TSK

TSK · ಯೆಶಾಯ 17:2

مراجع Treasury of Scripture Knowledge في ಕನ್ನಡ IRV.

العودة إلى المقطع

ಅರ್ನೋನ್ ತಗ್ಗಿನ ಅಂಚಿನಲ್ಲಿರುವ ಅರೋಯೇರ್ ಪಟ್ಟಣವು ಮತ್ತು ತಗ್ಗಿನಲ್ಲಿಯೇ ಇರುವ ಪಟ್ಟಣವು ಇವುಗಳು ಮೊದಲುಗೊಂಡು ಗಿಲ್ಯಾದ್ ಸೀಮೆಯವರೆಗೂ ಯಾವ ಪಟ್ಟಣವನ್ನು ಜಯಿಸಲು ನಮಗೆ ಅಸಾಧ್ಯವಾಗಲಿಲ್ಲ. ನಮ್ಮ ದೇವರಾದ ಯೆಹೋವನು ಅವುಗಳನ್ನೆಲ್ಲಾ ನಮ್ಮ ಕೈಗೆ ಸಿಕ್ಕುವಂತೆ ಮಾಡಿದನು.

ಅರ್ನೋನ್ ಕಣಿವೆಯ ಅಂಚಿನಲ್ಲಿದ್ದ ಅರೋಯೇರ್ ಪಟ್ಟಣ;

ಪಟ್ಟಣ ಪ್ರದೇಶಗಳು ಹಾಳಾಗಿ ಪಶುಪಾಲಕರಿಗೆ ಹುಲ್ಲುಗಾವಲುಗಳಾಗುವವು. ಕುರಿಮರಿಗಳು ಅಲ್ಲಿ ಮೇಯುವವು.

ಆಗ ಸಾವಿರ ರೂಪಾಯಿ ಬೆಲೆಯ ಸಹಸ್ರ ದ್ರಾಕ್ಷಿಯ ಬಳ್ಳಿಗಳು ಬೆಳೆಯುವ ಪ್ರತಿಯೊಂದು ಪ್ರದೇಶದಲ್ಲಿಯೂ, ಮುಳ್ಳು ಮತ್ತು ದತ್ತೂರಿಗಳಿಂದ ಮುಚ್ಚಿಕೊಂಡು ಹೋಗುವುದು.

ಅರೋಯೇರಿನವರೇ, ದಾರಿಯ ಮಗ್ಗುಲಲ್ಲಿ ನಿಂತುಕೊಂಡು ನೋಡಿರಿ; ಓಡಿಹೋಗುವವನನ್ನೂ ಮತ್ತು ತಪ್ಪಿಸಿಕೊಳ್ಳುವವಳನ್ನೂ ‘ಏನಾಯಿತು?’ ಎಂದು ವಿಚಾರಿಸಿರಿ.

ಒಬ್ಬೊಬ್ಬನು ತನ್ನ ದ್ರಾಕ್ಷಾಲತೆ ಅಂಜೂರಗಿಡ ಇವುಗಳ ನೆರಳಿನಲ್ಲಿ ಕುಳಿತುಕೊಳ್ಳುವನು. ಅವರನ್ನು ಯಾರೂ ಹೆದರಿಸರು. ಸೇನಾಧೀಶ್ವರನಾದ ಯೆಹೋವನೇ ಇದನ್ನು ನುಡಿದಿದ್ದಾನೆ.