ದೇವದೂತರೇ, ಆತನ ಶಬ್ದಕ್ಕೆ ಕಿವಿಗೊಡುವವರೆ ಆತನ ಆಜ್ಞೆಯನ್ನು ನೆರವೇರಿಸುವ ಪರಾಕ್ರಮಶಾಲಿಗಳೇ, ಯೆಹೋವನನ್ನು ಕೊಂಡಾಡಿರಿ.
TSK
TSK · ಯೆಶಾಯ 10:34
مراجع Treasury of Scripture Knowledge في ಕನ್ನಡ IRV.
ಆಗ ಅಶ್ಶೂರ್ಯರು ಕತ್ತಿಯಿಂದ ಬೀಳುವರು. ಅದು ಮನುಷ್ಯರ ಕತ್ತಿಯಲ್ಲ, ಖಡ್ಗವು ಅವರನ್ನು ನುಂಗುವುದು, ಅದು ಮಾನವ ಖಡ್ಗವಲ್ಲ. ಅವರು ಕತ್ತಿಯಿಂದ ತಪ್ಪಿಸಿಕೊಳ್ಳಲು ಓಡುವರು. ಅವರ ಯೌವನಸ್ಥರು ಬಿಟ್ಟಿಯಾಗಿ ಹಿಡಿಯಲ್ಪಡುವರು.
¶ ಆಗ ಯೆಹೋವನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿ ಸೈನಿಕರನ್ನು ಸಂಹರಿಸಿದನು. ಬೆಳಿಗ್ಗೆ ಎದ್ದು ನೋಡುವಲ್ಲಿ ಅವರೆಲ್ಲರು ಹೆಣಗಳಾಗಿದ್ದರು.
ಐಗುಪ್ತವು ಓಡಿಹೋಗುವ ಶಬ್ದವು ಸರಿಯುವ ಸರ್ಪದ ಸಪ್ಪಳಕ್ಕೆ ಸಮನಾಗಿರುವುದು; ಶತ್ರುಗಳು ದಂಡೆತ್ತಿಬಂದು ಕಟ್ಟಿಗೆ ಕಡಿಯುವವರಂತೆ ಕೊಡಲಿಗಳಿಂದ ಅವರ ಮೇಲೆ ಬೀಳುವರು.
ನಾನು ಹಾಸಿಗೆಯ ಮೇಲೆ ಮಲಗಿದ್ದಾಗ ನನ್ನ ಮನಸ್ಸಿಗೆ ಬಿದ್ದ ಕನಸಿನಲ್ಲಿ ನೋಡಲಾಗಿ ದೇವದೂತನು ಆಕಾಶದಿಂದಿಳಿದು ಗಟ್ಟಿಯಾಗಿ ಕೂಗಿ,
¶ ಯೆಹೋವನು ಇಂತೆನ್ನುತ್ತಾನೆ, “ನಿನ್ನ ಶತ್ರುಗಳು ಎಷ್ಟು ಪ್ರಬಲವಾಗಿದ್ದರೂ, ಅವರ ಸಂಖ್ಯೆ ಎಷ್ಟು ಹೆಚ್ಚಿದ್ದರೂ ಅವರು ಕಡಿಯಲ್ಪಡುವರು. ಆ ದುರಾಲೋಚಕನು ಇಲ್ಲವಾಗುವನು. ನಿನ್ನನ್ನು ಬಾಧಿಸಿದ್ದೇನೆ, ಆದರೆ ಇನ್ನು ಬಾಧಿಸೆನು.
ಯೇಸು ಕರ್ತನು ತನ್ನ ಶಕ್ತಿಯುತ ದೇವದೂತರೊಂದಿಗೆ ಅಗ್ನಿ ಜ್ವಾಲೆಗಳ ಮೂಲಕ ಪರಲೋಕದಿಂದ ಪ್ರತ್ಯಕ್ಷನಾಗುವ ಕಾಲದಲ್ಲಿ ಅದನ್ನು ಕೊಡುವನು.
¶ ತರುವಾಯ ಬಲಿಷ್ಠನಾದ ಮತ್ತೊಬ್ಬ ದೇವದೂತನು ಪರಲೋಕದಿಂದ ಇಳಿದುಬರುವುದನ್ನು ಕಂಡೆನು. ಅವನು ಮೇಘವನ್ನು ಧರಿಸಿಕೊಂಡಿದ್ದನು. ಅವನ ತಲೆಯ ಮೇಲೆ ಕಾಮನಬಿಲ್ಲು ಇತ್ತು. ಅವನ ಮುಖವು ಸೂರ್ಯನೊಪಾದಿಯಲ್ಲಿತ್ತು. ಅವನ ಪಾದಗಳು ಬೆಂಕಿಯ ಕಂಬಗಳಂತಿದ್ದವು.