ತುಂಬಿ ತುಳುಕುವ ನಿನ್ನ ಕೋಪವನ್ನು ಎರಚಿ, ಪ್ರತಿಯೊಬ್ಬ ಗರ್ವಿಷ್ಠನ ಮೇಲೆ ಕಣ್ಣಿಟ್ಟು ಅವನನ್ನು ತಗ್ಗಿಸು.
TSK
TSK · ಯೆಶಾಯ 26:5
مراجع Treasury of Scripture Knowledge في ಕನ್ನಡ IRV.
¶ ನಾನು ಲೋಕದವರಿಗೆ ಅವರ ಪಾಪದ ಫಲವನ್ನೂ, ದುಷ್ಟರಿಗೆ ಅವರ ದುಷ್ಕೃತ್ಯಗಳ ಫಲಗಳಿಗಾಗಿ ಶಿಕ್ಷಿಸಿ, ಸೊಕ್ಕಿದವರ ಅಹಂಕಾರವನ್ನು ಅಡಗಿಸಿ, ಭಯಂಕರವಾದ ಅವರ ಹೆಮ್ಮೆಯನ್ನು ತಗ್ಗಿಸುವೆನು.
ಹಾಳುಪಟ್ಟಣವು ಬಿದ್ದುಹೋಗಿದೆ, ಯಾರೂ ಹೋಗದಂತೆ ಪ್ರತಿಯೊಂದು ಮನೆಯೂ ಮುಚ್ಚಿದೆ.
ದುರ್ಗಮವಾಗಿಯೂ, ಎತ್ತರವಾಗಿಯೂ ಇರುವ ನಿನ್ನ ಕೋಟೆಗಳನ್ನು ಆತನು ಕೆಡವಿ, ತಗ್ಗಿಸಿ, ನೆಲ ಸಮಮಾಡಿ ಧೂಳಿಗೆ ತರುವನು.
ಯುವತಿಯೇ, ಬಾಬೆಲ್ ಪುರಿಯೇ, ಕೆಳಕ್ಕಿಳಿದು ಧೂಳಿನಲ್ಲಿ ಕುಳಿತುಕೋ, ಕಸ್ದೀಯರ ಯುವತಿಯೇ, ಸಿಂಹಾಸನರಹಿತಳಾಗಿ ನೆಲದ ಮೇಲೆ ಕುಳಿತುಕೋ! ನಿನ್ನನ್ನು ಇನ್ನು ಕೋಮಲೆ ಮತ್ತು ಸುಕುಮಾರಿ ಎಂದು ಕರೆಯುವುದಿಲ್ಲ.
ಯೆಹೋವನು ಇಂತೆನ್ನುತ್ತಾನೆ, “ಆಹಾ, ಲೋಕವನ್ನೆಲ್ಲಾ ಹಾಳುಮಾಡುವ ನಾಶಕರ ಪರ್ವತವೇ, ನಾನು ನಿನ್ನ ವಿರುದ್ಧನಾಗಿದ್ದೇನೆ; ನಾನು ನಿನ್ನ ಮೇಲೆ ಕೈಮಾಡಿ ನಿನ್ನನ್ನು ಮೇಲಿನಿಂದ ಕೆಳಕ್ಕೆ ಉರುಳಿಸುವೆನು, ಸುಟ್ಟ ಬೆಟ್ಟವನ್ನಾಗಿ ಮಾಡುವೆನು.
ಯೆಹೋವನು ಬಾಬಿಲೋನಿಗೆ ಬರಮಾಡುವ ವಿಪತ್ತಿನಿಂದ ಆ ಪಟ್ಟಣವೂ ಹೀಗೆಯೇ ಮುಳುಗುವುದು, ಮತ್ತೆ ಏಳದು” ಎಂದು ಹೇಳು ಎಂದನು. ಜನರು ಆಯಾಸಗೊಂಡು ದುಡಿದದ್ದು ಬೆಂಕಿಗೆ ತುತ್ತಾಗುವುದು ಎಂಬ ಮಾತಿನವರೆಗೆ ಯೆರೆಮೀಯನ ಪ್ರವಾದನೆಯಾಯಿತು.
ಅವನು ಬಲವಾದ ಧ್ವನಿಯಿಂದ ಕೂಗುತ್ತಾ “ಬಿದ್ದಳು, ಬಿದ್ದಳು, ಬಾಬೆಲ್ ಎಂಬ ಮಹಾನಗರಿಯು ಬಿದ್ದಳು! ಅವಳು ದೆವ್ವಗಳ ವಾಸಸ್ಥಾನವೂ, ಎಲ್ಲಾ ದುರಾತ್ಮಗಳಿಗೂ, ಅಶುದ್ಧವಾದ ಹಾಗೂ ಅಸಹ್ಯವಾದ ಸಕಲ ವಿಧವಾದ ಪಕ್ಷಿಗಳಿಗೂ ಗೂಡೂ ಆದಳು.