ಯೆಹೋವನ ಸೇನಾಧಿಪತಿಯು “ನಿನ್ನ ಕಾಲಿನ ಕೆರಗಳನ್ನು ತೆಗೆದುಹಾಕು, ಏಕೆಂದರೆ ನೀನು ನಿಂತಿರುವ ಸ್ಥಳವು ಪರಿಶುದ್ಧವಾದದ್ದು” ಎಂದು ಹೇಳಿದನು. ಯೆಹೋಶುವನು ಹಾಗೆಯೇ ಮಾಡಿದನು.
TSK
TSK · ಯೆಶಾಯ 20:2
مراجع Treasury of Scripture Knowledge في ಕನ್ನಡ IRV.
¶ ಅನಂತರ ದಾವೀದನು ತನ್ನ ಮನೆಯವರನ್ನು ಆಶೀರ್ವದಿಸುವುದಕ್ಕೆ ಹೋದಾಗ ಸೌಲನ ಮಗಳಾದ ಮೀಕಲಳು ಅವನೆದುರಿಗೆ ಬಂದು, “ಈ ಹೊತ್ತು ಇಸ್ರಾಯೇಲರ ಅರಸನು ಎಂಥ ಗೌರವದಿಂದ ನಡೆದುಕೊಂಡನು. ಹುಚ್ಚರಲ್ಲೊಬ್ಬನಂತೆ ತನ್ನ ಜನರ ದಾಸಿಯರ ಮುಂದೆ ಬೆತ್ತಲೆಯಾಗಿದ್ದನಲ್ಲಾ” ಅಂದಳು.
¶ ಆಗ ಯೋಬನು ಎದ್ದು ಮೇಲಂಗಿಯನ್ನು ಹರಿದುಕೊಂಡು, ತಲೆ ಬೋಳಿಸಿಕೊಂಡು ನೆಲದ ಮೇಲೆ ಅಡ್ಡಬಿದ್ದು ದೇವರನ್ನು ಆರಾಧಿಸಿ,
¶ ಯೆಹೋವನು ನನಗೆ, “ನೀನು ಹೋಗಿ ನಾರಿನ ನಡುಕಟ್ಟನ್ನು ಕೊಂಡುಕೊಂಡು ಸೊಂಟಕ್ಕೆ ಬಿಗಿದುಕೋ, ನೀರಿನಲ್ಲಿ ನೆನಸಿಡಬೇಡ” ಎಂದು ಅಪ್ಪಣೆಕೊಟ್ಟನು.
ನಾನು ದಿನಗಳ ಲೆಕ್ಕದ ಪ್ರಕಾರ ಅವರ ಪಾಪದ ವರ್ಷಗಳನ್ನು ನಿನಗೆ ನೇಮಿಸಿದ್ದೇನೆ. ಅವು ಮುನ್ನೂರತೊಂಬತ್ತು ದಿನಗಳಾಗಿವೆ. ಹೀಗೆ ನೀನು ಇಸ್ರಾಯೇಲ್ ವಂಶದವರ ಪಾಪವನ್ನು ನೀನು ಹೊರಬೇಕು.
ರುಮಾಲುಗಳು ನಿಮ್ಮ ತಲೆಯ ಮೇಲೆಯೂ, ಕೆರಗಳು ನಿಮ್ಮ ಪಾದಗಳ ಅಡಿಯಲ್ಲಿಯೂ ಇರುವವು; ನೀವು ಗೋಳಾಡುವುದಿಲ್ಲ, ಅಳುವುದಿಲ್ಲ; ನಿಮ್ಮ ಅಧರ್ಮದಿಂದ ಕ್ಷೀಣವಾಗಿ ಹೋಗುವಿರಿ, ಒಬ್ಬರ ಸಂಗಡಲೊಬ್ಬರು ನರಳುವಿರಿ.
ಶಾಫೀರಿನವರೇ, ಬೆತ್ತಲೆಯಾಗಿ ಅವಮಾನಪಟ್ಟು ತೊಲಗಿರಿ. ಚಾನಾನಿನವರು ಹೊರಡರು. ಬೇತೆಚೇಲಿನ ಗೋಳಾಟವು ಅದರ ಬೆಂಬಲವನ್ನು ನಿಮಗೆ ತಪ್ಪಿಸುವುದು.
¶ ಯೋಹಾನನ ಉಡುಪು ಒಂಟೆಯ ಕೂದಲಿನಿಂದ ಮಾಡಿತ್ತು, ಅವನು ಸೊಂಟಕ್ಕೆ ಒಂದು ಚರ್ಮದ ನಡುಕಟ್ಟನ್ನು ಕಟ್ಟಿಕೊಳ್ಳುತ್ತಿದ್ದನು. ಮಿಡತೆ ಮತ್ತು ಕಾಡುಜೇನು ಅವನ ಆಹಾರವಾಗಿತ್ತು.
ಆಗ ಯೇಸುವಿಗೆ ಪ್ರಿಯನಾಗಿದ್ದ ಶಿಷ್ಯನು ಪೇತ್ರನಿಗೆ, “ಆತನು ಕರ್ತನೇ” ಎಂದು ಹೇಳಿದನು. ಸೀಮೋನ್ ಪೇತ್ರನು ಅದನ್ನು ಕೇಳಿ ತಾನು ತೆಗೆದು ಬಿಟ್ಟಿದ್ದ ತನ್ನ ಮೇಲಂಗಿಯನ್ನು ಸುತ್ತಿಕೊಂಡು ಸಮುದ್ರದೊಳಗೆ ಧುಮುಕಿದನು.
ಇದಲ್ಲದೆ ನನ್ನ ಇಬ್ಬರು ಸಾಕ್ಷಿಗಳು ಗೋಣಿತಟ್ಟುಗಳನ್ನು ಹೊದ್ದುಕೊಂಡು ಸಾವಿರದ ಇನ್ನೂರ ಅರವತ್ತು ದಿನಗಳ ತನಕ ಪ್ರವಾದಿಸುವ ಹಾಗೆ ಅವರಿಗೆ ಅಧಿಕಾರ ಕೊಡುವೆನು.”