TSK

TSK · ಯೆಶಾಯ 10:28

مراجع Treasury of Scripture Knowledge في ಕನ್ನಡ IRV.

العودة إلى المقطع

ತರುವಾಯ ಅವರು ತಮ್ಮ ಹೆಂಡತಿ ಮಕ್ಕಳನ್ನೂ, ಕುರಿದನ ಮೊದಲಾದ ಸೊತ್ತನ್ನೂ ಮುಂದಾಗಿ ಕಳುಹಿಸಿ ತಾವು ಹಿಂದಿನಿಂದ ಹೊರಟರು.

ಆಗ ಫಿಲಿಷ್ಟಿಯರು ಇಸ್ರಾಯೇಲರೊಡನೆ ಯುದ್ಧಮಾಡುವುದಕ್ಕೋಸ್ಕರ ಮೂವತ್ತು ಸಾವಿರ ರಥಬಲವನ್ನೂ, ಆರು ಸಾವಿರ ಅಶ್ವಬಲವನ್ನೂ, ಸಮುದ್ರದ ಮರಳಿನಷ್ಟು ಅಸಂಖ್ಯವಾದ ಕಾಲಾಳುಗಳನ್ನೂ ತೆಗೆದುಕೊಂಡು ಬಂದು ಬೇತಾವೆನಿನ ಪೂರ್ವದಿಕ್ಕಿನಲ್ಲಿರುವ ಮಿಕ್ಮಾಷಿನಲ್ಲಿ ಪಾಳೆಯಮಾಡಿಕೊಂಡರು.

ಸೌಲನಾದರೋ ಗಿಬೆಯ ಪ್ರಾಂತ್ಯದ ಅಂತ್ಯಭಾಗವಾಗಿರುವ ಮಿಗ್ರೋನಿನಲ್ಲಿನ ಒಂದು ದಾಳಿಂಬೆ ವೃಕ್ಷದ ಅಡಿಯಲ್ಲಿ ತಂಗಿದ್ದನು. ಅವನ ಜೊತೆಯಲ್ಲಿ ಸುಮಾರು ಆರು ನೂರು ಮಂದಿ ಸೈನಿಕರೂ,

ಆ ದಿನ ಜನರು ಮಿಕ್ಮಾಷಿನಿಂದ ಅಯ್ಯಾಲೋನಿನ ವರೆಗೆ ಫಿಲಿಷ್ಟಿಯರನ್ನು ಹೊಡೆದು ಬಹಳವಾಗಿ ದಣಿದಿದ್ದರು.

¶ ಬೆನ್ಯಾಮೀನ್ ಕುಲದವರು ಗೆಬ ಊರಿನಿಂದ, ಮಿಕ್ಮಾಷ್, ಅಯ್ಯಾ ಹಾಗು ಬೇತೇಲ್ ಎಂಬ ಗ್ರಾಮಗಳವರೆಗೂ ವಾಸಮಾಡುತ್ತಿದ್ದರು.

ಸಮಾರ್ಯಕ್ಕೆ ಬಿದ್ದ ಪೆಟ್ಟು ಗುಣಪಡಿಸಲಾಗದು. ಅದು ಯೆಹೂದಕ್ಕೂ ತಾಕಿದೆ. ನನ್ನ ಜನರ ಆಲೋಚನಾಸ್ಥಾನವಾದ ಯೆರೂಸಲೇಮಿಗೆ ಮುಟ್ಟಿದೆ.