TSK

TSK · ಯೆಶಾಯ 14:25

مراجع Treasury of Scripture Knowledge في ಕನ್ನಡ IRV.

العودة إلى المقطع

ಯೆಹೋವನು ದೂತನನ್ನು ಕಳುಹಿಸಿ ಅಶ್ಶೂರದ ಅರಸನ ದಂಡಿನಲ್ಲಿದ್ದ ಎಲ್ಲಾ ಶೂರರನ್ನೂ, ನಾಯಕರನ್ನೂ, ಅಧಿಪತಿಗಳನ್ನೂ ಸಂಹರಿಸಿದನು; ಅಶ್ಶೂರದ ಅರಸನು ನಾಚಿಕೆಯಿಂದ ತನ್ನ ದೇಶಕ್ಕೆ ಹಿಂದಿರುಗಿಹೋಗಬೇಕಾಯಿತು. ಅಲ್ಲಿ ಅವನು ತನ್ನ ದೇವರ ಗುಡಿಗೆ ಹೋಗಿದ್ದಾಗ ಅವನ ಸ್ವಂತ ಮಕ್ಕಳೇ ಅವನನ್ನು ಕತ್ತಿಯಿಂದ ಕೊಂದು ಹಾಕಿದರು.

¶ ಆದಕಾರಣ ಕರ್ತನಾದ ನಾನು ಚೀಯೋನ್ ಪರ್ವತದಲ್ಲಿಯೂ, ಯೆರೂಸಲೇಮಿನಲ್ಲಿಯೂ ನನ್ನ ಉದ್ದೇಶವನ್ನೆಲ್ಲಾ ನೆರವೇರಿಸಿದ ಮೇಲೆ, “ಅಶ್ಶೂರದ ರಾಜನ ಹೃದಯದ ದೊಡ್ಡಸ್ತಿಕೆಯ ಫಲಕ್ಕೂ, ಅವನ ಗರ್ವದೃಷ್ಟಿಯ ಮೆರೆದಾಟಕ್ಕೂ ತಕ್ಕ ದಂಡನೆಯನ್ನು ಮಾಡುವೆನು.”

¶ ಆದುದರಿಂದ ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಹೀಗೆ ಹೇಳುತ್ತಾನೆ, “ಚೀಯೋನಿನಲ್ಲಿ ವಾಸಿಸುವ ನನ್ನ ಜನರೇ, ಐಗುಪ್ತರು ಮಾಡಿದಂತೆ, ನಿಮ್ಮನ್ನು ಕೋಲಿನಿಂದ ಹೊಡೆದು, ನಿಮ್ಮ ವಿರುದ್ಧವಾಗಿ ದೊಣ್ಣೆಯನ್ನು ಎತ್ತುವ ಅಶ್ಶೂರರಿಗೆ ಭಯಪಡಬೇಡಿರಿ.

ಇದೇ ದಿನ ಶತ್ರುಗಳು ನೋಬಿನಲ್ಲಿ ಬೀಡುಬಿಡುವರು. ಚೀಯೋನ್ ನಗರಿಯ ಪರ್ವತದ ಕಡೆಗೆ ಯೆರೂಸಲೇಮಿನ ಬೆಟ್ಟದ ಕಡೆಗೆ ಕೈ ಬೀಸುತ್ತಾರೆ.

ಆಹಾ, ಸಮುದ್ರವು ಭೋರ್ಗರೆಯುವಂತೆ ಭೋರ್ಗರೆಯುವ ಬಹು ಜನಾಂಗಗಳ ಗದ್ದಲ! ಮಹಾ ಜಲಪ್ರವಾಹಗಳು ಘೋಷಿಸುವಂತೆ ಘೋಷಿಸುವ ಜನಗಳ ಘೋಷ!

ಆಗ ಅಶ್ಶೂರ್ಯರು ಕತ್ತಿಯಿಂದ ಬೀಳುವರು. ಅದು ಮನುಷ್ಯರ ಕತ್ತಿಯಲ್ಲ, ಖಡ್ಗವು ಅವರನ್ನು ನುಂಗುವುದು, ಅದು ಮಾನವ ಖಡ್ಗವಲ್ಲ. ಅವರು ಕತ್ತಿಯಿಂದ ತಪ್ಪಿಸಿಕೊಳ್ಳಲು ಓಡುವರು. ಅವರ ಯೌವನಸ್ಥರು ಬಿಟ್ಟಿಯಾಗಿ ಹಿಡಿಯಲ್ಪಡುವರು.

ಅಶ್ಶೂರವೂ ಮತ್ತು ಅದರ ಎಲ್ಲಾ ಗುಂಪು ಅಲ್ಲಿರುತ್ತವೆ. ಆ ಜನರ ಗೋರಿಗಳು ಅದನ್ನು ಸುತ್ತಿಕೊಂಡಿವೆ; ಅವರೆಲ್ಲರೂ ಸಂಹೃತರು, ಖಡ್ಗದಿಂದ ಹತರಾದವರು.

ಆತನೇ ನಮಗೆ ಸಮಾಧಾನಪ್ರದನು. ಅಶ್ಶೂರ್ಯರು ನಮ್ಮ ದೇಶದಲ್ಲಿ ನುಗ್ಗಿ, ನಮ್ಮ ಅರಮನೆಗಳನ್ನು ತುಳಿದುಹಾಕುವಾಗ, ನಾವು ಅವರಿಗೆ ವಿರುದ್ಧವಾಗಿ ಏಳು ಪಾಲಕರನ್ನು ಹೌದು ಎಂಟು ಪುರುಷಶ್ರೇಷ್ಠರನ್ನು ನೇಮಿಸುವೆವು.

¶ ಅವರು ಕಷ್ಟವೆಂಬ ಕಡಲನ್ನು ದಾಟಿ ಬರುವರು, ಅಲ್ಲಕಲ್ಲೋಲವಾದ ಸಮುದ್ರವನ್ನು ಭೇದಿಸಿಬಿಡುವರು, ನೈಲ್ ನದಿಯೆಲ್ಲಾ ತಳದ ತನಕ ಒಣಗುವುದು. ಅಶ್ಶೂರದ ಗರ್ವವು ತಗ್ಗಿಸಲ್ಪಡುವುದು, ಐಗುಪ್ತದ ರಾಜದಂಡವು ತಪ್ಪಿಹೋಗುವುದು.