TSK

TSK · ಯೆಶಾಯ 22:2

مراجع Treasury of Scripture Knowledge في ಕನ್ನಡ IRV.

العودة إلى المقطع

ನಿಮ್ಮ ಉಲ್ಲಾಸದ ಪಟ್ಟಣವು ಇದೇನೋ? ಅದರ ಉತ್ಪತ್ತಿಯು ಪುರಾತನವಾದದ್ದೇ ಸರಿ; ಅವರ ಕಾಲುಗಳು ಅವರನ್ನು ದೂರ ದೇಶದಲ್ಲಿ ವಾಸಿಸುವುದಕ್ಕೆ ಕರೆದುಕೊಂಡು ಹೋಗುವವು.

ಆತನು ಅಶ್ಶೂರದ ಅರಸನನ್ನು ಕುರಿತು, “ಅವನು ಪಟ್ಟಣವನ್ನು ಸಮೀಪಿಸುವುದಿಲ್ಲ, ಅದಕ್ಕೆ ಬಾಣವನ್ನೆಸೆಯುವುದಿಲ್ಲ, ಗುರಾಣಿ ಹಿಡಿದಿರುವವರನ್ನು ಕಳುಹಿಸುವುದಿಲ್ಲ, ಅದನ್ನು ಕೆಡವಿ ಬಿಡುವುದಕ್ಕೋಸ್ಕರ ಅದರ ಎದುರಾಗಿ ಮಣ್ಣಿನ ದಿಬ್ಬವನ್ನು ಮಾಡುವುದಿಲ್ಲ.

ನಾನು ಊರ ಹೊರಗೆ ಹೋದರೆ ಇಗೋ, ಖಡ್ಗದಿಂದ ಹತರಾದವರು, ಊರೊಳಗೆ ಬಂದರೆ ಇಗೋ, ಕ್ಷಾಮದಿಂದ ಕೊರಗುವವರು! ಪ್ರವಾದಿಗಳೂ ಯಾಜಕರೂ ತಮಗೆ ಗೊತ್ತಿಲ್ಲದ ದೇಶಕ್ಕೆ ಗಡೀಪಾರಾಗಿದ್ದಾರೆ ಎಂಬ ಮಾತುಗಳನ್ನು ಹೇಳು” ಎಂದನು.

ಘೋರಕ್ಷಾಮದ ದೆಸೆಯಿಂದ ಪಟ್ಟಣದಲ್ಲಿರುವವರಿಗೆ ಆಹಾರ ಸಿಕ್ಕದೆಹೋಯಿತು. ಪಟ್ಟಣಕ್ಕೆ ಮುತ್ತಿಗೆ ಹಾಕಿದ್ದ ಕಸ್ದೀಯರು ಹನ್ನೊಂದನೆಯ ವರ್ಷದ ನಾಲ್ಕನೆಯ ತಿಂಗಳಿನ ಒಂಭತ್ತನೆಯ ದಿನದಲ್ಲಿ,

ಹಸಿವೆಯಿಂದ ಹತರಾದವರ ಗತಿಗಿಂತಲೂ ಖಡ್ಗದಿಂದ ಹತರಾದವರ ಗತಿಯೇ ಲೇಸು. ಭೂಮಿಯ ಫಲಗಳಿಲ್ಲದೆ ಕ್ಷಾಮದ ಪೆಟ್ಟನ್ನು ತಿಂದವರು ಕ್ಷಯಿಸುತ್ತಾ ಬರುತ್ತಾರಲ್ಲಾ.

ಆಹಾ! ಆ ಪ್ರಮುಖರು ಆಪತ್ತಿನ ದಿನದ ಯೋಚನೆಯನ್ನು ದೂರಕ್ಕೆ ತಳ್ಳುತ್ತಾರೆ ಮತ್ತು ಅನ್ಯಾಯದ ಪೀಠಗಳನ್ನು ಹತ್ತಿರಕ್ಕೆ ತಂದುಕೊಳ್ಳುತ್ತಾರೆ.