TSK

TSK · ಯೆಶಾಯ 28:10

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಅವರ ಪೂರ್ವಿಕರ ದೇವರಾದ ಯೆಹೋವನು ತನ್ನ ಪ್ರಜೆಗಳನ್ನು, ತನ್ನ ನಿವಾಸಸ್ಥಾನವನ್ನೂ ಕನಿಕರಿಸಿ, ಸಾವಕಾಶ ಮಾಡದೆ ತನ್ನ ದೂತರ ಮುಖಾಂತರವಾಗಿ ಅವರನ್ನು ಎಚ್ಚರಿಸುತ್ತಾ ಬಂದರು.

ನನ್ನ ದ್ರಾಕ್ಷಿಯ ತೋಟದಲ್ಲಿ ಹಿಂದೆ ನಾನು ಮಾಡಿದ್ದಕ್ಕಿಂತಲೂ ಇನ್ನೂ ಹೆಚ್ಚಾಗಿ ಇನ್ನೇನು ಮಾಡಬೇಕಾಗಿತ್ತು? ಅದು ಒಳ್ಳೆಯ ದ್ರಾಕ್ಷಿಯ ಫಲವನ್ನು ಕೊಡುವುದೆಂದು ನಾನು ನಿರೀಕ್ಷಿಸುತ್ತಿರಲು, ಅದು ಹುಳಿ ಹಣ್ಣನ್ನು ಏಕೆ ಕೊಟ್ಟಿತು?

ನಿಮ್ಮ ಪೂರ್ವಿಕರನ್ನು ಐಗುಪ್ತ ದೇಶದೊಳಗಿಂದ ಬರಮಾಡಿದ ದಿನದಿಂದ ಇಂದಿನವರೆಗೂ ನಾನು ಅವರಿಗೆ, ನನ್ನ ಮಾತನ್ನು ಕೇಳಿರಿ ಎಂದು ತಡ ಮಾಡದೆ ಖಂಡಿತವಾಗಿ ಆಜ್ಞಾಪಿಸುತ್ತಾ ಬಂದೆನಷ್ಟೆ.

‹ಫಲಕಾಲ ಹತ್ತಿರವಾದಾಗ ತನಗೆ ಬರಬೇಕಾದ ಹಣ್ಣುಗಳನ್ನು ತೆಗೆದುಕೊಂಡು ಬರುವುದಕ್ಕಾಗಿ ಆ ತೋಟಗಾರರ ಬಳಿಗೆ ತನ್ನ ಆಳುಗಳನ್ನು ಕಳುಹಿಸಲು,›

ಆ ಸ್ತ್ರೀಯರು ಯಾವಾಗಲೂ ಉಪದೇಶ ಕೇಳುತ್ತಿದ್ದರೂ ಸತ್ಯದ ಪರಿಜ್ಞಾನವನ್ನು ಹೊಂದಲಾರದವರು.