¶ ಪರ್ಷಿಯ ಅರಸನಾದ ಕೋರೆಷನ ಮೊದಲನೆಯ ವರ್ಷದಲ್ಲಿ ಯೆಹೋವನು ತಾನು ಯೆರೆಮೀಯನ ಮುಖಾಂತರ ಹೇಳಿಸಿದ ವಾಕ್ಯವನ್ನು ನೆರವೇರಿಸುವುದಕ್ಕಾಗಿ ಆ ಪರ್ಷಿಯ ರಾಜನಾದ ಕೋರೆಷನ ಮನಸ್ಸನ್ನು ಪ್ರೇರೇಪಿಸಿದನು.
TSK
TSK · ಯೆಶಾಯ 13:3
مراجع Treasury of Scripture Knowledge في ಕನ್ನಡ IRV.
¶ “ರಾಜಾಧಿರಾಜನಾದ ಅರ್ತಷಸ್ತನು, ಯಾಜಕನೂ ಪರಲೋಕದೇವರ ಧರ್ಮಶಾಸ್ತ್ರದಲ್ಲಿ ಪ್ರವೀಣನೂ ಆದ ಎಜ್ರನಿಗೆ ತಿಳಿಸುವುದೇನೆಂದರೆ,
ಭಕ್ತರು ತಮಗುಂಟಾದ ಮಹಿಮೆಯಲ್ಲಿ ಹಿಗ್ಗಲಿ; ಹಾಸಿಗೆಯ ಮೇಲಿರುವಾಗಲೂ ಉತ್ಸಾಹಧ್ವನಿ ಮಾಡಲಿ.
ಜಲರಾಶಿಗೆ, ‘ಬತ್ತಿಹೋಗು, ನಿನ್ನಲ್ಲಿ ಸೇರುವ ನದಿಗಳನ್ನು ಒಣಗಿಸುವೆನು’ ಎಂದು ನಾನು ಅಪ್ಪಣೆ ಕೊಡುವವನಾಗಿದ್ದೇನೆ.
ಯೆಹೋವನು ಇಂತೆನ್ನುತ್ತಾನೆ, “ಮೆರಾಥಯಿಮ್ ದೇಶಕ್ಕೂ ಮತ್ತು ಪೆಕೋದಿನ ನಿವಾಸಿಗಳಿಗೂ ವಿರುದ್ಧವಾಗಿ ದಂಡೆತ್ತಿ ಹೋಗಿ, ಅವರನ್ನು ಸಂಹರಿಸಿ, ಅನಂತರ ದೇಶವನ್ನು ತೀರಾ ಹಾಳುಮಾಡಿ, ನಾನು ನಿನಗೆ ಆಜ್ಞಾಪಿಸಿದ್ದನ್ನೆಲ್ಲಾ ನೆರವೇರಿಸು.
ಸುತ್ತಮುತ್ತಲಿನ ಜನಾಂಗಗಳೇ, ತ್ವರೆಯಾಗಿ ಕೂಡಿಬನ್ನಿರಿ, ನೀವೆಲ್ಲರೂ ಒಟ್ಟಾಗಿ ಕೂಡಿಬನ್ನಿರಿ. ಯೆಹೋವನೇ, ನಿನ್ನ ಶೂರರನ್ನು ರಣರಂಗಕ್ಕೆ ಇಳಿಸು.
¶ ಪರಲೋಕದಿಂದ ಹೇಳುವ ಮತ್ತೊಂದು ಧ್ವನಿಯನ್ನು ಕೇಳಿದೆನು, “ನನ್ನ ಜನರೇ, ಅವಳನ್ನು ಬಿಟ್ಟು ಬನ್ನಿರಿ, ಏಕೆಂದರೆ ಅವಳ ಪಾಪಗಳಲ್ಲಿ ನೀವೂ ಪಾಲುಗಾರರಾಗಬಾರದು. ಅವಳಿಗೆ ಆಗುವ ಉಪದ್ರವಗಳು ನಿಮ್ಮನ್ನು ಬಾಧಿಸಬಾರದು.