ಮೋಶೆಯು ಪ್ರಾರ್ಥಿಸಿದಂತೆಯೇ ಯೆಹೋವನು ಮಾಡಿದನು. ಆ ನೊಣಗಳೆಲ್ಲಾ ಫರೋಹನ ಬಳಿಯಿಂದಲೂ, ಅವನ ಪ್ರಜಾಪರಿವಾರದವರ ಬಳಿಯಿಂದಲೂ ತೊಲಗಿಹೋದವು. ಒಂದೂ ಉಳಿಯಲಿಲ್ಲ.
TSK
TSK · ಯೆಶಾಯ 26:10
مراجع Treasury of Scripture Knowledge في ಕನ್ನಡ IRV.
ಆದರೆ ಯೆಶುರೂನು ಚೆನ್ನಾಗಿ ತಿಂದು, ಕೊಬ್ಬಿ, ತನ್ನನ್ನು ಸೃಷ್ಟಿಸಿದ ದೇವರನ್ನು ಬಿಟ್ಟು ತನ್ನ ಆಶ್ರಯದುರ್ಗವನ್ನು ತಿರಸ್ಕರಿಸಿದನು.
¶ ಆದರೂ ಇಸ್ರಾಯೇಲರು ತಮ್ಮನ್ನು ಪಾಪಕ್ಕೆ ಪ್ರೇರೇಪಿಸಿದ ಯಾರೊಬ್ಬಾಮನ ಮನೆಯವರ ಮಾರ್ಗದಲ್ಲಿ ನಡೆದರು. ಅದನ್ನು ಬಿಡಲೇ ಇಲ್ಲ. ಸಮಾರ್ಯದಲ್ಲಿ ಅಶೇರ ವಿಗ್ರಹಸ್ತಂಭವು ಇದ್ದೇ ಇತ್ತು.
ಅವರನ್ನು ತನ್ನ ಪವಿತ್ರದೇಶಕ್ಕೆ ಅಂದರೆ ತನ್ನ ಭುಜಬಲದಿಂದ ಸಂಪಾದಿಸಿದ ಈ ಪರ್ವತಸೀಮೆಗೆ ಕರೆದುಕೊಂಡು ಬಂದನು.
ನಿನ್ನ ಚಿತ್ತದಂತೆ ನಡೆಯಲು ನನಗೆ ಕಲಿಸು, ನನ್ನ ದೇವರು ನೀನಲ್ಲವೋ? ಶುಭಕಾರಿಯಾಗಿರುವ ನಿನ್ನ ಆತ್ಮನು ನನ್ನನ್ನು ಸಮದಾರಿಯಲ್ಲಿ ನಡೆಸಲಿ.
¶ ಇದಲ್ಲದೆ ನಾನು ಲೋಕದಲ್ಲಿ ದೃಷ್ಟಿಸಿ ನ್ಯಾಯಸ್ಥಾನದಲ್ಲಿಯೂ, ಧರ್ಮಸ್ಥಾನದಲ್ಲಿಯೂ ಅಧರ್ಮವಿರುವುದೆಂದು ನೋಡಿದೆನು.
¶ ಅಯ್ಯೋ, ನಂಬಿಕೆಯುಳ್ಳ ನಗರಿಯು ಸೂಳೆಯಾದಳಲ್ಲಾ! ನ್ಯಾಯದಿಂದ ತುಂಬಿ ಧರ್ಮಕ್ಕೆ ನೆಲೆಯಾಗಿದ್ದ ನಗರ ಈಗ ಕೊಲೆಪಾತಕರಿಗೆ ನೆಲೆಯಾಗಿದೆ.
ಕಿನ್ನರಿ, ವೀಣೆ, ದಮ್ಮಡಿ, ಕೊಳಲು ದ್ರಾಕ್ಷಾರಸ ಇವುಗಳೇ ಅವರ ಔತಣಗಳ ಸೊಬಗು. ಯೆಹೋವನ ಕೆಲಸವನ್ನೋ ಅವರು ಲಕ್ಷಿಸುವುದಿಲ್ಲ. ಆತನ ಕೈಕೆಲಸವನ್ನು ಆಲೋಚಿಸುವುದಿಲ್ಲ.
ಭೂನಿವಾಸಿಗಳು ದೈವಾಜ್ಞೆಗಳನ್ನು ಮೀರಿ, ನಿಯಮಗಳನ್ನು ಬದಲಾಯಿಸಿ, ಶಾಶ್ವತವಾದ ಒಡಂಬಡಿಕೆಯನ್ನು ಭಂಗಪಡಿಸಿದ್ದರಿಂದ ಭೂಮಿಯು ಅವರ ಹೆಜ್ಜೆಯಿಂದ ಅಪವಿತ್ರವಾಯಿತು.
ಏಕೆಂದರೆ ನೀಚನು ನೀಚವಾಗಿ ಮಾತನಾಡುವನು. ಅವನ ಹೃದಯವು ಕೇಡನ್ನು ಕಲ್ಪಿಸಿ, ನಡೆಯದೆ ಇರುವುದನ್ನು ನಡಿಸಿ ಯೆಹೋವನಿಗೆ ವಿರುದ್ಧವಾಗಿ ಅಸತ್ಯವನ್ನಾಡಿ, ಹಸಿದವನ ಆಶೆಯನ್ನು ಬರಿದುಮಾಡಿ, ಬಾಯಾರಿದವನ ಪಾನವನ್ನು ತಪ್ಪಿಸುವುದು.
ನಾನು ನಿಮ್ಮನ್ನು ಫಲವತ್ತಾದ ಸೀಮೆಗೆ ಕರೆತಂದು, ಅದರ ಫಲವನ್ನು ಮತ್ತು ಸಾರವನ್ನು ಅನುಭವಿಸುವ ಹಾಗೆ ಮಾಡಿದೆನು. ಆದರೆ ನೀವು ಆ ನನ್ನ ದೇಶವನ್ನು ಪ್ರವೇಶಿಸಿ, ಅದನ್ನು ಹೊಲೆ ಮಾಡಿ, ನನ್ನ ಸ್ವತ್ತನ್ನು ಅಸಹ್ಯಪಡಿಸಿದಿರಿ.
¶ “ನರಪುತ್ರನೇ, ರಕ್ತಮಯವಾದ ಆ ಪಟ್ಟಣಕ್ಕೆ ನ್ಯಾಯತೀರಿಸಲು ನಿನ್ನ ಮನಸ್ಸು ಸ್ಥಿರವಾಗಿದೆಯೋ? ಅದರ ದುರಾಚಾರಗಳನ್ನೆಲ್ಲಾ ಅದಕ್ಕೆ ಹೀಗೆ ತಿಳಿಸು,
ನನ್ನ ಕಡೆಯಿಂದ ತಿರಿಗಿಕೊಳ್ಳುವುದು ನನ್ನ ಜನರ ಗುಣವೇ; ಅವರನ್ನು ಮೇಲಕ್ಕೆ ಕರೆಯುವವರು ಇದ್ದರೂ, ಮೇಲಕ್ಕೆತ್ತುವವರು ಯಾರೂ ಇಲ್ಲ.
ಏಳಿರಿ, ತೊಲಗಿರಿ, ಈ ದೇಶವು ನಿಮ್ಮ ಸುಖವಸತಿಯಾಗದು. ನಾಶನವನ್ನು, ವಿಪರೀತ ನಾಶನವನ್ನು ಉಂಟುಮಾಡುವ ಹೊಲಸು ಇದಕ್ಕೆ ಅಂಟಿಕೊಂಡಿದೆ.
¶ ಆಗ ಸೈತಾನನು ಯೇಸುವನ್ನು ಪರಿಶುದ್ಧ ಪಟ್ಟಣಕ್ಕೆ ಕರೆದುಕೊಂಡು ಹೋಗಿ ದೇವಾಲಯದ ಗೋಪುರದ ಮೇಲೆ ನಿಲ್ಲಿಸಿ
ಅಥವಾ ಆತನ ಅಪಾರವಾದ ದಯೆ, ಸಹನೆ, ದೀರ್ಘಶಾಂತಿಗಳನ್ನು ಕೇವಲವಾಗಿ ಯೋಚಿಸಿ, ನಿನ್ನ ಮನಸ್ಸು ಮಾರ್ಪಡಿಸಿಕೊಳ್ಳುವಂತೆ ಪ್ರೆರೇಪಿಸುವ ದೇವರ ಒಳ್ಳೆತನದ ಅರಿವು ನಿನಗಿಲ್ಲವೋ?