TSK

TSK · ಯೆಶಾಯ 13:11

مراجع Treasury of Scripture Knowledge في ಕನ್ನಡ IRV.

العودة إلى المقطع

ಶಿಷ್ಟನು ಭೂಮಿಯಲ್ಲಿ ತನ್ನ ಕ್ರಿಯಾಫಲವನ್ನು ಅನುಭವಿಸುವಲ್ಲಿ, ದುಷ್ಟನೂ, ಪಾಪಿಯೂ ದಂಡನೆಯನ್ನು ಅನುಭವಿಸುವರು ಎಂದು ಹೇಳಬೇಕಾಗಿಲ್ಲ.

ಸೇನಾಧೀಶ್ವರನಾದ ಯೆಹೋವನ ನ್ಯಾಯನಿರ್ಣಯದ ದಿನವು ಗರ್ವದಿಂದ ಹೆಚ್ಚಿಕೊಂಡಿರುವ ಪ್ರತಿಯೊಬ್ಬನ ಮೇಲೆ ಬರುವುದು. ಆಗ ಅವನು ತಗ್ಗಿಸಲ್ಪಡುವನು.

ದುಷ್ಟರ ಗತಿಯನ್ನು ಏನು ಹೇಳಲಿ! ಅವರ ಕಾರ್ಯಗಳಿಗೆ ತಕ್ಕ ಪ್ರತಿಫಲವು ಅವರಿಗೆ ದೊರಕುವುದು.

ಆದರೆ ಬಡವರಿಗೋಸ್ಕರ ನ್ಯಾಯವಾಗಿ ತೀರ್ಪುಮಾಡುವನು. ಲೋಕದ ದೀನರಿಗಾಗಿ ಧರ್ಮವನ್ನು ನಿರ್ಣಯಿಸುವನು. ಭೂಮಿಯನ್ನು ತನ್ನ ಬಾಯಿಯ ಕೋಲಿನಿಂದ ದಂಡಿಸುವನು. ದುಷ್ಟನನ್ನು ತನ್ನ ತುಟಿಗಳ ಉಸಿರಿನಿಂದ ಕೊಲ್ಲುವನು.

ಪೂರ್ವಿಕರ ಅಧರ್ಮದ ನಿಮಿತ್ತ ಅವನ ಮಕ್ಕಳಿಗೂ, ವಧ್ಯಸ್ಥಾನವನ್ನು ಸಿದ್ಧಮಾಡಿರಿ, ಅವರು ತಲೆಯೆತ್ತಿ, ಲೋಕವನ್ನು ವಶಪಡಿಸಿಕೊಂಡು ಭೂಮಂಡಲದ ಮೇಲೆಲ್ಲಾ ಪಟ್ಟಣಗಳನ್ನು ಕಟ್ಟಿಕೊಳ್ಳದಿರಲಿ.

ಮೋಡಗಳು ಒಣನೆಲದ ಕಾವನ್ನು ತಂಪಾಗಿಸುವಂತೆ ನೀನು ಅನ್ಯರ ಗದ್ದಲವನ್ನು ತಗ್ಗಿಸುವಿ; ಮೋಡದ ನೆರಳಿನಿಂದ ಬಿಸಿಲು ಹೇಗೆ ಕಡಿಮೆಯಾಗುವುದೋ ಹಾಗೆ ನಿನ್ನಿಂದ ಭೀಕರರ ಉತ್ಸಾಹ ಗಾನವು ಕ್ರಮೇಣ ನಿಂತುಹೋಗುವುದು.

ಬಿಲ್ಲನ್ನು ಬೊಗ್ಗಿಸಿ, ಬಾಣಬಿಡುವವರನ್ನೆಲ್ಲಾ ಬಾಬಿಲೋನಿಗೆ ಕರೆಯಿರಿ; ಅದರ ಸುತ್ತಲು ದಂಡಿಳಿಸಿರಿ; ಅದರ ನಿವಾಸಿಗಳಲ್ಲಿ ಯಾರೂ ತಪ್ಪಿಸಿಕೊಳ್ಳದ ಹಾಗಿರಲಿ; ಅದರ ಕೃತ್ಯಕ್ಕೆ ತಕ್ಕಂತೆ ಮುಯ್ಯಿತೀರಿಸಿರಿ; ಅದು ಮಾಡಿದಂತೆಯೇ ಅದಕ್ಕೆ ಮಾಡಿರಿ; ಅದು ಸೊಕ್ಕೇರಿ ಇಸ್ರಾಯೇಲರ ಸದಮಲಸ್ವಾಮಿಯಾದ ಯೆಹೋವನನ್ನು ಅಸಡ್ಡೆ ಮಾಡಿತಲ್ಲಾ.

¶ ನೇಮಿಸಿದ ಆ ಕಾಲವು ಕಳೆದ ಮೇಲೆ ನೆಬೂಕದ್ನೆಚ್ಚರನಾದ ನಾನು ಪರಲೋಕದ ಕಡೆಗೆ ಕಣ್ಣೆತ್ತಲು ನನ್ನ ಬುದ್ಧಿಯು ಪುನಃ ನನ್ನ ಸ್ವಾಧೀನವಾಯಿತು. “ಆಗ ನಾನು ಪರಾತ್ಪರನಾದ ದೇವರನ್ನು ಕೊಂಡಾಡಿ, ಸದಾ ಜೀವಸ್ವರೂಪನಾದವನಿಗೆ ಸ್ತುತಿಸ್ತೋತ್ರಗಳನ್ನು ಸಲ್ಲಿಸಿದೆನು; ಆತನ ಆಳ್ವಿಕೆಯು ಶಾಶ್ವತ, ಆತನ ರಾಜ್ಯವು ತಲತಲಾಂತರಕ್ಕೂ ಸ್ಥಿರವಾಗಿರುವುದು.

ಭೂಲೋಕದವರನ್ನೆಲ್ಲಾ ಮರುಳುಗೊಳಿಸಿ ಪಾಪ ಮಾಡಿಸುತ್ತಿದ್ದ ಆ ಮಹಾ ಘಟಸರ್ಪವು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಆ ಪುರಾತನ ಸರ್ಪವನ್ನು ಭೂಮಿಗೆ ತಳ್ಳಲಾಯಿತು. ಅವನ ದೂತರು ಅವನೊಂದಿಗೆ ದೊಬ್ಬಲ್ಪಟ್ಟರು.