TSK

TSK · ಯೆಶಾಯ 28:22

مراجع Treasury of Scripture Knowledge في ಕನ್ನಡ IRV.

العودة إلى المقطع

¶ ದೂತರು ಎಫ್ರಾಯೀಮ್, ಮನಸ್ಸೆ, ಜೆಬುಲೂನ್ ಪ್ರಾಂತ್ಯಗಳಲ್ಲಿ, ಪಟ್ಟಣದಿಂದ ಪಟ್ಟಣಕ್ಕೆ ಹೋದರು. ಜನರು ಅವರನ್ನು ಕಂಡು ನಕ್ಕು ಗೇಲಿಮಾಡಿದರು.

ಅವರಾದರೋ ದೇವಪ್ರೇಷಿತರನ್ನು ಗೇಲಿಮಾಡಿ, ಯೆಹೋವನ ಮಾತುಗಳನ್ನು ಕಡೆಗಣಿಸಿ ಆತನ ಪ್ರವಾದಿಗಳನ್ನು ಹೀಯಾಳಿಸಿದ್ದರಿಂದ, ಆತನ ಕೋಪಾಗ್ನಿಯು ಆತನ ಪ್ರಜೆಗಳ ಮೇಲೆ ಉರಿಯತೊಡಗಿತು, ಅದರ ತಾಪವು ಆರಿಹೋಗಲೇ ಇಲ್ಲ.

¶ ಇಸ್ರಾಯೇಲೇ, ನಿನ್ನ ಜನರು ಸಮುದ್ರದ ಉಸುಬಿನಂತೆ ಅಸಂಖ್ಯವಾಗಿದ್ದರೂ ಅವರಲ್ಲಿ ಉಳಿದವರು ಮಾತ್ರ ತಿರುಗಿಕೊಳ್ಳುವರು. ನಾಶವಾಗುವುದಕ್ಕೆ ವಿಧಿಸಲ್ಪಟ್ಟದ್ದು, ನ್ಯಾಯನೀತಿಯಿಂದ ತುಂಬಿ ತುಳುಕುವುದು.

¶ ಇಗೋ, ಯೆಹೋವನು ಭೂಮಿಯನ್ನು ಬರಿದುಮಾಡಿ, ಎಲ್ಲಾ ಪ್ರದೇಶವನ್ನು ನಿರ್ಜನಮಾಡಿ, ಅದನ್ನು ವಿಕಾರಪಡಿಸಿ, ಅದರ ನಿವಾಸಿಗಳನ್ನು ಚದುರಿಸಿಬಿಡುವವನಾಗಿದ್ದಾನೆ.

ಇಷ್ಟವಾದ ಹೊಲಗಳ ಮತ್ತು ಫಲವತ್ತಾದ ದ್ರಾಕ್ಷಾಲತೆಗಾಗಿ ಎದುರುನೋಡಿರಿ.

ಯೆಹೋವನೇ, ನೀನು ನನ್ನನ್ನು ಮರುಳುಗೊಳಿಸಿದಿ, ನಾನು ಮರುಳಾದೆನು; ನೀನು ನನಗಿಂತ ಬಲಿಷ್ಠನಾಗಿ ಗೆದ್ದುಕೊಂಡಿ; ನಾನು ಹಗಲೆಲ್ಲಾ ಗೇಲಿಗೆ ಗುರಿಯಾಗಿದ್ದೇನೆ, ಎಲ್ಲರೂ ನನ್ನನ್ನು ಅಣಕಿಸುತ್ತಾರೆ.

ಇದಲ್ಲದೆ ಚಿದ್ಕೀಯನ ಕಣ್ಣುಗಳನ್ನು ಕೀಳಿಸಿ ಅವನನ್ನು ಬಾಬಿಲೋನಿಗೆ ಸಾಗಿಸಬೇಕೆಂದು ಬೇಡಿಹಾಕಿಸಿದನು.

ನಾನು ನಿನ್ನನ್ನು ದಂಡಿಸುವ ಕಾಲದಲ್ಲಿ ಮನಸ್ಸನ್ನು ಗಟ್ಟಿ ಮಾಡಿಕೊಂಡಿರುವೆಯೋ? ಕೈಗಳನ್ನು ಬಲಪಡಿಸಿಕೊಂಡಿರುವೆಯೋ? ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ, ಅದರಂತೆ ನಡೆಸುತ್ತೇನೆ.

ಆ ಪ್ರಭುವು ಒಂದು ವಾರದ ಮಟ್ಟಿಗೆ ಬಹು ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು; ಅರ್ಧಭಾಗ ಯಜ್ಞನೈವೇದ್ಯಗಳನ್ನು ನಿಲ್ಲಿಸುವನು; ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬಂದು ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು.”

ಆತನ ಸಂಗಡ ಶಿಲುಬೆಗೆ ಹಾಕಲ್ಪಟ್ಟ ಕಳ್ಳರು ಸಹ ಆತನನ್ನು ಅದೇ ಪ್ರಕಾರ ನಿಂದಿಸುತ್ತಿದ್ದರು.

ಹೀಗಿರಲಾಗಿ ಪ್ರವಾದಿಗಳ ಗ್ರಂಥದಲ್ಲಿ ಹೇಳಿರುವುದು ನಿಮಗೆ ಸಂಭವಿಸದಂತೆ ನೋಡಿಕೊಳ್ಳಿರಿ. ಆದೇನಂದರೆ;

¶ ಈ ಪುಸ್ತಕದ ಪ್ರವಾದನಾ ವಾಕ್ಯಗಳನ್ನು ಕೇಳುವ ಪ್ರತಿಯೊಬ್ಬನಿಗೆ ನಾನು ಹೇಳುವ ಸಾಕ್ಷಿ ಏನೆಂದರೆ, ಇವುಗಳಿಗೆ ಯಾವನಾದರೂ ಹೆಚ್ಚು ಮಾತುಗಳನ್ನು ಕೂಡಿಸಿದರೆ, ದೇವರು ಅವನ ಮೇಲೆ ಈ ಪುಸ್ತಕದಲ್ಲಿ ಬರೆದಿರುವ ಉಪದ್ರವಗಳನ್ನು ಕೊಡುವನು.