ಅವನಿಗೆ ನೀನು ಕೊಲೆ ಮಾಡಿ ಸ್ವತ್ತನ್ನು ಸಂಪಾದಿಸಿಕೊಂಡಿಯಲ್ಲವೋ? ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲೇ ನಿನ್ನ ರಕ್ತವನ್ನೂ ನೆಕ್ಕುವವು ಎಂಬುದಾಗಿ ಯೆಹೋವನು ಅನ್ನುತ್ತಾನೆ ಎಂದು ಅವನಿಗೆ ಹೇಳು” ಎಂಬುದೇ.
TSK
TSK · ಯೆಶಾಯ 14:19
مراجع Treasury of Scripture Knowledge في ಕನ್ನಡ IRV.
¶ ಆಗ ಯೇಹುವು ತನ್ನ ಜೊತೆಯಲ್ಲಿದ್ದ ಬಿದ್ಕರನೆಂಬ ಸೇನಾಪತಿಗೆ, “ಯೋರಾಮನ ಶವವನ್ನು ಎತ್ತಿ ಇಜ್ರೇಲಿನವನಾದ ನಾಬೋತನ ಹೊಲದಲ್ಲಿ ಬಿಸಾಡು. ಒಂದು ದಿನ ನಾವಿಬ್ಬರೂ ಕುದುರೆ ಹತ್ತಿ, ಇವನ ತಂದೆಯಾದ ಅಹಾಬನ ಹಿಂದಿನಿಂದ ಹೋಗುತ್ತಿರುವಾಗ, ಯೆಹೋವನು ಈ ಪ್ರವಾದನೆಯನ್ನು ಅವನ ವಿರುದ್ಧ ಹೇಳಿದ್ದನು:
‘ಇಲ್ಲಿ ನಿನಗೇನು ಕೆಲಸ? ಇಲ್ಲಿ ನಿನಗಾಗಿ ಸಮಾಧಿಯನ್ನು ತೋಡಿಸಿಕೊಂಡಿರುವ ನೀನು ಯಾರು? ಉನ್ನತದಲ್ಲಿ ನಿನಗೆ ಸಮಾಧಿಯನ್ನು ಕೊರೆಸುತ್ತಾ, ಬಂಡೆಯನ್ನು ಕೆತ್ತಿಸಿ, ನಿನಗಾಗಿ ವಿಶ್ರಾಂತಿಯ ಸ್ಥಳವನ್ನು ತೋಡಿಸಿದಿ ಅಲ್ಲವೇ?’”
ಈ ದೇಶದಲ್ಲಿನ ದೊಡ್ಡವರೂ. ಅಲ್ಪರೂ ಸಾಯುವರು. ಅವರನ್ನು ಯಾರೂ ಹೂಣಿಡುವುದಿಲ್ಲ, ಅವರಿಗಾಗಿ ಯಾರೂ ಗೋಳಾಡುವುದಿಲ್ಲ, ಗಾಯಮಾಡಿಕೊಳ್ಳುವುದಿಲ್ಲ, ತಲೆಬೋಳಿಸಿಕೊಳ್ಳುವುದಿಲ್ಲ.
ಅವರು ಊರೊಳಕ್ಕೆ ಬಂದ ಮೇಲೆ ನೆತನ್ಯನ ಮಗನಾದ ಇಷ್ಮಾಯೇಲನೂ ಮತ್ತು ಅವನ ಸಂಗಡಿಗರೂ ಅವರನ್ನು ಕೊಲ್ಲಿಸಿ ಬಾವಿಯಲ್ಲಿ ಹಾಕಿದರು.
ಅವರ ಗೋರಿಗಳು ಅಧೋಲೋಕದ ಅಗಾಧ ಸ್ಥಳಗಳಲ್ಲಿ ಹರಡಿಕೊಂಡಿವೆ; ಸಂಹೃತರಾದವರು, ಖಡ್ಗದಿಂದ ಹತರಾದವರು ಗೋರಿಯ ಸುತ್ತಲಿದ್ದಾರೆ; ಜೀವಲೋಕದಲ್ಲಿ ಹತರಾದವರು ಜೀವಿತರ ದೇಶದಲ್ಲಿ ಭಯವನ್ನು ಉಂಟುಮಾಡಿದ್ದಾರೆ.