¶ ಕಾನಾನ್ ವಂಶದಲ್ಲಿ ಮೊದಲು ಹುಟ್ಟಿದವನು ಸೀದೋನ್; ಆ ಮೇಲೆ ಹೇತ್ ಹುಟ್ಟಿದನು.
TSK
TSK · ಯೆಶಾಯ 23:11
مراجع Treasury of Scripture Knowledge في ಕನ್ನಡ IRV.
ಮೋಶೆ ಸಮುದ್ರದ ಮೇಲೆ ಕೈಚಾಚಿದಾಗ, ಯೆಹೋವನು ಆ ರಾತ್ರಿಯೆಲ್ಲಾ ಮೂಡಣ ದಿಕ್ಕಿನಿಂದ ಬಲವಾದ ಬಿರುಗಾಳಿಯನ್ನು ಬೀಸುವಂತೆ ಮಾಡಿ ಸಮುದ್ರದ ನೀರನ್ನು ಒಂದು ಕಡೆಗೆ ನೂಕಿ ಅದರ ತಳದಲ್ಲಿ ಒಣನೆಲವು ಕಾಣಿಸುವಂತೆ ಮಾಡಿದನು. ನೀರು ಇಬ್ಭಾಗವಾಯಿತು.
ಜನಾಂಗಗಳು ಕಳವಳಗೊಂಡವು; ರಾಜ್ಯಗಳು ತತ್ತರಿಸಿದವು. ಆತನು ಗರ್ಜಿಸಲು ಭೂಲೋಕವೆಲ್ಲಾ ಕರಗಿ ಹೋಯಿತು.
ಯೆಹೋವನು ಭೂಮಂಡಲವನ್ನು ನಡುಗಿಸಲು ಏಳುವಾಗ, ಮನುಷ್ಯರು ಆತನ ಭಯಂಕರ ಕೋಪಕ್ಕೂ, ಅತ್ಯುನ್ನತ ಮಹಿಮೆಗೂ ಹೆದರಿ ಬಂಡೆಗಳ ಗವಿಗಳಲ್ಲಿಯೂ, ನೆಲದ ಹಳ್ಳಕೊಳ್ಳಗಳಲ್ಲಿಯೂ ಅಡಗಿಕೊಳ್ಳುವರು.
ನಿನ್ನನ್ನು ನೋಡುವವರು ನಿನ್ನನ್ನು ದಿಟ್ಟಿಸಿ ನೋಡಿ, ಯೋಚಿಸುತ್ತಾ, ‘ಭೂಮಿಯನ್ನು ನಡುಗಿಸಿ, ರಾಜ್ಯಗಳನ್ನು ಕದಲಿಸಿ ಪಟ್ಟಣಗಳನ್ನು ನಾಶಮಾಡಿ,
ವಿಶಾಲವಾದ ಸಾಗರದ ಮೇಲೆ ತಂದ ಶೀಹೋರಿನ ಧಾನ್ಯದಿಂದಲೂ, ನೈಲ್ ನದಿಯ ಬೆಳೆಯಿಂದಲೂ ಆದಾಯಹೊಂದಿದ ನಿಮ್ಮ ನಗರವು ಅನೇಕ ಜನಾಂಗಗಳಿಗೆ ವ್ಯಾಪಾರ ಸ್ಥಳವಾಗಿತ್ತು.
ಖಡ್ಗವು ವಿಶ್ರಾಂತಿಗೊಳ್ಳುವುದು ಹೇಗೆ? ಅಷ್ಕೆಲೋನಿನ ಮತ್ತು ಕರಾವಳಿಯ ವಿಷಯವಾಗಿ ಯೆಹೋವನು ಅದಕ್ಕೆ ಅಪ್ಪಣೆಕೊಟ್ಟನಲ್ಲಾ; ಅಲ್ಲಿಗೆ ಅದನ್ನು ನೇಮಿಸಿದ್ದಾನೆ.”
¶ ಕರ್ತನಾದ ಯೆಹೋವನು ತೂರಿಗೆ ಹೀಗೆ ಹೇಳುತ್ತಾನೆ, “ನಿನ್ನ ಪತನದ ಶಬ್ದಕ್ಕೂ, ಗಾಯಪಟ್ಟವರು ಕೂಗುವಾಗಲೂ, ನಿನ್ನ ಮಧ್ಯದಲ್ಲಿ ಕೊಲೆಯಾಗುವಾಗಲೂ ದ್ವೀಪಗಳು ಅದರುವುದಿಲ್ಲವೇ?
ನಾನು ಅದನ್ನು ಪ್ರೇತಗಳ ಜೊತೆಗೆ ಸೇರಿಸಬೇಕೆಂದು ಪಾತಾಳಕ್ಕೆ ತಳ್ಳಿಬಿಟ್ಟಾಗ, ಅದು ಬಿದ್ದ ಶಬ್ದಕ್ಕೆ ಸಕಲ ಜನಾಂಗಗಳು ನಡುಗಿದವು ಮತ್ತು ಅಧೋಲೋಕದ ಪಾಲಾದ ಏದೆನಿನ ಎಲ್ಲಾ ಮರಗಳು, ಲೆಬನೋನಿನ ಉತ್ತಮೋತ್ತಮವಾದ ವೃಕ್ಷಗಳು, ಅಂತು ನೀರಾವರಿಯ ಸಕಲ ವನಸ್ಪತಿಗಳೂ ಅಲ್ಲಿ ಸಂತೈಸಿಕೊಂಡವು.
¶ ಅಶ್ಶೂರವೇ, ನಿನ್ನ ಹೆಸರಿನ ಸಂತಾನ ಬೀಜವು ಇನ್ನು ಬಿತ್ತಲ್ಪಡಬಾರದೆಂದು ಯೆಹೋವನಾದ ನಾನು ಆಜ್ಞಾಪಿಸಿದ್ದೇನೆ; ನಿನ್ನ ದೇವರ ಮಂದಿರದೊಳಗಿಂದ ಕೆತ್ತಿದ ವಿಗ್ರಹವನ್ನೂ, ಎರಕದ ಬೊಂಬೆಯನ್ನೂ ಕಡಿದುಬಿಡುವೆನು; ನಿನಗೆ ಸಮಾಧಿಯನ್ನು ಸಿದ್ಧಮಾಡುವೆನು; ನಿನ್ನ ಪಾಪಗಳು ದುರ್ವಾಸನೆ ಬೀರುತ್ತಿವೆ.
ತೂರ್ ಪಟ್ಟಣವು ಕೋಟೆಯನ್ನು ಕಟ್ಟಿಕೊಂಡು ಬೆಳ್ಳಿಯನ್ನು ಧೂಳಿನಂತೆಯೂ, ಬಂಗಾರವನ್ನು ಬೀದಿಯ ಬದಿಯ ಕಸದ ರಾಶಿಯಂತೆ ಮಾಡಿಕೊಂಡಿದೆ.
ಮತ್ತು ಆತನು ಉಪದೇಶಮಾಡಿ, ‹“‘ನನ್ನ ಆಲಯವು ಎಲ್ಲಾ ಜನಾಂಗಗಳಿಗೂ› ‹ಪ್ರಾರ್ಥನಾಲಯವೆನಿಸಿಕೊಳ್ಳುವುದು’ ಎಂದು ಬರೆದಿದೆಯಲ್ಲಾ?› ‹ಆದರೆ›‹‘ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ’”› ಎಂದು ಹೇಳಿದನು.