TSK

TSK · ಯೆಶಾಯ 24:22

مراجع Treasury of Scripture Knowledge في ಕನ್ನಡ IRV.

العودة إلى المقطع

ಅನಂತರ ಯೆಹೋಶುವನು ಜನರಿಗೆ “ಗವಿಯ ಬಾಯನ್ನು ತೆರೆದು ಆ ಐದು ಮಂದಿ ಅರಸರನ್ನು ನನ್ನ ಬಳಿಗೆ ತನ್ನಿರಿ” ಎಂದನು.

ಕೈದಿಗಳ ಕಾಲ ಕೆಳಗೆ ಮುದುರಿಕೊಂಡು, ಹತರಾದವರ ಕೆಳಗೆ ಬಿದ್ದಿರುವುದೇ ಇವರ ಗತಿ. ಏಕೆಂದರೆ ಇಷ್ಟೆಲ್ಲಾ ನಡೆದರೂ ಯೆಹೋವನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇರುವುದು.

ಈ ಜನರೇ ಕೊಳ್ಳೆಗೆ ಈಡಾಗಿ ಸೂರೆಹೋಗಿದ್ದಾರೆ. ಎಲ್ಲರೂ ಹಳ್ಳಕೊಳ್ಳಗಳಿಗೆ ಸಿಕ್ಕಿಬಿದ್ದಿದ್ದಾರೆ, ಸೆರೆಮನೆಗಳಲ್ಲಿ ಮುಚ್ಚಲ್ಪಟ್ಟಿದ್ದಾರೆ. ಅವರು ಸುಲಿಗೆಯಾಗಿದ್ದರೂ ಯಾರೂ ಬಿಡಿಸರು, ಸೂರೆಯಾಗಿದ್ದರೂ ಯಾರೂ ಹಿಂದಕ್ಕೆ ಬಿಡು ಎನ್ನುವುದಿಲ್ಲ.

ಬಹಳ ದಿನಗಳಾದ ಮೇಲೆ ನಾನು ನಿನ್ನನ್ನು ಕರೆಯುತ್ತೇನೆ; ಕೆಲವು ವರ್ಷಗಳ ನಂತರ ಖಡ್ಗದಿಂದ ಉಳಿದುಕೊಂಡ ದೇಶಕ್ಕೂ, ಯಾವಾಗಲೂ ಹಾಳಾಗಿದ್ದ ಇಸ್ರಾಯೇಲಿನ ಪರ್ವತಗಳ ಮೇಲೆಯೂ, ಜನಾಂಗಗಳೊಳಗಿಂದ ಕೂಡಿಸಲ್ಪಟ್ಟು ಎಲ್ಲರೂ ಭದ್ರವಾಗಿ ವಾಸಿಸುವವರ ಬಳಿಗೆ ನೀನು ಬರುವಿ.