¶ “ಯಾವನ ತಲೆಯ ಕೂದಲು ಉದುರಿ ಹೋಗಿ ಅವನು ಬೋಳುತಲೆಯವನಾದರೂ ಅವನು ಶುದ್ಧನೇ.
TSK
TSK · ಯೆಶಾಯ 15:2
مراجع Treasury of Scripture Knowledge في ಕನ್ನಡ IRV.
ಅವರು ತಲೆಬೋಳಿಸಿಕೊಳ್ಳಬಾರದು, ಗಡ್ಡವನ್ನು ಕತ್ತರಿಸಿ ವಿಕಾರಗೊಳಿಸಬಾರದು; ದೇಹವನ್ನು ಗಾಯಮಾಡಿಕೊಳ್ಳಬಾರದು.
“ಅಟಾರೋತ್, ದೀಬೋನ್, ಯಗ್ಜೇರ್, ನಿಮ್ರಾ, ಹೆಷ್ಬೋನ್, ಎಲೆಯಾಲೆ, ಸೆಬಾಮ್, ನೆಬೋ, ಬೆಯೋನ್,
¶ ನೀವು ನಿಮ್ಮ ದೇವರಾಗಿರುವ ಯೆಹೋವನ ಮಕ್ಕಳಾಗಿರುವುದರಿಂದ ಸತ್ತವರಿಗೋಸ್ಕರ ದೇಹವನ್ನು ಗಾಯಮಾಡಿಕೊಳ್ಳಬಾರದು ಮತ್ತು ತಲೆಯ ಮುಂದಿನಭಾಗವನ್ನು ಬೋಳಿಸಿಕೊಳ್ಳಲೂ ಬಾರದು.
ಅರ್ನೋನ್ ಕಣಿವೆಯ ಅಂಚಿನಲ್ಲಿದ್ದ ಅರೋಯೇರ್ ಪಟ್ಟಣ;
¶ ಆಗ ಯೋಬನು ಎದ್ದು ಮೇಲಂಗಿಯನ್ನು ಹರಿದುಕೊಂಡು, ತಲೆ ಬೋಳಿಸಿಕೊಂಡು ನೆಲದ ಮೇಲೆ ಅಡ್ಡಬಿದ್ದು ದೇವರನ್ನು ಆರಾಧಿಸಿ,
ಪುರದ್ವಾರವೇ, ಗೋಳಾಡು! ಪಟ್ಟಣವೇ, ಕೂಗು! ಎಲ್ಲಾ ಫಿಲಿಷ್ಟಿಯರೇ, ಕರಗಿ ಹೋಗುವಿರಿ! ಉತ್ತರದಿಂದ ಹೊಗೆಯು ಬರುತ್ತದೆ. ಆ ವ್ಯೂಹದಲ್ಲಿ ಹಿಂದೆ ಬೀಳುವವರು ಯಾರೂ ಇಲ್ಲ.
ಆದಕಾರಣ ಮೋವಾಬಿನ ನಿಮಿತ್ತ ಮೋವಾಬೇ ಗೋಳಾಡುವುದು. ಪ್ರತಿಯೊಬ್ಬನೂ ಪ್ರಲಾಪಿಸುವನು. ನೀವು ಕೀರ್ ಹರೆಷೆಥಿನ ಜನರ ದೀಪದ್ರಾಕ್ಷೆಯ ಕಡುಬು ಹಾಳಾಯಿತಲ್ಲಾ ಎಂದು ನರಳುವಿರಿ.
ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು, ಆ ದಿನದಲ್ಲಿ ನಿಮಗೆ ಆಜ್ಞಾಪಿಸಿದನು. ಕಣ್ಣೀರು ಸುರಿಸಿ, ಗೋಳಾಡಿರಿ, ತಲೆಬೋಳಿಸಿಕೊಳ್ಳಿರಿ, ಗೋಣಿತಟ್ಟನ್ನು ಸುತ್ತಿಕೊಳ್ಳಿರಿ ಎಂಬುದೇ.
¶ “ಗಾಜಾ ಊರು ಬೋಳಿಸಿಕೊಂಡಿದೆ, ಅಷ್ಕೆಲೋನ್ ನಾಶಹೊಂದಿದೆ; ಫಿಲಿಷ್ಟಿಯದ ಬಯಲು ಸೀಮೆಯಲ್ಲಿ ಉಳಿದ ಪಟ್ಟಣವೇ, ನಿನ್ನನ್ನು ಎಂದಿನ ವರೆಗೆ ಕತ್ತರಿಸಿಕೊಳ್ಳುತ್ತಿರುವಿ?
ಯುವತಿಯೇ, ದೀಬೋನ್ ಪುರಿಯೇ, ನಿನ್ನ ಮಹಿಮೆಯ ಪದವಿಯಿಂದ ಕೆಳಕ್ಕಿಳಿದು ಬಾಯಾರಿದವಳಾಗಿ ಕುಳಿತುಕೋ! ಮೋವಾಬನ್ನು ಹಾಳುಮಾಡುವವನು ನಿನ್ನ ವಿರುದ್ಧವಾಗಿ ಬಂದು ನಿನ್ನ ಕೋಟೆಕೊತ್ತಲಗಳನ್ನು ಕೆಡವಿದ್ದಾನಲ್ಲಾ.
ಆದಕಾರಣ ನಾನು ಮೋವಾಬಿನ ನಿಮಿತ್ತ ಗೋಳಾಡುವೆನು; ಹೌದು, ಇಡೀ ದೇಶದ ದುರ್ಗತಿಯನ್ನು ನೋಡಿ ಪ್ರಲಾಪಿಸುವೆನು; ಕೀರ್ ಹೆರೆಸಿನವರ ವಿಷಯವಾಗಿ ನರಳಾಟವಾಗುವುದು.
“ಹೆಷ್ಬೋನಿನವರೇ, ಗೋಳಾಡಿರಿ; ‘ಆಯಿ’ ಎಂಬ ಊರು ಹಾಳಾಯಿತು, ರಬ್ಬಾ ಪಟ್ಟಣಕ್ಕೆ ಸೇರಿದ ಗ್ರಾಮಗಳವರೇ, ಕಿರಿಚಿರಿ, ಗೋಣಿತಟ್ಟನ್ನು ಸುತ್ತಿಕೊಳ್ಳಿರಿ, ಪ್ರಲಾಪಿಸಿರಿ, ಹಟ್ಟಿಗಳಲ್ಲಿ ಅತ್ತಿತ್ತ ಓಡಾಡಿರಿ; ಏಕೆಂದರೆ ಮಲ್ಕಾಮ್ ದೇವತೆಯು, ಅದರ ಯಾಜಕರೂ ಮತ್ತು ಪ್ರಧಾನರೂ ಒಟ್ಟಾಗಿ ಸೆರೆಗೆ ಹೋಗುವರು.
ನಿಮ್ಮ ಉತ್ಸವಗಳನ್ನು ದುಃಖಕ್ಕೆ ಮಾರ್ಪಡಿಸುವೆನು ಮತ್ತು ನಿಮ್ಮ ಹರ್ಷಗೀತೆಗಳನ್ನೆಲ್ಲಾ ಶೋಕಗೀತೆಗೆ ತಿರುಗಿಸುವೆನು. ಎಲ್ಲರೂ ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಂಡು, ತಲೆಬೋಳಿಸಿಕೊಳ್ಳುವಂತೆ ಮಾಡುವೆನು. ನಿಮ್ಮ ಪ್ರಲಾಪವು ಏಕಪುತ್ರಶೋಕಕ್ಕೆ ಸಮಾನವಾಗುವುದು, ಅದು ಆದ ಮೇಲೆಯೂ ಶೋಕವು ಇದ್ದೇ ಇರುವುದು.