¶ ಅವನು ಕುದುರೆಯ ದಂಡನ್ನು ಕೂಡಿಸಿಕೊಳ್ಳಬಾರದು. ಕುದುರೆಗಳನ್ನು ಕೊಂಡುಕೊಳ್ಳುವುದಕ್ಕಾಗಿ ತನ್ನ ಪ್ರಜೆಗಳನ್ನು ಐಗುಪ್ತದೇಶಕ್ಕೆ ಹೋಗಗೊಡಿಸಬಾರದು. ನೀವು ಇನ್ನು ಆ ದೇಶಕ್ಕೆ ಹೋಗಲೇಬಾರದು ಎಂದು ಯೆಹೋವನು ಆಜ್ಞಾಪಿಸಿದ್ದಾನಲ್ಲಾ.
TSK
TSK · ಯೆಶಾಯ 2:7
مراجع Treasury of Scripture Knowledge في ಕನ್ನಡ IRV.
ಅರಸನಾದ ಸೊಲೊಮೋನನ ಪಾನಪಾತ್ರೆಗಳು, ಲೆಬನೋನಿನ ತೋಪು ಎನಿಸಿಕೊಳ್ಳುವ ಮಂದಿರದಲ್ಲಿದ್ದ ಎಲ್ಲಾ ಪಾನಪಾತ್ರೆಗಳು ಬಂಗಾರದವುಗಳು. ಸೊಲೊಮೋನನ ಕಾಲದಲ್ಲಿ ಬೆಳ್ಳಿಗೆ ಬೆಲೆ ಇರಲಿಲ್ಲವಾದುದರಿಂದ ಅವನಲ್ಲಿ ಬೆಳ್ಳಿಯ ಸಾಮಾನು ಒಂದಾದರೂ ಕಾಣಿಸಲಿಲ್ಲ.
ಬಂಗಾರವನ್ನು ಕೂಡಿಸಿಟ್ಟು ತಮ್ಮ ಮನೆಗಳನ್ನು ಬೆಳ್ಳಿಯಿಂದ ತುಂಬಿಸಿದ ಅಧಿಪತಿಗಳ ಸಂಗಡಲೂ ವಿಶ್ರಮಿಸಿಕೊಳ್ಳುತ್ತಿದ್ದೆನು.
ನೀವು, ‘ಬೇಡವೇ ಬೇಡ, ಕುದುರೆಗಳ ಮೇಲೆ ಓಡುವೆವು’ ಎಂದುಕೊಂಡಿದ್ದರಿಂದ ನೀವು ಓಡಿಯೇ ಹೋಗುವಿರಿ, ನೀವು, ‘ವೇಗವಾಗಿ ಸವಾರಿ ಮಾಡುವೆವು’ ಎಂದುಕೊಂಡಿದ್ದರಿಂದ ವೇಗಿಗಳೇ ನಿಮ್ಮನ್ನು ಅಟ್ಟಿಬಿಡುವರು.
ಪಂಜರದಲ್ಲಿ ಪಕ್ಷಿಗಳು ತುಂಬಿರುವಂತೆ ಅವರ ಮನೆಗಳಲ್ಲಿ ಮೋಸದ ಫಲವು ತುಂಬಿದೆ; ಇದರಿಂದ ಧನವಂತರಾಗಿದ್ದಾರೆ.
¶ ಯೆಹೋವನು ಇಂತೆನ್ನುತ್ತಾನೆ, “ಆ ದಿನಗಳಲ್ಲಿ ನಿನ್ನ ಕುದುರೆಗಳನ್ನು ನಿನ್ನೊಳಗಿಂದ ಕಡಿದುಬಿಡುವೆನು. ನಿನ್ನ ರಥಗಳನ್ನು ನಾಶಗೊಳಿಸುವೆನು.
ಎಲ್ಲಾ ದೇಶಗಳವರೂ ಅವಳ ಜಾರತ್ವವೆಂಬ ಕ್ರೌರ್ಯದ ದ್ರಾಕ್ಷಾರಸವನ್ನು ಕುಡಿದರು. ಅವಳೊಂದಿಗೆ ಭೂಲೋಕದ ರಾಜರು ವ್ಯಭಿಚಾರ ಮಾಡಿದರು. ಅವಳ ಭೋಗವಿಲಾಸದಿಂದ ಭೂಲೋಕದ ವರ್ತಕರು ಐಶ್ವರ್ಯವಂತರಾದರು” ಎಂದು ಹೇಳಿದನು.