TSK

TSK · ಯೆಶಾಯ 19:22

مراجع Treasury of Scripture Knowledge في ಕನ್ನಡ IRV.

العودة إلى المقطع

ನಿನ್ನ ಮೇಲೆಯೂ, ನಿನ್ನ ಪ್ರಜೆಗಳ ಮೇಲೆಯೂ ಮತ್ತು ಪರಿವಾರದವರ ಮೇಲೆಯೂ ಕಪ್ಪೆಗಳು ಹರಡಿಕೊಳ್ಳುವವು.’” ಎಂದನು.

“ನೀನು ಹಿಂದಿರುಗಿ ಹೋಗಿ, ನನ್ನ ಜನಗಳ ಪ್ರಭುವಾಗಿರುವ ಹಿಜ್ಕೀಯನಿಗೆ, ‘ನಿನ್ನ ಪಿತೃವಾದ ದಾವೀದನ ದೇವರಾದ ಯೆಹೋವನು ಹೇಳಿದ್ದೇನೆಂದರೆ, ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನು ನೋಡಿದ್ದೇನೆ. ನೀನು ಗುಣಹೊಂದಿ ಮೂರನೆಯ ದಿನ ನನ್ನ ಆಲಯಕ್ಕೆ ಬರುವೆ.

ಕಣ್ಣಿನಿಂದ ನೋಡದಂತೆಯೂ, ಕಿವಿಯಿಂದ ಕೇಳದಂತೆಯೂ, ತಮ್ಮ ಹೃದಯದಿಂದ ಗ್ರಹಿಸಿ ನನ್ನ ಕಡೆಗೆ ತಿರಿಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೊಂದದಂತೆ ಈ ಜನರ ಹೃದಯವನ್ನು ಕೊಬ್ಬಿಸಿ, ಕಿವಿಯನ್ನು ಮಂದಗೊಳಿಸಿ, ಅವರ ಕಣ್ಣಿಗೆ ಅಂಟು ಬಳಿ” ಎಂದು ನನಗೆ ಹೇಳಿದನು.

ಯೆಹೋವನ ಈ ಮಾತನ್ನು ಕೇಳಿರಿ, “ಐಗುಪ್ತದ ಆದಾಯವೂ, ಕೂಷಿನ ವ್ಯಾಪಾರವೂ, ಎತ್ತರದ ಮನುಷ್ಯರಾದ ಸೆಬಾಯರೂ ನಿಮ್ಮಲ್ಲಿಗೆ ಸೇರಿ ನಿಮ್ಮವರಾಗಿ ನಿಮ್ಮನ್ನು ಅನುಸರಿಸುವರು. ಸಂಕೋಲೆಗಳನ್ನು ಕಟ್ಟಿಕೊಂಡು ಬಂದು ನಿಮ್ಮ ಮುಂದೆ ಅಡ್ಡಬಿದ್ದು ಹೀಗೆ ಅರಿಕೆಮಾಡುವರು, ‘ದೇವರು ನಿಜವಾಗಿ ನಿಮ್ಮಲ್ಲಿದ್ದಾನೆ. ಇನ್ನು ಯಾವ ದೇವರೂ ಇಲ್ಲವೇ ಇಲ್ಲ.’”

¶ “ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನಲ್ವತ್ತು ವರ್ಷಗಳ ಮೇಲೆ ನಾನು ಐಗುಪ್ತ್ಯರನ್ನು ಅವರು ಚದುರಿ ಹೋಗಿದ್ದ ಜನಾಂಗಗಳೊಳಗಿಂದ ಅವರನ್ನು ಒಟ್ಟುಗೂಡಿಸುವೆನು.

ಒಂದೆರಡು ದಿನದ ಮೇಲೆ ಆತನು ನಮ್ಮನ್ನು ಬದುಕಿಸುವನು; ಮೂರನೆಯ ದಿನದಲ್ಲಿ ಆತನು ನಮ್ಮನ್ನೆಬ್ಬಿಸಲು ಆತನ ಸಾನ್ನಿಧ್ಯದಲ್ಲಿ ಬಾಳುವೆವು.

¶ “ನಿಮ್ಮ ಪಟ್ಟಣಗಳಲ್ಲಿ ನಿಮ್ಮ ಹಲ್ಲಿಗೆ ಏನೂ ಸಿಕ್ಕದಂತೆಯೂ ಮತ್ತು ನಿಮ್ಮ ಸಕಲ ನಿವಾಸಗಳಲ್ಲಿ ಅನ್ನದ ಕೊರತೆಯಾಗುವ ಹಾಗೆಯೂ ಮಾಡಿದೆನು. ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ” ಇದು ಯೆಹೋವನ ನುಡಿ.

ನಿಮ್ಮ ಪೂರ್ವಿಕರಿಗೆ ವಿವರವಾಗಿ ಹೇಳಿದ್ದೇನೆಂದರೆ; “‘ನೀನು ಈ ಜನರ ಬಳಿಗೆ ಹೋಗಿ ಅವರಿಗೆ; ನೀವು ಕಿವಿಯಿದ್ದು ಕೇಳಿಕೊಂಡರೂ ತಿಳಿದುಕೊಳ್ಳುವುದೇ ಇಲ್ಲ; ಕಣ್ಣಿದ್ದು ನೋಡಿದರೂ ಕಾಣುವುದೇ ಇಲ್ಲ, ಎಂಬುದಾಗಿ ಹೇಳು.