TSK

TSK · ಯೆಶಾಯ 10:18

مراجع Treasury of Scripture Knowledge في ಕನ್ನಡ IRV.

العودة إلى المقطع

ನೀನು ನಿನ್ನ ದೂತರ ಮುಖಾಂತರವಾಗಿ ಕರ್ತನನ್ನು ನಿಂದಿಸಿ, ರಥಸಮೂಹದೊಡನೆ ಪರ್ವತಶಿಖರಗಳನ್ನು ಹತ್ತಿದ್ದೇನೆ. ಲೆಬನೋನಿನ ದುರ್ಗಮಸ್ಥಳಗಳಿಗೆ ಹೋಗಿದ್ದೇನೆ. ಅದರ ಎತ್ತರವಾದ ದೇವದಾರುವೃಕ್ಷಗಳನ್ನೂ ಶ್ರೇಷ್ಠವಾದ ತುರಾಯಿಮರಗಳನ್ನೂ ಕಡಿದುಬಿಟ್ಟಿದ್ದೇನೆ. ಅಲ್ಲಿನ ಬಹು ದೂರ ನಿವಾಸಸ್ಥಳಗಳನ್ನೂ, ಉದ್ಯಾನವನಗಳನ್ನೂ ಪ್ರವೇಶಿಸಿದ್ದೇನೆ.

ದುಷ್ಟತನವು ಬೆಂಕಿಯಂತೆ ಉರಿದು, ಮುಳ್ಳು ಗಿಡಗಳನ್ನು ನುಂಗಿಬಿಟ್ಟು, ಅರಣ್ಯದ ಪೊದೆಗಳನ್ನು ಸುಟ್ಟು ಬಿಡುತ್ತದೆ, ಅವು ಹೊಗೆ ಹೊಗೆಯಾಗಿ ಸುತ್ತಿಕೊಂಡು ಮೇಲಕ್ಕೆ ಏರುತ್ತದೆ.

ನಿಮ್ಮ ದುಷ್ಕೃತ್ಯಗಳಿಗೆ ಪ್ರತಿಫಲವಾಗಿ ನಿಮ್ಮನ್ನು ದಂಡಿಸುವೆನು; ನಿಮ್ಮ ಪುರವೆಂಬ ವನಕ್ಕೆ ಬೆಂಕಿ ಹಚ್ಚುವೆನು, ಅದು ಸುತ್ತುಮುತ್ತಣದ ಪ್ರದೇಶವನ್ನೆಲ್ಲಾ ನುಂಗಿಬಿಡುವುದು.