TSK

TSK · ಯೆಶಾಯ 25:3

مراجع Treasury of Scripture Knowledge في ಕನ್ನಡ IRV.

العودة إلى المقطع

ನೀವು ದೇವರಿಗೆ, “ನಿನ್ನ ಕೃತ್ಯಗಳು ಎಷ್ಟೋ ಭಯಂಕರವಾಗಿವೆ; ನಿನ್ನ ಪರಾಕ್ರಮದ ಮಹತ್ತಿನ ದೆಸೆಯಿಂದ ನಿನ್ನ ಶತ್ರುಗಳು ನಿನ್ನ ಮುಂದೆ ಮುದುರಿಕೊಳ್ಳುವರು;

¶ ನಾನು ಲೋಕದವರಿಗೆ ಅವರ ಪಾಪದ ಫಲವನ್ನೂ, ದುಷ್ಟರಿಗೆ ಅವರ ದುಷ್ಕೃತ್ಯಗಳ ಫಲಗಳಿಗಾಗಿ ಶಿಕ್ಷಿಸಿ, ಸೊಕ್ಕಿದವರ ಅಹಂಕಾರವನ್ನು ಅಡಗಿಸಿ, ಭಯಂಕರವಾದ ಅವರ ಹೆಮ್ಮೆಯನ್ನು ತಗ್ಗಿಸುವೆನು.

ವಿದೇಶೀಯರು ನಿನ್ನ ಪೌಳಿಗೋಡೆಗಳನ್ನು ಪುನಃ ಕಟ್ಟುವರು, ಅವರ ಅರಸರು ನಿನ್ನನ್ನು ಆರಾಧಿಸುವರು; ನನ್ನ ಕೋಪದಿಂದ ನಿನ್ನನ್ನು ಹೊಡೆದು, ನನ್ನ ಕೃಪೆಯಿಂದ ನಿನ್ನನ್ನು ಕರುಣಿಸಿದ್ದೇನಷ್ಟೆ.

ಹೀಗೆ ನಾನು ನನ್ನ ಮಹಿಮೆಯನ್ನು ತೋರ್ಪಡಿಸಿ, ನನ್ನ ಗೌರವವನ್ನು ಕಾಪಾಡಿಕೊಂಡು, ಅನೇಕ ಜನಾಂಗಗಳು ನಾನೇ ಯೆಹೋವನು ಎಂದು ತಿಳಿದುಕೊಳ್ಳುವಂತೆ ಅವುಗಳ ಕಣ್ಣೆದುರಿಗೆ ವ್ಯಕ್ತವಾಗುವೆನು.”

¶ ಯೆಹೋವನು ಭೂಲೋಕಕ್ಕೆಲ್ಲಾ ರಾಜನಾಗಿರುವನು; ಆ ದಿನದಲ್ಲಿ ಯೆಹೋವನೊಬ್ಬನೇ ದೇವರೆಂದೂ ಆತನ ಹೆಸರೊಂದೇ ಸ್ತುತ್ಯವೆಂದೂ ಎಲ್ಲರಿಗೂ ತಿಳಿದಿರುವುದು.

ಅದೇ ಗಳಿಗೆಯಲ್ಲಿ ಮಹಾ ಭೂಕಂಪವುಂಟಾಗಿ ಆ ಪಟ್ಟಣದ ಹತ್ತರಲ್ಲೊಂದಂಶವು ಬಿದ್ದುಹೋಯಿತು. ಆ ಭೂಕಂಪದಿಂದ ಏಳು ಸಾವಿರ ಮಂದಿ ಸತ್ತು ಹೋದರು. ಉಳಿದವರು ಭಯಗ್ರಸ್ತರಾಗಿ ಪರಲೋಕದ ದೇವರನ್ನು ಘನಪಡಿಸಿದರು.