TSK

TSK · ಯೆಶಾಯ 27:7

مراجع Treasury of Scripture Knowledge في ಕನ್ನಡ IRV.

العودة إلى المقطع

“ನಾನು ಅವರ ವಿರುದ್ಧವಾಗಿ ಏಳುತ್ತೇನೆ” ಇದು ಸೇನಾಧೀಶ್ವರನಾದ ಯೆಹೋವನ ನುಡಿ. “ನಾನು ಬಾಬೆಲಿನಿಂದ ಹೆಸರನ್ನೂ, ಉಳಿದ ಜನರನ್ನೂ, ಆಕೆಯ ಸಂತತಿಯನ್ನೂ ನಿರ್ಮೂಲ ಮಾಡುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.

ಇಗೋ, ಸಂಜೆಯಲ್ಲಿ ಹೆದರಿ ಉದಯದೊಳಗಾಗಿ ಇಲ್ಲವಾಗುವರು! ನಮ್ಮನ್ನು ಸೂರೆ ಮಾಡುವವರಿಗೆ ಇದೇ ಗತಿ. ನಮ್ಮನ್ನು ಕೊಳ್ಳೆಹೊಡೆಯುವವರ ಪಾಡು ಇದೇ.

ಯೆಹೋವನು ಇಂತೆನ್ನುತ್ತಾನೆ, “ನಾನು ನಿನ್ನನ್ನು ರಕ್ಷಿಸಲು ನಿನ್ನೊಂದಿಗಿದ್ದೇನೆ; ನಾನು ಯಾವ ಜನಾಂಗಗಳಲ್ಲಿಗೆ ನಿನ್ನನ್ನು ಓಡಿಸಿಬಿಟ್ಟು ಚದರಿಸಿದೆನೋ, ಆ ಜನಾಂಗಗಳನ್ನೆಲ್ಲಾ ನಿರ್ಮೂಲಮಾಡುವೆನು. ನಿನ್ನನ್ನೋ ನಿರ್ಮೂಲಮಾಡೆನು; ನಿನ್ನನ್ನು ಮಿತಿಮೀರಿ ಶಿಕ್ಷಿಸೆನು. ಆದರೆ ಶಿಕ್ಷಿಸದೆ ಬಿಡುವುದಿಲ್ಲ.”

ದೇವರು ಕೆಡವಿದ ಸೊದೋಮ್, ಗೊಮೋರ ಪಟ್ಟಣಗಳಲ್ಲಿಯೂ ಮತ್ತು ಸುತ್ತಣ ಊರುಗಳಲ್ಲಿಯೂ ಹೇಗೋ, ಹಾಗೆಯೇ ಬಾಬೆಲಿನಲ್ಲಿಯೂ ಯಾರೂ ವಾಸಿಸರು, ಯಾವ ನರಪ್ರಾಣಿಯೂ ನೆಲೆ ನಿಲ್ಲುವುದಿಲ್ಲ.

¶ “ರಾಜನೇ, ನೀನು ಕಂಡದ್ದು ಆಹಾ, ಅದ್ಭುತಪ್ರತಿಮೆ; ಥಳಥಳನೆ ಹೊಳೆಯುವ ಆ ದೊಡ್ಡ ಪ್ರತಿಮೆಯು ನಿನ್ನೆದುರಿಗೆ ನಿಂತಿತ್ತು; ಭಯಂಕರವಾಗಿ ಕಾಣಿಸಿತು.

ನಿನ್ನ ಗಾಯವು ಗುಣಹೊಂದದು, ನಿನ್ನ ಗಾಯವು ತೀವ್ರವೇ. ನಿನ್ನ ವಿನಾಶದ ಸುದ್ದಿಯನ್ನು ಕೇಳಿದವರೆಲ್ಲರೂ ನಿನಗೆ ಚಪ್ಪಾಳೆ ಹಾಕಿ ನಗುತ್ತಾರೆ; ನಿನ್ನ ಕೆಡುಕಿಗೆ ನಿತ್ಯವೂ ಗುರಿಯಾಗದವರು ಯಾರೂ ಇಲ್ಲ.