TSK

TSK · ಯೆಶಾಯ 21:3

مراجع Treasury of Scripture Knowledge في ಕನ್ನಡ IRV.

العودة إلى المقطع

ಮನಸ್ಸಿನಲ್ಲಿ ಯಾವಾಗಲೂ ಪ್ರಾಣಭಯವಿರುವುದರಿಂದಲೂ ಕಣ್ಣಿನಿಂದ ಭಯಂಕರವಾದ ಸಂಗತಿಗಳನ್ನು ನೋಡುವುದರಿಂದಲೂ ನೀವು ಹೊತ್ತಾರೆಯಲ್ಲಿ, “ಅಯ್ಯೋ, ಅಯ್ಯೋ ಸಾಯಂಕಾಲ ಯಾವಾಗ ಬರುವುದೋ” ಎಂದೂ, ಸಾಯಂಕಾಲದಲ್ಲಿ, “ಅಯ್ಯೋ, ಅಯ್ಯೋ! ಬೆಳಿಗ್ಗೆ ಯಾವಾಗ ಬರುವುದೋ” ಎಂದು ಕೊರಗುವಿರಿ.

ಅವರು ಭಯಪಡುವರು. ಪ್ರಸವ ವೇದನೆಯಲ್ಲಿರುವ ಸ್ತ್ರೀಯಂತೆ ಯಾತನೆ, ಸಂಕಟಗಳನ್ನು ಅನುಭವಿಸುವರು. ಒಬ್ಬರನ್ನೊಬ್ಬರು ನೋಡಿ ವಿಸ್ಮಯಪಡುವರು. ಅವರ ಮುಖಗಳು ತಲ್ಲಣಗೊಂಡು ಬೆಂಕಿಯಿಂದ ಉರಿಯುವವು.

ಹೀಗಿರಲು ಸಿಬ್ಮದ ದ್ರಾಕ್ಷಾಲತೆಯ ನಿಮಿತ್ತ ಯಜ್ಜೇರಿನವರೊಂದಿಗೆ ನಾನು ಅಳುವೆನು. ಹೆಷ್ಬೋನೇ, ಎಲ್ಲಾಲೇ ನನ್ನ ಕಣ್ಣೀರಿನಿಂದ ನಿಮ್ಮನ್ನು ತೋಯಿಸುವೆನು. ನಿಮ್ಮ ಹಣ್ಣಿನ ಮೇಲೆಯೂ, ನಿಮ್ಮ ಬೆಳೆಯ ಮೇಲೆಯೂ ಬಿದ್ದು ಆರ್ಭಟಿಸುವುದನ್ನು ನಿಲ್ಲಿಸಿಬಿಟ್ಟಿದ್ದೇನೆ.

ಹೆರಿಗೆ ಹತ್ತಿರವಾದ ಗರ್ಭಿಣಿಯು ಯಾತನೆಪಡುತ್ತಾ, ಬೇನೆಯಿಂದ ಕೂಗಿ ಅಳುವಂತೆ ಯೆಹೋವನೇ, ನಾವು ನಿನ್ನ ಮುಂದೆ ಸಹಾಯಕ್ಕಾಗಿ ಕೂಗಿ ದುಃಖಿಸಿದ್ದೇವೆ.

ಇಗೋ, ಬೊಚ್ರದ ಮೇಲೆ ಎರಗಬೇಕೆಂದು ಶತ್ರುವು ರಣಹದ್ದಿನಂತೆ ತನ್ನ ರೆಕ್ಕೆಗಳನ್ನು ಹರಡಿ ಹಾರಿ ಏರುವನು; ಆ ದಿನದಲ್ಲಿ ಎದೋಮಿನ ಶೂರರ ಎದೆಯು ಹೆರುವ ಹೆಂಗಸಿನ ಎದೆಯಂತೆ ಅದರುವುದು.

¶ ಅದೇ ಸಮಯದಲ್ಲಿ ಒಬ್ಬನ ಕೈಯ ಬೆರಳುಗಳು ದೀಪಸ್ತಂಭದ ಎದುರಿಗೆ ಅರಮನೆಯ ಸುಣ್ಣದ ಗೋಡೆಯ ಮೇಲೆ ಬರೆಯಲು ತೊಡಗಿದವು; ಬರೆಯುತ್ತಿದ್ದ ಹಸ್ತವನ್ನು ರಾಜನು ನೋಡಿದನು.

ಅದು ನನಗೆ ಕೇಳಿಸಲು ನನ್ನ ಒಡಲು ನಡುಗಿತು, ಆ ಶಬ್ದಕ್ಕೆ ನನ್ನ ತುಟಿಗಳು ಅದರಿದವು. ಕ್ಷಯವು ನನ್ನ ಎಲುಬುಗಳಲ್ಲಿ ಸೇರಿತು. ನಾನು ನಿಂತ ಹಾಗೆಯೇ ನಡುಗಿದೆನು. ವಿಪತ್ಕಾಲವು ನಮ್ಮನ್ನು ಹಿಂಸಿಸುವ ಜನರನ್ನು ಎದುರಾಯಿಸಿ ಅವರ ಮೇಲೆ ಬೀಳುವವರೆಗೂ ನಾನು ಅದಕ್ಕಾಗಿ ತಾಳ್ಮೆಯಿಂದ ಎದುರುನೋಡುವೆನು.