TSK

TSK · ಯೆಶಾಯ 25:6

مراجع Treasury of Scripture Knowledge في ಕನ್ನಡ IRV.

العودة إلى المقطع

ಮೃಷ್ಟಭೋಜನದಿಂದಲೋ ಎಂಬಂತೆ, ನನ್ನ ಮನಸ್ಸು ಸಂತುಷ್ಟವಾಗಿರುವುದು; ನನ್ನ ಬಾಯಿ ಉತ್ಸಾಹಧ್ವನಿ ಮಾಡುತ್ತಾ ನಿನ್ನನ್ನು ಕೊಂಡಾಡುವುದು.

ಯೆಹೂದ ಕುಲವನ್ನೂ ಮತ್ತು ತನ್ನ ಪ್ರಿಯವಾದ ಚೀಯೋನ್ ಗಿರಿಯನ್ನೂ ಆರಿಸಿಕೊಂಡನು.

ನಿನ್ನ ಬಾಯ ಮುದ್ದುಗಳಿಂದ ನನಗೆ ಮುದ್ದಿಡು ನಿನ್ನ ಪ್ರೀತಿಯು ದ್ರಾಕ್ಷಾರಸಕ್ಕಿಂತಲೂ ಉತ್ತಮ.

ನನ್ನ ಪ್ರಿಯನು ಪುರುಷೋತ್ತಮನು ವನವೃಕ್ಷಗಳ ಮಧ್ಯೆ ಸೇಬಿನ ವೃಕ್ಷದಂತಿಹನು. ಅದರ ಫಲವು ನನ್ನ ನಾಲಿಗೆಗೆ ಸುಮಧುರ ನಾನು ಆತನ ನೆರಳಿನಲ್ಲಿ ಕುಳಿತು ಪರಮಾನಂದಗೊಂಡೆನು.

ನೀವು ಒಪ್ಪಿ ವಿಧೇಯರಾದರೆ ದೇಶದ ಮೇಲನ್ನು ಅನುಭವಿಸುವಿರಿ.

ಏಕೆಂದರೆ ಯೆಹೋವನ ಹಸ್ತವು ಈ ಪರ್ವತದಲ್ಲಿ ನೆಲೆಯಾಗಿರುವುದು; ಮೋವಾಬ್ಯರೋ ತಿಪ್ಪೆಗುಂಡಿಯ ಕೆಸರಿನಲ್ಲಿ ಒಣಹುಲ್ಲು ತುಳಿಯಲ್ಪಡುವ ಹಾಗೆ ತಾವಿದ್ದಲ್ಲೇ ತುಳಿಯಲ್ಪಡುವರು.

“ಎಲೈ, ಬಾಯಾರಿದ ಸಕಲಜನರೇ, ನೀರಿನ ಬಳಿಗೆ ಬನ್ನಿರಿ, ಹಣವಿಲ್ಲದವನು ಸಹ ಬರಲಿ! ಬನ್ನಿರಿ, ಕೊಂಡುಕೊಳ್ಳಿರಿ, ಊಟ ಮಾಡಿರಿ! ಬಂದು ದ್ರಾಕ್ಷಾರಸವನ್ನೂ, ಹಾಲನ್ನೂ ಹಣಕೊಡದೆ, ಕ್ರಯವಿಲ್ಲದೆ ತೆಗೆದುಕೊಳ್ಳಿರಿ.

ಮೋವಾಬು ಚಿಕ್ಕಂದಿಂದಲೂ ನೆಮ್ಮದಿಯಾಗಿದೆ; ಅದು ಮಡ್ಡಿಯ ಮೇಲೆ ನಿಂತಿರುವ ದ್ರಾಕ್ಷಾರಸದಂತಿದೆ; ಅದನ್ನು ಪಾತ್ರೆಯಿಂದ ಪಾತ್ರೆಗೆ ಯಾರೂ ಹೊಯ್ಯಲಿಲ್ಲ, ಅದು ಸೆರೆಹೋಗಲಿಲ್ಲ; ಆದಕಾರಣ ಅದರ ರುಚಿಯು ಅದರಲ್ಲಿದೆ, ಅದರ ವಾಸನೆಯು ಬೇರ್ಪಡಲಿಲ್ಲ.”

ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವು ಎಲ್ಲಾ ಗುಡ್ಡ ಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು. ಆಗ ಜನಾಂಗಗಳು ಅದರ ಕಡೆಗೆ ಪ್ರವಾಹಗಳಂತೆ ಬರುವರು.

ಆ ದಿನದಲ್ಲಿ ಅವರ ದೇವರಾದ ಯೆಹೋವನು ಅವರನ್ನು ತನ್ನ ಹಿಂಡಾಗಿರುವ ಜನರೆಂದು ರಕ್ಷಿಸುವನು; ಅವರು ಕಿರೀಟದಲ್ಲಿನ ರತ್ನಗಳಂತೆ ತಮ್ಮ ದೇಶದಲ್ಲಿ ಥಳಥಳಿಸುವರು.

¶ ಯೇಸು ಪುನಃ ಅವರ ಸಂಗಡ ಮಾತನಾಡುತ್ತಾ ಸಾಮ್ಯರೂಪವಾಗಿ ಅವರಿಗೆ ಹೇಳಿದ್ದೇನೆಂದರೆ,

ಆ ಮೇಲೆ ಅವರಿಗೆ, ‹“ನೀವು ಲೋಕದ ಎಲ್ಲಾ ಕಡೆಗಳಿಗೂ ಹೋಗಿ ಸೃಷ್ಟಿಗಳಿಗೆಲ್ಲಾ ಸುವಾರ್ತೆಯನ್ನು ಸಾರಿರಿ.›

ಯೇಸು ಅವನಿಗೆ ಹೇಳಿದ್ದೇನಂದರೆ, ‹“ಒಬ್ಬ ಮನುಷ್ಯನು ಮಹಾ ಔತಣ ಮಾಡಿಸಿ ಅನೇಕರನ್ನು ಆಮಂತ್ರಿಸಿದನು.›

¶ ಆದರೆ ನೀವು ಚೀಯೋನ್ ಪರ್ವತಕ್ಕೂ, ಜೀವಸ್ವರೂಪನಾದ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇಮಿಗೂ, ಉತ್ಸವ ಸಂಘದಲ್ಲಿ ಕೂಡಿರುವ ಕೋಟ್ಯಾನುಕೋಟಿ ದೇವದೂತರ ಬಳಿಗೂ,