TSK

TSK · ಯೆಶಾಯ 2:21

مراجع Treasury of Scripture Knowledge في ಕನ್ನಡ IRV.

العودة إلى المقطع

ನನ್ನ ಮಹಿಮೆಯು ನಿನ್ನೆದುರಿಗೆ ದಾಟಿಹೋಗುವಾಗ ನಾನು ಈ ಬಂಡೆಯ ಸಂದಿನಲ್ಲಿ ನಿನ್ನನ್ನು ಇರಿಸಿ ನನ್ನ ಮುಂದೆ ದಾಟಿ ಹೋಗುವ ತನಕ ನಿನ್ನನ್ನು ಕೈಯಿಂದ ಮರೆಮಾಡುವೆನು.

ಅವರು ಭಯಂಕರವಾದ ತಗ್ಗುಗಳ ಸಂದುಗಳಲ್ಲಿ ವಾಸಿಸತಕ್ಕವರು, ಭೂಮಿಯಲ್ಲಿಯೂ, ಬಂಡೆಗಳಲ್ಲಿಯೂ ಇರುವ ಗುಹೆಗಳೇ ಅವರ ಮನೆಗಳು.

ಗವಿಯೊಳಗೆ ನುಗ್ಗು, ಯೆಹೋವನ ಭಯಂಕರತನಕ್ಕೂ, ಅತ್ಯುನ್ನತ ಮಹಿಮೆಗೂ ಹೆದರಿ ಭೂಮಿಯಲ್ಲಿ ಅವಿತುಕೋ.

ಅವು ಬಂದು ಕಡಿದಾದ ಕಣಿವೆಗಳಲ್ಲಿಯೂ, ಬಂಡೆಗಳ ಸಂದುಗೊಂದುಗಳಲ್ಲಿಯೂ, ಎಲ್ಲಾ ಮುಳ್ಳು ಪೊದೆಗಳಲ್ಲಿಯೂ, ಗೋಮಾಳಗಳಲ್ಲಿಯೂ ಮುತ್ತಿಕೊಳ್ಳುವವು.