ನಿಮ್ಮ ಭೂಮಿಯು ಫಲವತ್ತಾಗುವುದು, ನೀವು ಸಮೃದ್ಧಿಯಾಗಿ ಊಟಮಾಡುವಿರಿ ಮತ್ತು ಆ ದೇಶದಲ್ಲಿ ನೀವು ನಿರ್ಭಯವಾಗಿ ವಾಸಮಾಡುವಿರಿ.
TSK
TSK · ಯೆಶಾಯ 1:19
مراجع Treasury of Scripture Knowledge في ಕನ್ನಡ IRV.
ಕಣತುಳಿಸುವ ಕೆಲಸವು ದ್ರಾಕ್ಷಿಯ ಬೆಳೆಯ ಕಾಲದ ತನಕ ಮತ್ತು ದ್ರಾಕ್ಷಿಯ ಬೆಳೆಯನ್ನು ಕೂಡಿಸುವ ಕೆಲಸವು ಬಿತ್ತನೆಯ ಕಾಲದ ವರೆಗೂ ನಡೆಯುವವು, ನೀವು ಸಮೃದ್ಧಿಯಾಗಿ ಊಟ ಮಾಡುವಿರಿ, ನಿಮ್ಮ ದೇಶದಲ್ಲಿ ಸುರಕ್ಷಿತವಾಗಿ ವಾಸಮಾಡುವಿರಿ.
ನೀವು ನೀತಿವಂತರಿಗೆ, “ನಿಮಗೆ ಒಳ್ಳೆಯದಾಗಲಿ” ಎಂದು ಹೇಳಿರಿ, ಅವರು ತಮ್ಮ ಒಳ್ಳೆಯ ಫಲವನ್ನು ಅನುಭವಿಸುವರು.
ಆಹಾರವಲ್ಲದ್ದಕ್ಕೆ ಹಣವನ್ನು ಏಕೆ ವ್ಯರ್ಥ ಮಾಡುತ್ತೀರಿ? ತೃಪ್ತಿಗೊಳಿಸದ ಪದಾರ್ಥಕ್ಕೆ ನಿಮ್ಮ ದುಡಿತವನ್ನು ವೆಚ್ಚಮಾಡುವುದೇಕೆ? ಕಿವಿಗೊಟ್ಟು ನನ್ನ ಮಾತನ್ನು ಕೇಳಿರಿ, ಒಳ್ಳೆಯದನ್ನೇ ಉಂಡು ಮೃಷ್ಟಾನ್ನದಲ್ಲಿ ಆನಂದಪಡಿರಿ.
ಆಗ ನೀವು ಯೆಹೋವನಲ್ಲಿ ಉಲ್ಲಾಸಪಡುವಿರಿ ಮತ್ತು ನಾನು ನಿಮ್ಮನ್ನು ಭೂಮಿಯ ಉನ್ನತವಾದ ಪ್ರದೇಶಗಳ ಮೇಲೆ ಹತ್ತಿಸಿ, ನಿಮ್ಮ ಪಿತೃವಾದ ಯಾಕೋಬನ ಸ್ವತ್ತನ್ನು ನೀವು ಅನುಭವಿಸುವಂತೆ ಮಾಡುವೆನು. ಯೆಹೋವನೇ ಇದನ್ನು ನುಡಿದಿದ್ದಾನೆ.
ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಹೀಗೆನ್ನುತ್ತಾನೆ, ನೀವು ನಿಮ್ಮ ನಡತೆಯನ್ನೂ, ಕೃತ್ಯಗಳನ್ನೂ ತಿದ್ದಿಕೊಳ್ಳಿರಿ; ಹೀಗೆ ಮಾಡಿದರೆ ನಾನು ನಿಮ್ಮನ್ನು ಈ ಸ್ಥಳದಲ್ಲಿ ನೆಲೆಗೊಳಿಸುವೆನು.
ಎಫ್ರಾಯೀಮು ಹೀಗೆ ಪ್ರಲಾಪಿಸಿಕೊಳ್ಳುವುದನ್ನು ಕೇಳಿದ್ದೇನೆ, ‘ನೀನು ನನ್ನನ್ನು ಶಿಕ್ಷಿಸಿದ್ದಿ, ಪಳಗದ ಹೋರಿಯಂತೆ ಶಿಕ್ಷೆಯನ್ನು ಅನುಭವಿಸಿದೆನು. ನನ್ನನ್ನು ತಿರುಗಿಸು, ನೀನು ತಿರುಗಿಸಿದ ಹಾಗೆ ತಿರುಗುವೆನು; ನೀನು ನನ್ನ ದೇವರಾದ ಯೆಹೋವನಲ್ಲವೆ.
ನೀವು ಹೊಟ್ಟೆ ತುಂಬಾ ಊಟಮಾಡಿ ತೃಪ್ತಿಗೊಂಡು, ನಿಮಗಾಗಿ ಅದ್ಭುತಕಾರ್ಯಗಳನ್ನು ಮಾಡಿದ ನಿಮ್ಮ ದೇವರಾದ ಯೆಹೋವನ ನಾಮವನ್ನು ಕೊಂಡಾಡುವಿರಿ. ನನ್ನ ಜನರಿಗೆ ಎಂದಿಗೂ ಆಶಾಭಂಗವಾಗದು.
ಇದಲ್ಲದೆ ಆತನು ಪರಿಪೂರ್ಣನಾಗಿ, ತನಗೆ ವಿಧೇಯರಾಗಿರುವ ಎಲ್ಲರಿಗೂ ನಿತ್ಯ ರಕ್ಷಣೆಗೆ ಕಾರಣನಾದನು.