ಸಮಸ್ತ ಲೋಕದ ಭಾಷೆಯನ್ನು ಯೆಹೋವನು ಅಲ್ಲಿ ಗಲಿಬಿಲಿ ಮಾಡಿ, ಅವರನ್ನು ಭೂಲೋಕದಲ್ಲೆಲ್ಲಾ ಚದರಿಸಿದ್ದರಿಂದ ಆ ಪಟ್ಟಣಕ್ಕೆ ಬಾಬೆಲ್ (ದೇವರ ಬಾಗಿಲು) ಎಂಬ ಹೆಸರಾಯಿತು.
TSK
TSK · ಯೆಶಾಯ 24:10
مراجع Treasury of Scripture Knowledge في ಕನ್ನಡ IRV.
ಅವನು ಯೆಹೋವನ ಆಲಯವನ್ನೂ, ಅರಸನ ಅರಮನೆಯನ್ನೂ ಯೆರೂಸಲೇಮಿನ ಎಲ್ಲಾ ದೊಡ್ಡ ಮನೆಗಳನ್ನೂ ಹಾಗೂ ಪಟ್ಟಣದ ಮುಖ್ಯ ಕಟ್ಟಡಗಳನ್ನೂ ಸುಟ್ಟುಬಿಟ್ಟನು.
ಪಟ್ಟಣಗಳು ಹಾಳೂರಾಗಿ ಉಳಿದಿದೆ; ನಾಶವು ಹೆಬ್ಬಾಗಿಲಿಗೆ ಬಡಿದಿದೆ.
ಆತನು ಹೆಮ್ಮೆಯಿಂದ ವಾಸಿಸುವವರನ್ನು ಇಳಿಸಿದ್ದಾನೆ. ಅವರ ಉನ್ನತ ಪಟ್ಟಣವನ್ನು ತಗ್ಗಿಸಿದ್ದಾನೆ. ಅದನ್ನು ಕೆಡವಿ, ನೆಲಸಮಮಾಡಿ ಧೂಳಿಗೆ ತಂದಿದ್ದಾನೆ.
ಅರಮನೆಯು ಪಾಳುಬೀಳುವುದು, ಗಿಜಿಗುಟ್ಟುವ ಪಟ್ಟಣವು ನಿರ್ಜನವಾಗುವುದು, ಓಫೆಲ್ ಗುಡ್ಡವೂ, ಗೋಪುರವೂ ಶಾಶ್ವತವಾದ ಗುಹೆಗಳಾಗಿಯೂ, ಕಾಡುಕತ್ತೆಗಳಿಗೆ ಉಲ್ಲಾಸಕರವಾದ ಸ್ಥಳವಾಗಿಯೂ, ದನಕುರಿಗಳ ಹಿಂಡುಗಳಿಗೆ ಹುಲ್ಲುಗಾವಲುಗಳಾಗಿಯೂ ಇರುವುದು.
ಅಲ್ಲಿನ ಅರಮನೆಗಳಲ್ಲಿ ಮುಳ್ಳುಗಳು ಬೆಳೆಯುವವು, ಅದರ ಕೋಟೆಗಳಲ್ಲಿ ಮುಳ್ಳುಗಿಡಗಳೂ, ದತ್ತೂರಿಯೂ ಹಬ್ಬಿಕೊಳ್ಳುವವು. ಅದು ನರಿಗಳಿಗೆ ಗುಹೆಯಾಗಿಯೂ, ಉಷ್ಟ್ರಪಕ್ಷಿಗಳಿಗೆ ನಿವಾಸವಾಗಿಯೂ ಇರುವುದು.
ಯೆಹೂದದ ಅರಸನಾದ ಚಿದ್ಕೀಯನೂ ಮತ್ತು ಸಮಸ್ತ ಸೈನಿಕರೂ ಇವರನ್ನು ನೋಡಿ ಅದೇ ರಾತ್ರಿಯಲ್ಲಿ ಹೊರಟು ಅರಸನ ಉದ್ಯಾನದ ಮಾರ್ಗವಾಗಿ ಎರಡು ಗೋಡೆಗಳ ನಡುವಣ ಬಾಗಿಲಿನಿಂದ ಪಟ್ಟಣವನ್ನು ಬಿಟ್ಟು ಅರಾಬಾ ಎಂಬ ತಗ್ಗಾದ ಪ್ರದೇಶದ ಕಡೆಗೆ ಪಲಾಯನ ಮಾಡಿದರು.
ಪೌಳಿಗೋಡೆಯಲ್ಲಿ ಒಂದು ದ್ವಾರವನ್ನು ಮಾಡಿದ್ದರಿಂದ ಒಳಗಿದ್ದ ಎಲ್ಲಾ ಸೈನಿಕರು ಅದೇ ರಾತ್ರಿ ಅರಸನ ತೋಟದ ಬಳಿಯಲ್ಲಿರುವ ಬಾಗಿಲಿನ ಮೂಲಕ ಪಟ್ಟಣದೊಳಗಿಂದ ಹೊರಟು ಓಡಿ ಹೋದರು; ಆ ಬಾಗಿಲು ಎರಡು ಗೋಡೆಗಳ ಮಧ್ಯದಲ್ಲಿತ್ತು; ಅವರು ಅರಾಬಾ ಎಂಬ ತಗ್ಗಾದ ಪ್ರದೇಶದ ಮಾರ್ಗವಾಗಿ ಪಲಾಯನ ಮಾಡಿದರು.
ಹೊಡೆದು ಹೋಗುವವನು ಅವರ ಮುಂದೆ ಹೊರಟಿದ್ದಾನೆ. ಅವರೂ ಬಾಗಿಲನ್ನು ಒಡೆದು ನುಗ್ಗಿ ಹೊರಟಿದ್ದಾರೆ. ಅವರ ಅರಸನು ಅವರ ಮುಂದೆ ತೆರಳಿದ್ದಾನೆ. ಯೆಹೋವನು ಅವರ ಮುಂಭಾಗದಲ್ಲಿ ನಡೆಯುತ್ತಿದ್ದಾನೆ.
‹ಆದುದರಿಂದ ನೋಡಿರಿ, ನಾನು ನಿಮ್ಮ ಬಳಿಗೆ ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ಕಳುಹಿಸುತ್ತೇನೆ; ಅವರಲ್ಲಿ ಕೆಲವರನ್ನು ನೀವು ಕೊಲ್ಲುವಿರಿ, ಶಿಲುಬೆಗೆ ಹಾಕುವಿರಿ; ಕೆಲವರನ್ನು ನಿಮ್ಮ ಸಭಾಮಂದಿರಗಳಲ್ಲಿ ಚಾಟಿಗಳಿಂದ ಹೊಡೆದು ಊರಿಂದ ಊರಿಗೆ ಅಟ್ಟಿಕೊಂಡು ಹೋಗುವಿರಿ.›
‹ಅವರು ಕತ್ತಿಯ ಬಾಯಿಗೆ ಗುರಿಯಾಗುವರು. ಅವರು ಸೆರೆಯಾಗಿ ಅನ್ಯದೇಶಗಳಿಗೆಲ್ಲಾ ಹಿಡಿದುಕೊಂಡು ಹೋಗುವರು. ಅನ್ಯದೇಶದವರ ಸಮಯಗಳು ಪೂರೈಸುವ ತನಕ ಯೆರೂಸಲೇಮ್ ಪಟ್ಟಣವು ಅನ್ಯದೇಶದವರಿಂದ ತುಳಿದಾಡಲ್ಪಡುತ್ತಿರುವುದು.›
ಅವಳ ಹಣೆಯ ಮೇಲೆ, “ಮಹತ್ತಾದ ಬಾಬೆಲೆಂಬ ಭೂಮಿಯಲ್ಲಿರುವ ಜಾರಸ್ತ್ರೀಯರ ಅಸಹ್ಯವಾದ ಕಾರ್ಯಗಳ ಮಾತೆ” ಎಂಬ ಹೆಸರನ್ನು ಬರೆಯಲಾಗಿತ್ತು.