TSK

TSK · ಯೆಶಾಯ 1:17

مراجع Treasury of Scripture Knowledge في ಕನ್ನಡ IRV.

العودة إلى المقطع

ಕುಗ್ಗಿದವರ ಮತ್ತು ಅನಾಥರ ನ್ಯಾಯವನ್ನು ಸ್ಥಾಪಿಸಿರಿ, ದುಃಖಿತರ ಮತ್ತು ದರಿದ್ರರ ನೀತಿಯನ್ನು ಉಳಿಸಿರಿ.

ನಿನ್ನ ಅಧಿಕಾರಿಗಳು ದ್ರೋಹಿಗಳೂ, ಕಳ್ಳರ ಗೆಳೆಯರೂ ಆಗಿದ್ದಾರೆ; ಪ್ರತಿಯೊಬ್ಬನೂ ಕಾಣಿಕೆಗಳನ್ನು ಪ್ರೀತಿಸಿ, ಲಂಚಗಳನ್ನು ಹುಡುಕುವನು; ಅನಾಥರಿಗೆ ನ್ಯಾಯತೀರಿಸುವುದಿಲ್ಲ; ವಿಧವೆಯರ ವ್ಯಾಜ್ಯವು ಅವರ ಮನಸ್ಸಿಗೆ ಬಾರದು.

ಯೆಹೋವನು, ನೀತಿ, ನ್ಯಾಯಗಳನ್ನು ಆಚರಿಸಿರಿ, ಸುಲಿಗೆಯಾದವನನ್ನು ದೋಚಿಕೊಂಡವನ ಕೈಯಿಂದ ಬಿಡಿಸಿರಿ. ವಿದೇಶಿ, ಅನಾಥ, ವಿಧವೆ ಇವರಿಗೆ ಯಾವ ಅನ್ಯಾಯವನ್ನೂ ಮತ್ತು ಹಿಂಸೆಯನ್ನೂ ಮಾಡಬೇಡಿರಿ; ನಿರ್ದೋಷಿಯ ರಕ್ತವನ್ನು ಈ ಸ್ಥಳದಲ್ಲಿ ಸುರಿಸಬೇಡಿರಿ” ಎಂದು ಹೇಳುತ್ತಾನೆ.

ನಿನ್ನವರು ತಾಯಿ ತಂದೆಗಳನ್ನು ತುಚ್ಛೀಕರಿಸಿದ್ದಾರೆ, ನಿನ್ನವರು ವಿದೇಶಿಗಳನ್ನು ಬಾಧಿಸಿದ್ದಾರೆ, ನಿನ್ನವರು ಅನಾಥರನ್ನೂ, ವಿಧವೆಯರನ್ನೂ ಹಿಂಸಿಸಿದ್ದಾರೆ.

ಆದಕಾರಣ, ಅರಸನೇ, ಈ ನನ್ನ ಬುದ್ಧಿವಾದವು ನಿನಗೆ ಒಪ್ಪಿಗೆಯಾಗಲಿ, ನೀನು ಧರ್ಮವನ್ನು ಆಚರಿಸಿ ನಿನ್ನ ಪಾಪಗಳನ್ನು ನಾಶಗೊಳಿಸು, ಬಡವರಿಗೆ ಕರುಣೆಯನ್ನು ತೋರಿಸಿ ನಿನ್ನ ಅಪರಾಧಗಳನ್ನು ಧ್ವಂಸಮಾಡು; ಇದರಿಂದ ನಿನ್ನ ನೆಮ್ಮದಿಯ ಕಾಲವು ಹೆಚ್ಚಾದೀತು” ಎಂದು ಅರಿಕೆ ಮಾಡಿದನು.

ಯೆಹೋವನ ನಿಯಮವನ್ನು ಕೈಕೊಂಡು ನಡೆಯುವ ಲೋಕದ ದೀನರೇ, ನೀವೆಲ್ಲರೂ ಯೆಹೋವನ ನೀತಿಯನ್ನು ಅನುಸರಿಸಿರಿ, ಧರ್ಮವನ್ನು ಅಭ್ಯಾಸಿಸಿರಿ, ನಮ್ರತೆಯನ್ನು ಹೊಂದಿಕೊಳ್ಳಿರಿ; ಬಹುಶಃ ಯೆಹೋವನ ಸಿಟ್ಟಿನ ದಿನದಲ್ಲಿ ನೀವು ಮರೆಯಾಗುವಿರಿ.

¶ “ನೀವು ಮಾಡಬೇಕಾದ ಕಾರ್ಯಗಳು ಇವೇ. ಪ್ರತಿಯೊಬ್ಬನೂ ತನ್ನ ನೆರೆಯವನ ಸಂಗಡ ನಿಜವನ್ನೇ ಆಡಲಿ; ನಿಮ್ಮ ಚಾವಡಿಗಳಲ್ಲಿ ಸತ್ಯವನ್ನೂ, ಸಮಾಧಾನವಾದ ನ್ಯಾಯವನ್ನೂ ಸ್ಥಾಪಿಸಿರಿ;