TSK

TSK · ಯೆಶಾಯ 3:17

مراجع Treasury of Scripture Knowledge في ಕನ್ನಡ IRV.

العودة إلى المقطع

¶ “ಹೆಂಗಸಿನ ತಲೆಯಲ್ಲಿ ಆಗಲಿ, ಗಂಡಸಿನ ತಲೆಯಲ್ಲಿ ಆಗಲಿ ಅಥವಾ ಗಡ್ಡದ ಮೇಲೆ ಆಗಲಿ ಕಲೆಯುಂಟಾದರೆ ಯಾಜಕನು ಅದನ್ನು ಪರೀಕ್ಷಿಸಬೇಕು.

¶ ಐಗುಪ್ತ್ಯರ ಹುಣ್ಣು, ಬಾವು, ತುರಿಕಜ್ಜಿ ಮುಂತಾದ ವಾಸಿಯಾಗದ ರೋಗಗಳಿಂದ ಯೆಹೋವನು ನಿಮ್ಮನ್ನು ಬಾಧಿಸುವನು.

ಬೀಸುವ ಕಲ್ಲನ್ನು ಹಿಡಿದು ಹಿಟ್ಟನ್ನು ಬೀಸು, ಮುಸುಕನ್ನು ತೆಗೆದುಹಾಕಿ, ಈಜಾಡುವ ಬಟ್ಟೆಯ ನೆರಿಗೆಯನ್ನು ಹರಿದುಬಿಟ್ಟು, ಬೆತ್ತಲಾಗಿ ನದಿಗಳನ್ನು ಹಾದುಹೋಗು.

“ಇವು ನನಗೆ ಏಕೆ ಸಂಭವಿಸಿದವು” ಎಂದು ನೀನು ಮನದೊಳಗೆ ಅಂದುಕೊಂಡರೆ, ನಿನ್ನ ಉಡುಗೆಯು ಕೀಳಲ್ಪಟ್ಟು, ನಿನ್ನ ಹಿಮ್ಮಡಿಯು ನಾಚಿಕೆಗೆ ಈಡಾದುದ್ದಕ್ಕೆ ನಿನ್ನ ಮಹಾಪಾಪವೇ ಕಾರಣ ಎಂದು ನಿನಗೆ ಗೊತ್ತಾಗುವುದು.

ನಾನು ನನ್ನ ರೋಷವನ್ನು ನಿನ್ನ ಮೇಲೆ ಸುರಿಯಲು, ಅವರು ನಿನ್ನಲ್ಲಿ ಕೋಪವನ್ನು ತೀರಿಸಿಕೊಳ್ಳುವರು; ನಿನ್ನ ಮೂಗು, ಕಿವಿಗಳನ್ನು ಕತ್ತರಿಸಿಬಿಡುವರು; ನಿನ್ನಲ್ಲಿ ಉಳಿದವರು ಖಡ್ಗಕ್ಕೆ ತುತ್ತಾಗುವುರು; ನಿನ್ನ ಗಂಡು ಮತ್ತು ಹೆಣ್ಣು ಮಕ್ಕಳನ್ನು ಅಪಹರಿಸುವರು; ನಿನ್ನ ಜನಶೇಷವು ಅಗ್ನಿಗೆ ಆಹುತಿಯಾಗುವುದು.

¶ ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, “ಇಗೋ ನಾನು ನಿನಗೆ ವಿರುದ್ಧವಾಗಿದ್ದೇನೆ, ನಿನ್ನ ನೆರಿಗೆಯನ್ನು ನಿನ್ನ ಕಣ್ಣ ಮುಂದೆಯೇ ಕೀಳಿಸುವೆನು, ನಿನ್ನ ಬೆತ್ತಲೆತನವನ್ನು ಜನಾಂಗಗಳಿಗೆ ತೋರಿಸುವೆನು, ನಿನ್ನ ಅವಮಾನವನ್ನು ರಾಜ್ಯಗಳಿಗೆ ತೋರುವಂತೆ ಮಾಡುವೆನು.