TSK

TSK · ಯೆಶಾಯ 10:33

مراجع Treasury of Scripture Knowledge في ಕನ್ನಡ IRV.

العودة إلى المقطع

ಯೆಹೋವನು ದೂತನನ್ನು ಕಳುಹಿಸಿ ಅಶ್ಶೂರದ ಅರಸನ ದಂಡಿನಲ್ಲಿದ್ದ ಎಲ್ಲಾ ಶೂರರನ್ನೂ, ನಾಯಕರನ್ನೂ, ಅಧಿಪತಿಗಳನ್ನೂ ಸಂಹರಿಸಿದನು; ಅಶ್ಶೂರದ ಅರಸನು ನಾಚಿಕೆಯಿಂದ ತನ್ನ ದೇಶಕ್ಕೆ ಹಿಂದಿರುಗಿಹೋಗಬೇಕಾಯಿತು. ಅಲ್ಲಿ ಅವನು ತನ್ನ ದೇವರ ಗುಡಿಗೆ ಹೋಗಿದ್ದಾಗ ಅವನ ಸ್ವಂತ ಮಕ್ಕಳೇ ಅವನನ್ನು ಕತ್ತಿಯಿಂದ ಕೊಂದು ಹಾಕಿದರು.

ಮನುಷ್ಯನ ಗರ್ವದೃಷ್ಟಿಯು ತಗ್ಗಿಹೋಗುವುದು, ಮನುಷ್ಯರ ಅಹಂಕಾರವು ತಗ್ಗುವುದು. ಯೆಹೋವನೊಬ್ಬನೇ ಆ ದಿನದಲ್ಲಿ ಉನ್ನತೋನ್ನತನಾಗಿರುವನು.

ಎತ್ತರವಾಗಿ ಬೆಳೆದಿರುವ ಲೆಬನೋನಿನ ಎಲ್ಲಾ ದೇವದಾರು ವೃಕ್ಷಗಳ ಮತ್ತು ಬಾಷಾನಿನ ಎಲ್ಲಾ ಅಲ್ಲೋನ ಮರಗಳ ಮೇಲೆಯೂ,

ಕೊಯ್ಲಿನ ಕಾಲಕ್ಕೆ ಮೊದಲು ಮೊಗ್ಗು ಬಿಟ್ಟಾದ ಮೇಲೆ, ಹೂವಿನಿಂದ ಹೀಚು ದ್ರಾಕ್ಷಿ ದೋರೆ ಕಾಯಿಯಾಗುವಾಗ, ಆತನು ಕುಡುಗೋಲುಗಳಿಂದ ಬಳ್ಳಿಗಳನ್ನು ಕತ್ತರಿಸಿ ಚಿಗುರುಗಳನ್ನು ಕಡಿದುಹಾಕುವನು.

ನೀನು ನಿನ್ನ ಸೇವಕರ ಮುಖಾಂತರವಾಗಿ ಕರ್ತನನ್ನು ನಿಂದಿಸಿ, ‘ನನ್ನ ರಥಸಮೂಹದೊಡನೆ ಪರ್ವತಶಿಖರಗಳನ್ನು ಹತ್ತಿದ್ದೇನೆ. ಲೆಬನೋನಿನ ದುರ್ಗಮಸ್ಥಳಗಳಿಗೆ ಹೋಗಿದ್ದೇನೆ; ಅದರ ಎತ್ತರವಾದ ದೇವದಾರು ವೃಕ್ಷಗಳನ್ನೂ, ಶ್ರೇಷ್ಠವಾದ ತುರಾಯಿ ಮರಗಳನ್ನೂ ಕಡಿದು ಬಿಟ್ಟಿದ್ದೇನೆ; ಅಲ್ಲಿನ ಬಹುದೂರದ ಶಿಖರವನ್ನೂ, ಉದ್ಯಾನವನಗಳನ್ನೂ ಪ್ರವೇಶಿಸಿದ್ದೇನೆ.

ಆಯುಧ ಸನ್ನದ್ಧರಾದ ಸಂಹಾರಕರನ್ನು ನಿನ್ನ ವಿರುದ್ಧವಾಗಿ ಸಿದ್ಧಪಡಿಸುವೆನು; ಅವರು ನಿನ್ನ ಶ್ರೇಷ್ಠ ದೇವದಾರುಗಳನ್ನು ಕಡಿದು ಬೆಂಕಿಯಲ್ಲಿ ಹಾಕುವರು.

ಆಹಾ, ಅವರಿಗೆ ಎದುರಾಗಿ ನಿಂತ ಅಮೋರಿಯರನ್ನು ನಾನೇ ಧ್ವಂಸಮಾಡಿದೆನು, ಆ ಶತ್ರುವು ದೇವದಾರು ಮರದಷ್ಟು ಎತ್ತರವಾಗಿ, ಅಲ್ಲೋನ್ ಮರದ ಹಾಗೆ ಬಲಿಷ್ಠವಾಗಿಯೂ ಇದ್ದರು. ಆದರೂ ಮರದ ಮೇಲಿನ ಅದರ ಫಲವನ್ನು, ಕೆಳಗೆ ಅದರ ಬುಡವನ್ನು ನಾಶಪಡಿಸಿದೆನು.