TSK

TSK · ಯೆಶಾಯ 3:23

مراجع Treasury of Scripture Knowledge في ಕನ್ನಡ IRV.

العودة إلى المقطع

ಫರೋಹನು ತನ್ನ ಕೈಯಿಂದ ಉಂಗುರವನ್ನು ತೆಗೆದು ಯೋಸೇಫನ ಬೆರಳಿಗೆ ತೊಡಿಸಿ ಅವನಿಗೆ ನಾರುಮಡಿಯನ್ನು ಹೊದಿಸಿ ಅವನ ಕೊರಳಿಗೆ ಚಿನ್ನದ ಸರವನ್ನು ಹಾಕಿದನು.

ಆಗ ಅವನು ಆಕೆಗೆ “ನಿನ್ನ ಮೇಲ್ಹೊದಿಕೆಯನ್ನು ಹಾಸು” ಎಂದು ಹೇಳಿದನು, ಆಕೆ ಹಾಸಲು ಅದರಲ್ಲಿ ಆರು ಪಡಿ ಜವೆಗೋದಿಯನ್ನು ಹಾಕಿ ಹೊರಿಸಿ ಕಳುಹಿಸಿದನು. ಆಕೆಯು ಊರೊಳಕ್ಕೆ ಹೋದಳು.

ಊರಲ್ಲಿ ಸುತ್ತುತ್ತಿರುವ ಕಾವಲುಗಾರರು ನನ್ನನ್ನು ಕಂಡುಹಿಡಿದು, ಹೊಡೆದು ಗಾಯಪಡಿಸಿದರು, ಪೌಳಿಯ ಕಾವಲುಗಾರರು ಮೇಲೊದಿಕೆಯನ್ನು ನನ್ನಿಂದ ಕಿತ್ತುಕೊಂಡರು.

¶ ‹“ಐಶ್ವರ್ಯವಂತನಾದ ಒಬ್ಬ ಮನುಷ್ಯನಿದ್ದನು. ಅವನು ಬೆಲೆಬಾಳುವ ನಯವಾದ ನಾರುಮಡಿ ಮುಂತಾದ ವಸ್ತ್ರಗಳನ್ನು ಧರಿಸಿಕೊಂಡು, ಪ್ರತಿದಿನವು ಸುಖಸಂತೋಷಗಳಲ್ಲಿ ಜೀವಿಸುತ್ತಿದ್ದನು.›

ಪರಲೋಕದಲ್ಲಿರುವ ಸೈನ್ಯವು ಶುಭ್ರವಾಗಿಯೂ ನಿರ್ಮಲವಾಗಿಯೂ ಇರುವ ನಯವಾದ ನಾರುಮಡಿಯನ್ನು ಧರಿಸಿಕೊಂಡು ಬಿಳೀ ಕುದುರೆಗಳ ಮೇಲೆ ಹತ್ತಿದವರಾಗಿ ಆತನನ್ನು ಹಿಂಬಾಲಿಸಿದರು.