TSK

TSK · ಹೋಶೇ 7:5

مراجع Treasury of Scripture Knowledge في ಕನ್ನಡ IRV.

العودة إلى المقطع

ಬೇತೇಲಿನ ಯಜ್ಞವೇದಿಯ ಬಳಿಯಲ್ಲಿ ನಿಂತಿದ್ದ ಅರಸನು ಆ ದೇವರ ಮನುಷ್ಯನು ವೇದಿಗೆ ವಿರುದ್ಧವಾಗಿ ನುಡಿದಿದ್ದನ್ನು ಕೇಳಿ, “ಕೈಚಾಚಿ ಅವನನ್ನು ಹಿಡಿಯಿರಿ” ಎಂದು ಆಜ್ಞಾಪಿಸಿದನು. ಕೂಡಲೇ ಅವನ ಕೈ ಬತ್ತಿ ಹೋಯಿತು. ಅವನು ಅದನ್ನು ಹಿಂದಕ್ಕೆ ತೆಗೆದುಕೊಳ್ಳಲು ಅಗಲ್ಲಿಲ್ಲ.

ಊರ ಬಾಗಿಲಲ್ಲಿ ಕುಳಿತುಕೊಳ್ಳುವವರ ಆಡು ಮಾತಿಗೆ ಗುರಿಯಾಗಿದ್ದೇನೆ. ಕುಡುಕರು ನನ್ನ ವಿಷಯವನ್ನು ಹಾಡಿ ಪರಿಹಾಸ್ಯ ಮಾಡುತ್ತಾರೆ.

ದ್ರಾಕ್ಷಾರಸವು ಪರಿಹಾಸ್ಯ, ಮದ್ಯವು ಕೂಗಾಟ, ಇವುಗಳಿಂದ ದಾರಿತಪ್ಪಿ ಹೋಗುವವನು ಜ್ಞಾನಿಯಲ್ಲ.

ಅಯ್ಯೋ, ಮದ್ಯದ ಗೀಳಿನಿಂದಲೇ ಮುಂಜಾನೆ ಎದ್ದು, ಸಂಜೆಯಾದ ಮೇಲೂ ದ್ರಾಕ್ಷಾರಸದಿಂದ ಅಮಲೇರಿದವರಾಗಿ ಕಾಲ ಕಳೆಯುವವರ ಗತಿಯನ್ನು ಏನೆಂದು ಹೇಳಲಿ!

ಅಯ್ಯೋ, ಕುಡುಕರಾದ ಎಫ್ರಾಯೀಮ್ಯರ ಮಹಿಮೆಯ ಕಿರೀಟದ ಗತಿಯೇ! ದ್ರಾಕ್ಷಾರಸಕ್ಕೆ ಸೋತು ಹೋದವರ ಫಲವತ್ತಾದ ಕಣಿವೆಗೆ ಶ್ರೇಷ್ಠ ಶಿರೋಭೂಷಣವಾಗಿದ್ದು, ಬಾಡುತ್ತಿರುವ ಹೂವಿನ ಪಾಡೇ!

¶ ರಾಜನಾದ ಬೇಲ್ಶಚ್ಚರನು ತನ್ನ ರಾಜ್ಯದ ಮುಖಂಡರಲ್ಲಿ ಸಾವಿರ ಮಂದಿಗೆ ಔತಣವನ್ನು ಏರ್ಪಡಿಸಿ ಆ ಸಾವಿರ ಜನರ ಕಣ್ಣೆದುರಿಗೆ ತಾನೂ ದ್ರಾಕ್ಷಾರಸವನ್ನು ಕುಡಿದನು.

‘ನಿನ್ನ ರೋಷವನ್ನು ಪಾನಕಕ್ಕೆ ಬೆರಸಿ ನಿನ್ನ ನೆರೆಯವನಿಗೆ ಕುಡಿಸಿ, ಅವನ ಬೆತ್ತಲೆತನವನ್ನು ನೋಡಬೇಕೆಂದು ಅವರನ್ನು ಅಮಲೇರಿಸಿದವನೇ, ನಿನ್ನ ಗತಿಯನ್ನು ಏನು ಹೇಳಲಿ!

¶ ಆದರೆ ಹೆರೋದ್ಯಳಿಗೆ ಅನುಕೂಲವಾದ ದಿನ ಬಂದಿತು; ಹೇಗೆಂದರೆ ಹೆರೋದನು ತನ್ನ ಜನ್ಮದಿನದಂದು ಪ್ರಭುಗಳಿಗೂ, ಸಹಸ್ರಾಧಿಪತಿಗಳಿಗೂ, ಗಲಿಲಾಯ ಸೀಮೆಯ ಮುಖ್ಯಸ್ಥರಿಗೂ ಔತಣವನ್ನು ಏರ್ಪಡಿಸಿದಾಗ,

ನೀವು ಬಂಡುತನ, ದುರಾಶೆ, ಕುಡುಕತನ, ದುಂದೌತಣ, ಮದ್ಯಪಾನ ಗೋಷ್ಠಿ, ಅಸಹ್ಯವಾದ ವಿಗ್ರಹಾರಾಧನೆ, ಈ ಮೊದಲಾದವುಗಳನ್ನು ನಡಿಸುವುದರಲ್ಲಿಯೂ ಅನ್ಯಜನರಿಗೆ ಇಷ್ಟವಾದ ದುಷ್ಕೃತ್ಯಗಳನ್ನು ಮಾಡುವುದರಲ್ಲಿಯೂ ಕಾಲಕಳೆದದ್ದು ಸಾಕು.