TSK

TSK · ಹೋಶೇ 7:12

مراجع Treasury of Scripture Knowledge في ಕನ್ನಡ IRV.

العودة إلى المقطع

¶ “ಆದರೆ ನೀವು ನನ್ನ ಮಾತನ್ನು ಕೇಳದೆ ಈ ಆಜ್ಞೆಗಳನ್ನೆಲ್ಲಾ ಅನುಸರಿಸದೆ,

¶ “ಮುಂದೆ ಹುಟ್ಟುವ ನಿಮ್ಮ ಸಂತತಿಯವರೂ ದೇಶಾಂತರಗಳಿಂದ ಬರುವ ಅನ್ಯರೂ ನಿಮ್ಮ ದೇಶಕ್ಕೆ ಯೆಹೋವನು ಉಂಟುಮಾಡಿದ ರೋಗ ಮತ್ತು ಉಪದ್ರವಗಳನ್ನು ಕಂಡು ಆಶ್ಚರ್ಯಪಡುವರು.

ಆದರೆ ಯೆಶುರೂನು ಚೆನ್ನಾಗಿ ತಿಂದು, ಕೊಬ್ಬಿ, ತನ್ನನ್ನು ಸೃಷ್ಟಿಸಿದ ದೇವರನ್ನು ಬಿಟ್ಟು ತನ್ನ ಆಶ್ರಯದುರ್ಗವನ್ನು ತಿರಸ್ಕರಿಸಿದನು.

ಹೀಗಾದರೆ ನನ್ನ ನ್ಯಾಯವನ್ನು ತಿರುಗಿಸಿಬಿಟ್ಟು ನನ್ನ ಸುತ್ತಲೂ ತನ್ನ ಬಲೆಯನ್ನೊಡ್ಡಿದವನು ದೇವರೇ ಎಂದು ತಿಳಿದುಕೊಳ್ಳಿರಿ.

¶ ಯೆಹೋವನು ಹೀಗೆನ್ನುತ್ತಾನೆ, “ಇಗೋ, ನನ್ನ ಜನರನ್ನು ಹಿಡಿಯುವುದಕ್ಕೆ ಬಹು ಮಂದಿ ಬೆಸ್ತರನ್ನು ಕರೆಯಿಸುವೆನು; ಆ ಮೇಲೆ ಎಲ್ಲಾ ಬೆಟ್ಟಗುಡ್ಡಗಳಿಂದಲೂ, ಬಂಡೆಗಳ ಸಂದುಗೊಂದುಗಳಿಂದಲೂ ಅವರನ್ನು ಹೊರಡಿಸಿ, ಬೇಟೆಯಾಡುವುದಕ್ಕೆ ಬಹುಜನ ಬೇಡರನ್ನು ಕರೆಯಿಸುವೆನು.

ನಾನು ಅವನಿಗೆ ನನ್ನ ಬಲೆಯೊಡ್ಡುವೆನು, ನಾನು ಹಾಕಿದ ಉರುಲಿನಲ್ಲಿ ಸಿಕ್ಕಿಬೀಳುವನು; ಕಸ್ದೀಯರ ದೇಶವಾದ ಬಾಬಿಲೋನಿಗೆ ಅವನನ್ನು ಒಯ್ಯುವೆನು, ಅಲ್ಲೇ ಇದ್ದು ಸಾಯುವನು, ಆದರೂ ಆ ದೇಶವನ್ನು ನೋಡುವುದಿಲ್ಲ.

¶ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಗುಂಪಾಗಿ ಕೂಡಿದ ಬಹು ಜನಾಂಗಗಳವರ ಮೇಲೆ ನಾನು ನನ್ನ ಬಲೆಯನ್ನು ಬೀಸುವೆನು; ಅವರು ನಿನ್ನನ್ನು ಆ ಬಲೆಯಿಂದ ಮೇಲಕ್ಕೆ ಎಳೆಯುವರು.

‹ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದ್ದರಿಂದ ನೀನು ಜಾಗರೂಕನಾಗಿರು. ಮಾನಸಾಂತರ ಹೊಂದಿ ದೇವರ ಕಡೆಗೆ ತಿರಿಗಿಕೋ.›