸಿ ನನ್ನ ಚಿತ್ತಾನುಸಾರವಾಗಿ ನಡೆದಿರಿ. ನನ್ನ ಹೆಸರಿನಿಂದ ಖ್ಯಾತಿಗೊಂಡಿರುವ ಆಲಯದಲ್ಲಿ ನನ್ನ ಮುಂದೆ ಒಡಂಬಡಿಕೆ ಮಾಡಿಕೊಂಡಿರಿ.

ಎಫ್ರಾಯೀಮೇ, ನಾನು ನಿನ್ನನ್ನು ಹೇಗೆ ತ್ಯಜಿಸಲಿ! ಇಸ್ರಾಯೇಲೇ, ಹೇಗೆ ನಿನ್ನನ್ನು ಕೈಬಿಡಲಿ! ಅಯ್ಯೋ, ನಿನ್ನನ್ನು ಅದ್ಮಾದ ಗತಿಗೆ ಹೇಗೆ ತರಲಿ! ಚೆಬೋಯಿಮಿನಂತೆ ಹೇಗೆ ನಾಶಮಾಡಲಿ! ನನ್ನ ಮನಸ್ಸು ನನ್ನೊಳಗೆ ತಿರುಗಿತು, ಕರುಳು ತೀರಾ ಮರುಗಿತು.

‹ತನಗೆ ಬೇರಿಲ್ಲದ ಕಾರಣ ಇವನು ಸ್ವಲ್ಪ ಕಾಲ ಮಾತ್ರವೇ ಇದ್ದು ಆ ವಾಕ್ಯದ ನಿಮಿತ್ತವಾಗಿ ಸಂಕಟವಾಗಲಿ ಹಿಂಸೆಯಾಗಲಿ ಬಂದರೆ ಕೂಡಲೆ ಎಡವಿ ಬೀಳುತ್ತಾನೆ.›

¶ ತರುವಾಯ ಆತನು ಯೆರೂಸಲೇಮ್ ಪಟ್ಟಣದ ಸಮೀಪಕ್ಕೆ ಬಂದಾಗ ಆ ಪಟ್ಟಣವನ್ನು ನೋಡಿ ಅದರ ವಿಷಯವಾಗಿ ಕಣ್ಣೀರಿಡುತ್ತಾ,