TSK

TSK · ಹೋಶೇ 6:7

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಅದಕ್ಕಾತನು, “ನೀನು ಬೆತ್ತಲೆಯಾಗಿದ್ದೀಯೆಂದು ನಿನಗೆ ತಿಳಿಸಿದವರಾರು? ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಹಣ್ಣನ್ನು ತಿಂದಿದ್ದಿಯಾ?” ಎಂದು ಕೇಳಿದನು.

ಆತನು ತಮ್ಮ ಪೂರ್ವಿಕರಿಗೆ ಕೊಟ್ಟ ವಿಧಿನಿಬಂಧನೆಗಳನ್ನೂ, ತಮಗೆ ಹೇಳಿಸಿದ ಒಡಂಬಡಿಕೆಯನ್ನು ತಿರಸ್ಕರಿಸಿ, ವ್ಯರ್ಥವಾದ ದೇವತೆಗಳನ್ನು ಸೇವಿಸಿ ನಿಷ್ಪ್ರಯೋಜಕರಾದರು. ಸುತ್ತಣ ಜನಾಂಗಗಳನ್ನು ಅನುಸರಿಸಬಾರದೆಂದು ಯೆಹೋವನು ಆಜ್ಞಾಪಿಸಿದರೂ ಅವರು ಕೇಳದೆ, ಅವರನ್ನು ಅನುಸರಿಸಿದರು.

ಭೂನಿವಾಸಿಗಳು ದೈವಾಜ್ಞೆಗಳನ್ನು ಮೀರಿ, ನಿಯಮಗಳನ್ನು ಬದಲಾಯಿಸಿ, ಶಾಶ್ವತವಾದ ಒಡಂಬಡಿಕೆಯನ್ನು ಭಂಗಪಡಿಸಿದ್ದರಿಂದ ಭೂಮಿಯು ಅವರ ಹೆಜ್ಜೆಯಿಂದ ಅಪವಿತ್ರವಾಯಿತು.

ನೀನು ಕೇಳಿಲ್ಲ, ತಿಳಿದೂ ಇಲ್ಲ, ಪುರಾತನಕಾಲದಿಂದ ನಿನ್ನ ಕಿವಿಯು ತೆರೆದೇ ಇಲ್ಲ; ನೀನು ದೊಡ್ಡ ವಂಚಕನೆಂದೂ, ಗರ್ಭದಿಂದಲೇ ದ್ರೋಹಿಯೆಂದು ನಾನು ತಿಳಿದುಕೊಂಡಿದ್ದೇನೆ.

ಇಸ್ರಾಯೇಲ್ ವಂಶದವರೂ, ಯೆಹೂದ ವಂಶದವರೂ ನನಗೆ ಕೇವಲ ದ್ರೋಹವನ್ನು ಮಾಡಿರುತ್ತಾರೆ ಎಂದು ಯೆಹೋವನು ನುಡಿಯುತ್ತಾನೆ.

ಈ ಒಡಂಬಡಿಕೆಯು ನಾನು ಇವರ ಪೂರ್ವಿಕರನ್ನು ಕೈ ಹಿಡಿದು ಐಗುಪ್ತ ದೇಶದೊಳಗಿಂದ ಕರೆದುಕೊಂಡು ಬಂದಾಗ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ; ನಾನು ಅವರಿಗೆ ಪತಿಯಾಗಿದ್ದರೂ ಆ ನನ್ನ ಒಡಂಬಡಿಕೆಯನ್ನು ಅವರು ಮೀರಿದರಷ್ಟೆ.

ಅವು ಯೆಹೋವನ ಮಕ್ಕಳಲ್ಲದ ಮಕ್ಕಳನ್ನು ಪಡೆದು ಆತನಿಗೆ ದ್ರೋಹಮಾಡಿವೆ; ಅವುಗಳನ್ನೂ, ಅವುಗಳ ಭೂಸ್ವಾಸ್ತ್ಯಗಳನ್ನೂ ಈ ಅಮಾವಾಸ್ಯೆಯು ನುಂಗಿಬಿಡುವುದು.

‘ಈ ಒಡಂಬಡಿಕೆಯು ನಾನು ಇವರ ಪೂರ್ವಿಕರನ್ನು ಕೈಹಿಡಿದು ಐಗುಪ್ತ ದೇಶದೊಳಗಿನಿಂದ ಕರೆದುಕೊಂಡು ಬಂದ ದಿನದಲ್ಲಿ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯ ಹಾಗಲ್ಲ. ಏಕೆಂದರೆ ಅವರು ನನ್ನ ಒಡಂಬಡಿಕೆಯಲ್ಲಿ ಸ್ಥಿರವಾಗಿ ನಿಲ್ಲಲಿಲ್ಲವಾದ್ದರಿಂದ ನಾನು ಅವರನ್ನು ಲಕ್ಷಿಸಲಿಲ್ಲ’ ಎಂದು ಕರ್ತನು ಹೇಳುತ್ತಾನೆ.