‘ಹೇಗೆ ಪ್ರೇರೇಪಿಸುವಿ?’ ಎಂದು ಯೆಹೋವನು ಕೇಳಲು ಅದು, ‘ನಾನು ಅಸತ್ಯವನ್ನಾಡುವ ಆತ್ಮವಾಗಿ ಅವನ ಎಲ್ಲಾ ಪ್ರವಾದಿಗಳಲ್ಲಿ ಸೇರುವೆನು’ ಎಂದು ಉತ್ತರಕೊಟ್ಟಿತು. ಆಗ ಆತನು ಅದಕ್ಕೆ, ‘ಹೋಗಿ ಅದರಂತೆ ಮಾಡು ಅವನನ್ನು ಪ್ರೇರೇಪಿಸಿ ಸಫಲವಾಗುವಿ’ ಅಂದನು.
TSK
TSK · ಯೆಶಾಯ 19:14
مراجع Treasury of Scripture Knowledge في ಕನ್ನಡ IRV.
ಆತನಲ್ಲಿ ಬಲವೂ, ಸಾಮರ್ಥ್ಯವೂ ಉಂಟು; ತಪ್ಪಿದವನೂ, ತಪ್ಪಿಸಿದವನೂ ಆತನಿಗೆ ಅಧೀನರಾಗಿರುವರು.
“ಐಗುಪ್ತರನ್ನು ಐಗುಪ್ತ್ಯರ ಮೇಲೆಯೇ ಎಬ್ಬಿಸುವೆನು: ಸಹೋದರನಿಗೆ ವಿರುದ್ಧವಾಗಿ ಸಹೋದರನು, ನೆರೆಯವನಿಗೆ ವಿರುದ್ಧವಾಗಿ ನೆರೆಯವನೂ, ಪಟ್ಟಣಕ್ಕೆ ವಿರುದ್ಧವಾಗಿ ಪಟ್ಟಣವೂ, ರಾಜ್ಯಕ್ಕೆ ವಿರುದ್ಧವಾಗಿ ರಾಜ್ಯವೂ ಹೋರಾಡುವವು.
ನಿಮ್ಮನ್ನು ನೀವೇ ಬೆರಗು ಮಾಡಿಕೊಂಡು ಬೆರಗಾಗಿರಿ, ಕುರುಡು ಮಾಡಿಕೊಂಡು ಕುರುಡರಾಗಿರಿ! ಇವರು ಅಮಲೇರಿದ್ದಾರೆ, ದ್ರಾಕ್ಷಾರಸದಿಂದಲ್ಲ; ಓಲಾಡುತ್ತಾರೆ ಮದ್ಯದಿಂದಲ್ಲ.
ನೀನು ನಿನ್ನ ಕೆಟ್ಟತನದಲ್ಲಿ ನಂಬಿಕೆಯಿಟ್ಟು, “ನನ್ನನ್ನು ಯಾರೂ ನೋಡರು?” ಎಂದುಕೊಂಡಿದ್ದಿ. ನನ್ನ ಜ್ಞಾನವಿವೇಕಗಳು ನಿನ್ನನ್ನು ಸೊಟ್ಟಗೆ ತಿರುಗಿಸಿದ್ದರಿಂದ, “ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ” ಎಂದು ಯೋಚಿಸಿಕೊಂಡಿದ್ದಿ.
ಇದಲ್ಲದೆ ನನಗೆ ಈ ಅಪ್ಪಣೆಯಾಯಿತು, ನೀನು ಅವರಿಗೆ ನುಡಿಯತಕ್ಕದ್ದೇನೆಂದರೆ, “ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನಾನು ನಿಮ್ಮಲ್ಲಿಗೆ ಖಡ್ಗವನ್ನು ಕಳುಹಿಸುವೆನು; ಆ ನನ್ನ ರೋಷವನ್ನು ಕುಡಿದು ಅಮಲೇರಿದವರಾಗಿ ಕಕ್ಕಿ ಬಿದ್ದು ಏಳದಿರಿ.”
¶ “ಏಕೆಂದರೆ ಇಸ್ರಾಯೇಲ್ ವಂಶದವರಲ್ಲಾಗಲಿ ಮತ್ತು ಇಸ್ರಾಯೇಲಿನೊಳಗೆ ವಾಸವಾಗಿರುವ ವಿದೇಶಿಗಳಲ್ಲಾಗಲಿ ಯಾವನು ನನ್ನಿಂದ ದೂರವಾಗಿ, ತನ್ನ ವಿಗ್ರಹಗಳನ್ನು ಮನಸ್ಸಿನಲ್ಲಿ ನೆಲೆಗೊಳಿಸಿ, ತನಗೆ ಪಾಪಕಾರಿಯಾದ ವಿಘ್ನವನ್ನು ತನ್ನ ಮುಂದೆ ಇಟ್ಟುಕೊಂಡು ಪ್ರವಾದಿಯ ಬಳಿಗೆ ಬಂದು ಅವನ ಮೂಲಕ ದೈವೋತ್ತರವನ್ನು ಕೇಳಿಕೊಳ್ಳುವನೋ ಅವನಿಗೆ ಯೆಹೋವನಾದ ನಾನೇ ಉತ್ತರಕೊಡುವೆನು.
ಇದೇ ಕಾರಣದಿಂದ ದೇವರು ಗಾಢಭ್ರಮೆಯನ್ನು ಅವರಲ್ಲಿಗೆ ಕಳುಹಿಸಿ ಅವರು ಆ ಸುಳ್ಳನ್ನು ನಂಬುವಂತೆ ಒಳಪಡಿಸುತ್ತಾನೆ.