TSK

TSK · ಯೆಶಾಯ 24:6

مراجع Treasury of Scripture Knowledge في ಕನ್ನಡ IRV.

العودة إلى المقطع

ನಿಮ್ಮ ಮೇಲೆ ಕಾಡುಮೃಗಗಳನ್ನು ಬರಮಾಡುವೆನು; ಅವು ನಿಮ್ಮ ಮಕ್ಕಳನ್ನು ಕದ್ದುಕೊಂಡು ಹೋಗುವವು, ನಿಮ್ಮ ಪಶುಗಳನ್ನು ಕೊಲ್ಲುವವು, ನಿಮ್ಮನ್ನು ಸ್ವಲ್ಪ ಜನರನ್ನಾಗಿ ಮಾಡುವವು; ನಿಮ್ಮ ದಾರಿಗಳು ಪಾಳು ಬೀಳುತ್ತದೆ.

¶ ಆದರೆ ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಡದೆ, ನಾನು ಈಗ ನಿಮಗೆ ಬೋಧಿಸುವ ಆತನ ಆಜ್ಞಾವಿಧಿಗಳನ್ನು ಅನುಸರಿಸದೆ ಹೋದರೆ ಈ ಶಾಪಗಳು ನಿಮಗೆ ಪ್ರಾಪ್ತವಾಗುವವು:

¶ “ಮುಂದೆ ಹುಟ್ಟುವ ನಿಮ್ಮ ಸಂತತಿಯವರೂ ದೇಶಾಂತರಗಳಿಂದ ಬರುವ ಅನ್ಯರೂ ನಿಮ್ಮ ದೇಶಕ್ಕೆ ಯೆಹೋವನು ಉಂಟುಮಾಡಿದ ರೋಗ ಮತ್ತು ಉಪದ್ರವಗಳನ್ನು ಕಂಡು ಆಶ್ಚರ್ಯಪಡುವರು.

ನಿಮ್ಮ ದೇವರಾದ ಯೆಹೋವನು ತನ್ನ ವಾಗ್ದಾನಕ್ಕನುಸಾರವಾಗಿ ಈಗ ನಿಮಗೆ ಎಲ್ಲಾ ತರದ ಮೇಲನ್ನು ಅನುಗ್ರಹಿಸಿದಂತೆಯೇ ನಿಮ್ಮ ಮೇಲೆ ಸಕಲ ವಿಧವಾದ ಕೇಡುಗಳನ್ನು ಬರಮಾಡಿ, ತಾನು ಕೊಟ್ಟಿರುವ ಈ ಉತ್ತಮ ದೇಶದಿಂದ ನಿಮ್ಮನ್ನು ತೆಗೆದು ನಾಶಮಾಡಿಬಿಡುವನು.

ಹೊಲಗಳನ್ನೂ, ದ್ರಾಕ್ಷಿ ತೋಟಗಳನ್ನೂ, ವ್ಯವಸಾಯಮಾಡುವುದಕ್ಕಾಗಿ ದೇಶದ ಜನರಲ್ಲಿ ಕೇವಲ ಬಡವರನ್ನು ಮಾತ್ರ ಬಿಟ್ಟುಹೋದನು.

ನಿಮ್ಮಲ್ಲಿನ ಬಲಿಷ್ಠನೇ ಸೆಣಬಿನ ನಾರು, ಅವನ ಕಾರ್ಯವೇ ಕಿಡಿ, ಎರಡೂ ಸೇರಿ ಯಾರೂ ಆರಿಸಲಾಗದಂತೆ ಅವು ಸುಟ್ಟುಹೋಗುವವು.”

ಇನ್ನೆಷ್ಟರವರೆಗೆ ಎಲ್ಲಾ ಸೀಮೆಯ ಹುಲ್ಲುಸೊಪ್ಪು ಒಣಗಿ ದೇಶವು ದುಃಖಿಸುತ್ತಿರುವುದು? ಅಲ್ಲಿನ ನಿವಾಸಿಗಳು ದುಷ್ಟರಾಗಿರುವುದರಿಂದ ಮೃಗ ಹಾಗು ಪಕ್ಷಿಗಳು ಬಡಿದುಕೊಂಡು ಹೋಗಿವೆ. “ಆಹಾ, ಅವನು ನಮ್ಮ ಅಂತ್ಯಗತಿಯನ್ನು ನೋಡುವುದೇ ಇಲ್ಲ” ಎಂದು ಹೇಳಿದ್ದಾರಷ್ಟೆ.

¶ ಆಗ ದೂತನು ನನಗೆ, “ದೇಶದ ಮೇಲೆಲ್ಲಾ ಹೊರಟು ಬಂದಿರುವ ಶಾಪವು ಇದೇ. ಕಳ್ಳತನ ಮಾಡುವ ಪ್ರತಿಯೊಬ್ಬರೂ ದೇಶದಿಂದ ಹೊರಗೆ ತೆಗೆದುಹಾಕಲ್ಪಡುವರು. ಇದಕ್ಕೆ ತಕ್ಕ ಹಾಗೆ ಪ್ರತಿಯೊಬ್ಬ ಸುಳ್ಳು ಸಾಕ್ಷಿಯೂ ದೇಶದಿಂದ ಹೊರಗೆ ತೆಗೆದುಹಾಕಲ್ಪಡುವನು.

ನೀವು ಅಂದರೆ ಈ ಜನಾಂಗದವರೆಲ್ಲಾ ನನ್ನಿಂದ ಕದ್ದುಕೊಳ್ಳುವವರಾದ ಕಾರಣ ಶಾಪಗ್ರಸ್ತರಾಗಿದ್ದೀರಿ.

ಅವನು ತಂದೆಗಳ ಮನಸ್ಸನ್ನು ಮಕ್ಕಳ ಕಡೆಗೂ, ಮಕ್ಕಳ ಮನಸ್ಸನ್ನು ತಂದೆಗಳ ಕಡೆಗೂ ತಿರುಗಿಸುವನು.”

ಜನರೆಲ್ಲಾ, “ಆತನ ರಕ್ತವು ನಮ್ಮ ಮತ್ತು ನಮ್ಮ ಮಕ್ಕಳ ಮೇಲೆ ಬರಲಿ” ಅಂದರು.

ಆದರೂ ಕರ್ತನ ದಿನವು ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶ ಮಂಡಲವು ಮಹಾಘೋಷದಿಂದ ಇಲ್ಲದೆ ಹೋಗುವವು. ಮೂಲಧಾತುಗಳು ಉರಿದು ಲಯವಾಗಿ ಹೋಗುವವು. ಭೂಮಿಯೂ ಅದರಲ್ಲಿರುವ ಕೆಲಸಗಳೂ ಸುಟ್ಟು ಹೋಗುವವು.