TSK

TSK · ಯೆಶಾಯ 29:7

مراجع Treasury of Scripture Knowledge في ಕನ್ನಡ IRV.

العودة إلى المقطع

ಎಚ್ಚರವಾದವನು ಕನಸ್ಸನ್ನು ಕಂಡ ಹಾಗೆ ಯೆಹೋವನೇ, ನೀನು ಏಳುವಾಗ ಅವರನ್ನು ಮಾಯಾರೂಪರೆಂದು ಭಾವಿಸುತ್ತೀ.

¶ ಆಗ ಯೆಹೋವನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿ ಸೈನಿಕರನ್ನು ಸಂಹರಿಸಿದನು. ಬೆಳಿಗ್ಗೆ ಎದ್ದು ನೋಡುವಲ್ಲಿ ಅವರೆಲ್ಲರು ಹೆಣಗಳಾಗಿದ್ದರು.

ಆ ಶಬ್ದವು ಭೂಮಿಯ ಕಟ್ಟಕಡೆಯವರೆಗೆ ವ್ಯಾಪಿಸುವುದು, ಯೆಹೋವನಿಗೂ ಜನಾಂಗಗಳಿಗೂ ವ್ಯಾಜ್ಯವುಂಟಷ್ಟೆ, ಅವನು ನರಜನ್ಮದವರೆಲ್ಲರ ಸಂಗಡ ನ್ಯಾಯಕ್ಕೆ ನಿಲ್ಲುವನು, ದುಷ್ಟರನ್ನು ಖಡ್ಗಕ್ಕೆ ಗುರಿಮಾಡುವನು” ಇದು ಯೆಹೋವನ ನುಡಿ.

‘ಯೆರೂಸಲೇಮ್ ಹೊಲಸಾಗಿ ಹೋಗಲಿ. ಚೀಯೋನಿನ ನಾಶನವನ್ನು ಕಣ್ಣು ತುಂಬಾ ನೋಡೋಣ’” ಎಂದು ಯೋಚಿಸುವ ಬಹು ಜನಾಂಗಗಳು ನಿನಗೆ ವಿರುದ್ಧವಾಗಿ ಕೂಡಿ ಬಂದಿವೆ.

¶ ನಿನವೆಯೇ, ನಿನ್ನನ್ನು ಚದರಿಸುವವನು ನಿನಗೆ ಮುಖಾಮುಖಿಯಾಗಿ ಬಂದಿದ್ದಾನೆ; ಪೌಳಿಗೋಡೆಯನ್ನು ರಕ್ಷಿಸಲು ಸಿದ್ಧನಾಗು. ದಾರಿಯ ಮೇಲೆ ಕಣ್ಣಿಡು, ನಿನ್ನ ಸೊಂಟವನ್ನು ಬಲಪಡಿಸಿಕೋ, ನಿನ್ನ ಶಕ್ತಿಯನ್ನು ಚೆನ್ನಾಗಿ ದೃಢಮಾಡಿಕೋ.

ಯೆರೂಸಲೇಮಿನ ಮೇಲೆ ಬೀಳುವ ಎಲ್ಲಾ ಜನಾಂಗಗಳ ಧ್ವಂಸಕ್ಕೆ ಆ ದಿನದಲ್ಲಿ ಕೈಹಾಕುವೆನು.”

ಆಗ ಯೆಹೋವನು ಹೊರಟು, ಯುದ್ಧದ ದಿನದಲ್ಲಿ ಹೇಗೋ ಹಾಗೆಯೇ ಆ ಜನಾಂಗಗಳಿಗೆ ಪ್ರತಿಭಟಿಸುವನು.

ಅವನು ಹೊರಗೆ ಬಂದು ಭೂಮಿಯ ನಾಲ್ಕು ದಿಕ್ಕುಗಳಲ್ಲಿರುವ ದೇಶಗಳನ್ನು ಮೋಸಗೊಳಿಸಿ, ಗೋಗ್ ಮತ್ತು ಮಾಗೋಗ್ ಎಂಬ ಜನಾಂಗಗಳನ್ನು ಮರುಳುಗೊಳಿಸಿ ಯುದ್ಧಕ್ಕೆ ಸೇರಿಸುವನು. ಅವರ ಸಂಖ್ಯೆಯು ಸಮುದ್ರದ ಮರಳಿನಷ್ಟಿರುವುದು.