¶ ಇಸ್ರಾಯೇಲ ಜನರು ತಮಗೆ ದುರಾವಸ್ಥೆ ಉಂಟಾಯಿತೆಂದು ಯೆಹೋವನಿಗೆ ಕೇಳಿಸುವಂತೆ ಗುಣುಗುಟ್ಟುವವರಾದರು. ಅದಕ್ಕೆ ಆತನು ಕೋಪಗೊಂಡು ಅವರ ಮಧ್ಯದಲ್ಲಿ ಬೆಂಕಿಯನ್ನು ಉಂಟುಮಾಡಿದ್ದರಿಂದ ಪಾಳೆಯದ ಕಡೇ ಭಾಗದಲ್ಲಿದ್ದವರು ಸುಟ್ಟುಹೋದರು.
TSK
TSK · ಯೆಶಾಯ 10:17
مراجع Treasury of Scripture Knowledge في ಕನ್ನಡ IRV.
ನಿಮ್ಮ ದೇವರಾದ ಯೆಹೋವನು ತನಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದೆ ಉರಿಯುವ ಬೆಂಕಿಯಂತೆ ದ್ರೋಹಿಗಳನ್ನು ದಹಿಸಿಬಿಡುವವನಾಗಿದ್ದಾನೆಂದು ತಿಳಿಯಿರಿ.
ನೀನು ಪ್ರತ್ಯಕ್ಷನಾಗುವಾಗ ಉರಿಯುವ ಕುಲುಮೆಯಂತಿದ್ದು ಅವರನ್ನು ಬೂದಿ ಮಾಡುವಿ. ಯೆಹೋವನು ಮಹಾಕೋಪದಿಂದ ಅವರನ್ನು ನಾಶ ಮಾಡುವನು; ಆತನ ಕೋಪಾಗ್ನಿ ಅವರನ್ನು ದಹಿಸಿಬಿಡುವುದು.
ನಮ್ಮ ದೇವರು ಪ್ರತ್ಯಕ್ಷನಾಗುವನು, ಎಷ್ಟು ಮಾತ್ರವೂ ಸುಮ್ಮನಿರುವುದಿಲ್ಲ; ಆತನ ಮುಂಭಾಗದಲ್ಲಿ ಬೆಂಕಿ ಪ್ರಜ್ವಲಿಸುತ್ತದೆ; ಆತನ ಸುತ್ತಲು ಬಿರುಗಾಳಿ ಬೀಸುತ್ತದೆ.
ಯೆಹೋವ ದೇವರು ಸೂರ್ಯನೂ, ಗುರಾಣಿಯೂ ಆಗಿದ್ದಾನಲ್ಲಾ. ಯೆಹೋವನು ಕೃಪೆಯನ್ನೂ, ಘನವನ್ನೂ ಅನುಗ್ರಹಿಸುವನು; ಆತನು ಸದ್ಭಕ್ತರಿಗೆ ಯಾವ ಶುಭವನ್ನು ದಯಪಾಲಿಸದೆ ಇದ್ದಾನೋ?
ದುಷ್ಟತನವು ಬೆಂಕಿಯಂತೆ ಉರಿದು, ಮುಳ್ಳು ಗಿಡಗಳನ್ನು ನುಂಗಿಬಿಟ್ಟು, ಅರಣ್ಯದ ಪೊದೆಗಳನ್ನು ಸುಟ್ಟು ಬಿಡುತ್ತದೆ, ಅವು ಹೊಗೆ ಹೊಗೆಯಾಗಿ ಸುತ್ತಿಕೊಂಡು ಮೇಲಕ್ಕೆ ಏರುತ್ತದೆ.
ಇಗೋ, ಯೆಹೋವನ ನಾಮವು ದೂರದಿಂದ ಬರುತ್ತದೆ; ಆತನ ಕೋಪವು ಬೆಂಕಿಯಂತೆ ಉರಿಯುತ್ತದೆ, ಅದರಿಂದೇಳುವ ಹೊಗೆಯು ದಟ್ಟವಾಗಿದೆ; ಆತನ ತುಟಿಗಳು ರೋಷದಿಂದ ತುಂಬಿವೆ, ಆತನ ನಾಲಿಗೆಯು ನುಂಗುವ ಅಗ್ನಿಯಂತಿದೆ.
¶ “ಚೀಯೋನಿನಲ್ಲಿರುವ ಪಾಪಿಗಳು ಹೆದರುತ್ತಾರೆ. ಆ ಭ್ರಷ್ಟರು ನಡುಕಕ್ಕೆ ಒಳಗಾಗಿ, ನಮ್ಮಲ್ಲಿ ಯಾರು ನುಂಗುವ ಅಗ್ನಿಯ ಸಂಗಡ ವಾಸಿಸಬಲ್ಲರು? ನಮ್ಮಲ್ಲಿ ಯಾರು ಸದಾ ಉರಿಯುವ ಜ್ವಾಲೆಗಳೊಡನೆ ತಂಗುವರು” ಎಂದುಕೊಳ್ಳುತ್ತಾರೆ.
¶ ಆಗ ಯೆಹೋವನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿ ಸೈನಿಕರನ್ನು ಸಂಹರಿಸಿದನು. ಬೆಳಿಗ್ಗೆ ಎದ್ದು ನೋಡುವಲ್ಲಿ ಅವರೆಲ್ಲರು ಹೆಣಗಳಾಗಿದ್ದರು.
ಆಹಾ, ನೀನು ಆಕಾಶವನ್ನು ಸೀಳಿ ಇಳಿದು ಬರಬಾರದೇ! ನಿನ್ನ ದರ್ಶನವು ಉಂಟಾಗಿ ಪರ್ವತಗಳು ಅಗಲಿದರೆ ಎಷ್ಟೋ ಒಳ್ಳೆಯದು!
“ಅವರು ಹೊರಗೆ ಹೋಗಿ ನನಗೆ ದ್ರೋಹ ಮಾಡಿದವರ ಹೆಣಗಳನ್ನು ನೋಡುವರು; ಅವುಗಳನ್ನು ಕಡಿಯುವ ಹುಳವು ಸಾಯುವುದಿಲ್ಲ, ಸುಡುವ ಬೆಂಕಿಯು ಆರುವುದಿಲ್ಲ; ಅವುಗಳು ಲೋಕದವರಿಗೆಲ್ಲಾ ಅಸಹ್ಯವಾಗಿರುವವು.”
ಹೀಗಿರಲು ಕರ್ತನಾದ ಯೆಹೋವನ ಈ ಮಾತನ್ನು ಕೇಳಿರಿ, “ಆಹಾ, ನನ್ನ ಕೋಪವೆಂಬ ರೋಷಾಗ್ನಿಯು ಈ ಸ್ಥಳದಲ್ಲಿ ಸುರಿಯಲ್ಪಡುವುದು; ಮನುಷ್ಯರ ಮೇಲೆಯೂ, ಪಶುಗಳ ಮೇಲೆಯೂ, ಕಾಡುಮರಗಳ ಮೇಲೆಯೂ, ಭೂಮಿಯ ಬೆಳೆಯ ಮೇಲೆಯೂ ಅದನ್ನು ಸುರಿಯುವೆನು; ಅದು ಆರದೆ ದಹಿಸುವುದು.”
ಆತನ ವೈರಿಗಳು ಮುಳ್ಳುಗಳಂತೆ ಹೆಣೆದುಕೊಂಡಿದ್ದರೂ, ಮಧ್ಯಪಾನದಲ್ಲೇ ಮತ್ತರಾಗಿ ಮುಳುಗಿಹೋಗಿದ್ದರೂ, ಒಣಗಿದ ಹುಲ್ಲಂತೆ ಬೆಂಕಿಗೆ ತುತ್ತಾಗುವರು.
¶ “ಇಗೋ, ಯೆಹೋವನ ದಿನವು ಬರುತ್ತಿದೆ, ಒಲೆಯಂತೆ ಉರಿಯುತ್ತಿದೆ; ಸಕಲ ಅಹಂಕಾರಿಗಳೂ, ದುಷ್ಕರ್ಮಿಗಳೂ ಒಣಹುಲ್ಲಿನಂತೆ ಇರುವರು. ಬರುತ್ತಿರುವ ಆ ದಿನವು ಅವರಿಗೆ ಅಗ್ನಿಪ್ರಳಯವಾಗುವುದು. ಬುಡ, ರೆಂಬೆಗಳಾವುದನ್ನೂ ಉಳಿಸದು.
ಯೇಸು ಕರ್ತನು ತನ್ನ ಶಕ್ತಿಯುತ ದೇವದೂತರೊಂದಿಗೆ ಅಗ್ನಿ ಜ್ವಾಲೆಗಳ ಮೂಲಕ ಪರಲೋಕದಿಂದ ಪ್ರತ್ಯಕ್ಷನಾಗುವ ಕಾಲದಲ್ಲಿ ಅದನ್ನು ಕೊಡುವನು.
ಪಟ್ಟಣಕ್ಕೆ ಬೆಳಕು ಕೊಡಲು ಸೂರ್ಯನಾಗಲಿ ಚಂದ್ರನಾಗಲಿ ಬೇಕಾಗಿರಲಿಲ್ಲ, ಏಕೆಂದರೆ ಅದಕ್ಕೆ ದೇವರ ಮಹಿಮೆಯೇ ಪ್ರಕಾಶವನ್ನು ಕೊಡುತ್ತಿತ್ತು. ಯಜ್ಞದ ಕುರಿಮರಿಯಾದಾತನೇ ಅದರ ದೀಪವು.