TSK

TSK · ಯೆಶಾಯ 18:1

مراجع Treasury of Scripture Knowledge في ಕನ್ನಡ IRV.

العودة إلى المقطع

ನೀನು ಮಾಡಿದ್ದ ಎಲ್ಲಾ ಒಳ್ಳೆಯಕಾರ್ಯದ ಪ್ರತಿಫಲವಾಗಿ ಯೆಹೋವನು ನಿನಗೆ ಒಳ್ಳೆಯ ಫಲವನ್ನು ಕೊಡಲಿ; ನೀನು ಯಾವ ದೇವರ ಕೃಪಾಶಿರ್ವಾದದ ಆಶ್ರಯ ಹೊಂದಲು ಬಂದಿರುವೆಯೋ ಆ ಇಸ್ರಾಯೇಲಿನ ದೇವರಾದ ಯೆಹೋವನು ನಿನಗೆ ಉತ್ತಮವಾದ ಆಶ್ರಯವನ್ನು ಪ್ರತಿಫಲವನ್ನು ಅನುಗ್ರಹಿಸಲಿ” ಎಂದು ಉತ್ತರ ಕೊಟ್ಟನು.

ನನ್ನನ್ನು ಸುತ್ತಿಕೊಂಡು ಬಾಧಿಸುತ್ತಿರುವ ದುಷ್ಟರಿಂದಲೂ, ಪ್ರಾಣವೈರಿಗಳಿಂದಲೂ ತಪ್ಪಿಸಿದ್ದಿ.

ದೇವರೇ, ಕರುಣಿಸು, ನನ್ನನ್ನು ಕರುಣಿಸು. ನೀನೇ ನನ್ನ ಆಶ್ರಯಸ್ಥಾನವಲ್ಲವೇ! ಆಪತ್ತುಗಳು ಕಳೆದುಹೋಗುವ ತನಕ ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವೆನು.

ನೀನು ನನಗೆ ಸಹಾಯಕನಾಗಿರುವೆಯಲ್ಲಾ; ನಿನ್ನ ರೆಕ್ಕೆಗಳ ಮರೆಯಲ್ಲಿ ಸುರಕ್ಷಿತನಾಗಿದ್ದುಕೊಂಡು, ಆನಂದಘೋಷ ಮಾಡುತ್ತಿರುವೆನು.

¶ ಆಗ ಯೆಹೋವನು ಹೀಗೆ ಹೇಳಿದನು, “ನನ್ನ ಸೇವಕನಾದ ಯೆಶಾಯನು ಐಗುಪ್ತದ ಮತ್ತು ಕೂಷಿನ ನಾಶನಕ್ಕೆ ಆಶ್ಚರ್ಯವಾದ ಗುರುತಾಗಿ ಮೂರು ವರ್ಷ ಬೆತ್ತಲೆಯಾಗಿ ಪಾದರಕ್ಷೆಗಳಿಲ್ಲದೆ ನಡೆದನು.”

ಅಯ್ಯೋ, ಸಹಾಯಕ್ಕಾಗಿ ಐಗುಪ್ತವನ್ನು ಸೇರಿ ಅಶ್ವಬಲವನ್ನು ಆಶ್ರಯಿಸುವವರ ಗತಿಯನ್ನು ಏನು ಹೇಳಲಿ! ರಥಗಳು ಬಹಳವೆಂದು ಅವುಗಳಲ್ಲಿ ನಂಬಿಕೆಯಿಟ್ಟು, ಸವಾರರು ಬಹು ಬಲಿಷ್ಠರೆಂದು ಅವರ ಮೇಲೆ ಭರವಸವಿಡುತ್ತಾರೆ. ಆದರೆ ಇಸ್ರಾಯೇಲರ ಸದಮಲಸ್ವಾಮಿಯ ಕಡೆಗೆ ದೃಷ್ಟಿಯಿಡುವುದಿಲ್ಲ, ಯೆಹೋವನನ್ನು ಆಶ್ರಯಿಸುವುದಿಲ್ಲ.

‘ಆ ದಿನದಲ್ಲಿ ದೂತರು ನನ್ನ ಸನ್ನಿಧಾನದಿಂದ ಹೊರಟು ಹಡಗುಗಳಲ್ಲಿ ಪ್ರಯಾಣಮಾಡಿ, ನಿಶ್ಚಿಂತರಾದ ಕೂಷ್ಯರನ್ನು ಹೆದರಿಸುವರು; ಐಗುಪ್ತದ ನಾಶದ ದಿನದಲ್ಲಿ ಆದ ಹಾಗೆ ಕೂಷ್ಯರಿಗೂ ಸಂಕಟವು ಉಂಟಾಗುವುದು; ಇಗೋ, ಆ ದಿನ ಬಂತು!’”

ಚದರಿಹೋಗಿರುವ ನನ್ನ ಜನರು, ನನ್ನ ಭಕ್ತರು, ಕೂಷಿನ ನದಿಗಳ ಆಚೆಯಿಂದಲೂ ನನಗೆ ಕಾಣಿಕೆಯನ್ನು ತಂದು ಸಮರ್ಪಿಸುವರು.