TSK

TSK · ಯೆಶಾಯ 2:22

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಹೀಗಿರಲು ಯೆಹೋವನಾದ ದೇವರು ನೆಲದ ಮಣ್ಣಿನಿಂದ ಮನುಷ್ಯನನ್ನು ಸೃಷ್ಟಿಸಿ ಅವನ ಮೂಗಿನಲ್ಲಿ ಜೀವಶ್ವಾಸವನ್ನು ಊದಿದನು. ಆಗ ಮನುಷ್ಯನು ಬದುಕುವ ಪ್ರಾಣಿಯಾದನು.

ನನ್ನ ಆತ್ಮವು ಈ ಅಸ್ಥಿಪಂಜರದಲ್ಲಿ ಉಳಿಯುವುದಕ್ಕಿಂತಲೂ, ಉಸಿರುಕಟ್ಟಿ ಸಾಯುವುದೇ ಲೇಸೆಂದು ಬಯಸುತ್ತದೆ.

ಮನುಷ್ಯನು ಎಷ್ಟು ಮಾತ್ರದವನು, ಅವನನ್ನು ನೀನು ಏಕೆ ಸ್ಮರಿಸಬೇಕು? ಮಾನವನು ಎಷ್ಟರವನು? ಅವನಲ್ಲಿ ಏಕೆ ಲಕ್ಷ್ಯವಿಡಬೇಕು?

ಯೆಹೋವನೇ, ಮನುಷ್ಯನು ಎಷ್ಟು ಮಾತ್ರದವನು? ಅವನನ್ನು ನೀನು ಏಕೆ ನೆನಸಬೇಕು? ಮಾನವನು ಎಷ್ಟರವನು? ಅವನಲ್ಲಿ ಏಕೆ ಲಕ್ಷ್ಯವಿಡಬೇಕು?

ಆಹಾ, ಆತನ ಗಣನೆಯಲ್ಲಿ ಜನಾಂಗಗಳು ಕಪಿಲೆಯಿಂದ ಉದುರುವ ತುಂತುರಿನಂತೆಯೂ, ತಕ್ಕಡಿಯಲ್ಲಿನ ಧೂಳಿನ ಹಾಗೂ ಇರುತ್ತವೆ. ಇಗೋ, ದ್ವೀಪಗಳನ್ನು ಅಣುರೇಣುವಿನಂತೆ ಎತ್ತುತ್ತಾನೆ.

ನಾಳೆ ಏನಾಗುವುದೋ ನಿಮಗೆ ತಿಳಿಯದು. ನಿಮ್ಮ ಜೀವಮಾನವು ಎಂಥದ್ದು? ನೀವು ಸ್ವಲ್ಪ ಹೊತ್ತು ಕಾಣಿಸಿಕೊಂಡು ಆಮೇಲೆ ಕಾಣದೆ ಹೋಗುವ ಹಬೆಯಂತಿದ್ದೀರಿ.