ಅರ್ನೋನ್ ತಗ್ಗಿನ ಅಂಚಿನಲ್ಲಿರುವ ಅರೋಯೇರ್ ಪಟ್ಟಣವು ಮತ್ತು ತಗ್ಗಿನಲ್ಲಿಯೇ ಇರುವ ಪಟ್ಟಣವು ಇವುಗಳು ಮೊದಲುಗೊಂಡು ಗಿಲ್ಯಾದ್ ಸೀಮೆಯವರೆಗೂ ಯಾವ ಪಟ್ಟಣವನ್ನು ಜಯಿಸಲು ನಮಗೆ ಅಸಾಧ್ಯವಾಗಲಿಲ್ಲ. ನಮ್ಮ ದೇವರಾದ ಯೆಹೋವನು ಅವುಗಳನ್ನೆಲ್ಲಾ ನಮ್ಮ ಕೈಗೆ ಸಿಕ್ಕುವಂತೆ ಮಾಡಿದನು.
TSK
TSK · ಯೆಶಾಯ 16:2
مراجع Treasury of Scripture Knowledge في ಕನ್ನಡ IRV.
¶ ಆ ಕಾಲದಲ್ಲಿ ನಾವು ಆ ದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡೆವು. ಅರ್ನೋನ್ ಹಳ್ಳದ ಬಳಿಯಲ್ಲಿರುವ ಅರೋಯೇರ್ ಮೊದಲುಗೊಂಡು ಗಿಲ್ಯಾದ್ ಸೀಮೆಯ ಮಧ್ಯದ ವರೆಗೂ ಇರುವ ಪ್ರದೇಶವನ್ನೆಲ್ಲಾ ಅದರ ಪಟ್ಟಣಗಳ ಸಹಿತವಾಗಿ ನಾನು ರೂಬೇನ್ಯರಿಗೂ ಮತ್ತು ಗಾದ್ಯರಿಗೂ ಕೊಟ್ಟೆನು.
ಅನಂತರ ಅವರು ಅರಣ್ಯದಲ್ಲಿ ಪ್ರಯಾಣಮಾಡಿ ಎದೋಮ್, ಮೋವಾಬ್ ದೇಶಗಳನ್ನು ಸುತ್ತಿಕೊಂಡು ಮೋವಾಬ್ ದೇಶದ ಪೂರ್ವದಿಕ್ಕಿಗೆ ಬಂದು, ಅದರ ಮೇರೆಯಾಗಿರುವ ಅರ್ನೋನ್ ಹೊಳೆಯ ಆಚೆಯಲ್ಲಿ ಇಳಿದುಕೊಂಡರು. ಮೋವಾಬ್ಯರ ಮೇರೆಯೊಳಗೆ ಕಾಲಿಡಲಿಲ್ಲ.
ಯೆಶಾಯ 13:14
TSK
ಬೇಟೆಗಾರನಿಂದ ತಪ್ಪಿಸಿಕೊಂಡು ಓಡುವ ಜಿಂಕೆಯಂತೆಯೂ, ಒಟ್ಟುಗೂಡಿಸಲು ಯಾರೂ ಇಲ್ಲದಂಥ ಕುರಿಗಳಂತೆಯೂ ಪ್ರತಿಯೊಬ್ಬನೂ ಸ್ವಜನರ ಕಡೆಗೆ ತಿರುಗಿಕೊಂಡು ಸ್ವದೇಶಕ್ಕೆ ಓಡಿಹೋಗುವನು.