ಆತನು ನಿಮ್ಮನ್ನು ಕ್ಷಯರೋಗ, ಚಳಿಜ್ವರ, ಉರಿತ, ಉಷ್ಣಜ್ವರಗಳಿಂದಲೂ, ದೇಶವನ್ನು ಕ್ಷಾಮದಿಂದಲೂ ಮತ್ತು ಬೆಳೆಯನ್ನು ಕಾಡಿನ ಬಿಸಿಗಾಳಿಗಳಿಂದಲೂ ನರಳುವಂತೆ ಮಾಡುವನು. ನೀವು ಸಾಯುವ ತನಕ ಇವು ನಿಮ್ಮನ್ನು ಬೆನ್ನತ್ತುವವು.
TSK
TSK · ಯೆಶಾಯ 3:24
مراجع Treasury of Scripture Knowledge في ಕನ್ನಡ IRV.
ಕನ್ಯೆಯರ ಲೇಪನಕಾಲವು ಪೂರೈಸುವುದಕ್ಕೆ ಗಂಧರಸಪ್ರಯೋಗದಲ್ಲಿ ಆರು ತಿಂಗಳೂ, ಪರಿಮಳದ್ರವ್ಯ ಕಾಂತಿವರ್ಧಕದ್ರವ್ಯಗಳ ಪ್ರಯೋಗದಲ್ಲಿ ಆರು ತಿಂಳಗಳೂ ಅಂತು ಹನ್ನೆರಡು ತಿಂಗಳು ಕಳೆದವು. ಈ ಕಾಲ ಮುಗಿದನಂತರ ರಾಜನ ಅರಮನೆಯ ನಿಯಮದ ಮೇರೆಗೆ ತನ್ನನ್ನು ಸಿದ್ಧಪಡಿಸಿಕೊಂಡ ಪ್ರತಿಯೊಬ್ಬ ಕನ್ಯೆಯು ಅರಸನಾದ ಅಹಷ್ವೇರೋಷನ ಬಳಿಗೆ ಹೋಗಬೇಕಾಗಿತ್ತು.
ಹಾಸಿಗೆಯ ಮೇಲೆ ರಕ್ತಬೋಳ, ಅಗುರು, ಲವಂಗ, ಚಕ್ಕೆ ಇವುಗಳ ಚೂರ್ಣಗಳಿಂದ ಸುವಾಸನೆಗೊಳಿಸಿದ್ದೇನೆ.
ಆಗ ಕರ್ತನಾದ ಯೆಹೋವನು ನ್ಯಾಯತೀರ್ಪಿನ ಆತ್ಮದಿಂದಲೂ, ದಹಿಸುವ ಆತ್ಮದಿಂದಲೂ ಚೀಯೋನಿನ ಸ್ತ್ರೀಯರ ಕಲ್ಮಷವನ್ನೂ ಮತ್ತು ಯೆರೂಸಲೇಮಿನ ರಕ್ತದ ಕಲೆಯನ್ನು ತೊಳೆದುಬಿಡುವನು.
ಬೀದಿಗಳಲ್ಲಿ ತಿರುಗುವವರು ನಡುವಿಗೆ ಗೋಣಿತಟ್ಟನ್ನು ಸುತ್ತಿಕೊಂಡಿದ್ದಾರೆ ಮತ್ತು ತಮ್ಮ ಮಾಳಿಗೆಗಳ ಮೇಲೆಯೂ, ಚೌಕಗಳಲ್ಲಿಯೂ ಎಲ್ಲರು ಅರಚುತ್ತಾ ಕಣ್ಣೀರನ್ನು ಸುರಿಸಿ ಸುರಿಸಿ ಗೋಳಾಡುತ್ತಾ ಇಳಿದು ಹೋಗಿದ್ದಾರೆ.
¶ ನಿಶ್ಚಿಂತರಾದ ಸ್ತ್ರೀಯರೇ, ಏಳಿರಿ, ನನ್ನ ಧ್ವನಿಯನ್ನು ಕೇಳಿರಿ. ಭಯವಿಲ್ಲದ ಹೆಣ್ಣು ಮಕ್ಕಳೇ, ನನ್ನ ಮಾತಿಗೆ ಕಿವಿಗೊಡಿರಿ!
ಇದರ ನಿಮಿತ್ತ ಗೋಣಿತಟ್ಟನ್ನು ಸುತ್ತಿಕೊಳ್ಳಿರಿ. ಪ್ರಲಾಪಿಸಿರಿ, ಗೋಳಾಡಿರಿ; ಯೆಹೋವನ ರೋಷಾಗ್ನಿಯು ನಮ್ಮನ್ನು ಬಿಟ್ಟಿಲ್ಲವಲ್ಲಾ.
ಎಲ್ಲರ ತಲೆಯು ಬೋಳು, ಎಲ್ಲರ ಗಡ್ಡವು ವಿಕಾರ, ಎಲ್ಲರ ಕೈಯಲ್ಲಿ ಗಾಯ, ಎಲ್ಲರ ನಡುವಿನ ಮೇಲೆ ಗೋಣಿತಟ್ಟು.
ಚೀಯೋನ್ ನಗರಿಯ ಹಿರಿಯರು ನೆಲದಲ್ಲಿ ಮೌನವಾಗಿ ಕುಕ್ಕರಿಸಿದ್ದಾರೆ; ತಲೆಯ ಮೇಲೆ ಧೂಳನ್ನು ತೂರಿಕೊಂಡು, ಗೋಣಿ ತಟ್ಟನ್ನು ಸುತ್ತಿಕೊಂಡಿದ್ದಾರೆ; ಯೆರೂಸಲೇಮಿನ ಕನ್ಯೆಯರು ತಲೆಗಳನ್ನು ನೆಲಕ್ಕೆ ಬೊಗ್ಗಿಸಿದ್ದಾರೆ.
ನಿನಗಾಗಿ ತಲೆ ಬೋಳಿಸಿಕೊಂಡು, ಗೋಣಿತಟ್ಟನ್ನು ಸುತ್ತಿಕೊಂಡು, ಮನೋವ್ಯಥೆಯಿಂದ ಗೋಳಾಡಿ, ನಿನಗೋಸ್ಕರ ಬಿಕ್ಕಿಬಿಕ್ಕಿ ಅಳುವರು.
ನಿಮ್ಮ ಉತ್ಸವಗಳನ್ನು ದುಃಖಕ್ಕೆ ಮಾರ್ಪಡಿಸುವೆನು ಮತ್ತು ನಿಮ್ಮ ಹರ್ಷಗೀತೆಗಳನ್ನೆಲ್ಲಾ ಶೋಕಗೀತೆಗೆ ತಿರುಗಿಸುವೆನು. ಎಲ್ಲರೂ ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಂಡು, ತಲೆಬೋಳಿಸಿಕೊಳ್ಳುವಂತೆ ಮಾಡುವೆನು. ನಿಮ್ಮ ಪ್ರಲಾಪವು ಏಕಪುತ್ರಶೋಕಕ್ಕೆ ಸಮಾನವಾಗುವುದು, ಅದು ಆದ ಮೇಲೆಯೂ ಶೋಕವು ಇದ್ದೇ ಇರುವುದು.
ಜಡೆ ಹೆಣೆದುಕೊಳ್ಳುವುದೂ, ಚಿನ್ನದ ಒಡವೆಗಳನ್ನು ಹಾಕಿಕೊಳ್ಳುವುದೂ, ಬೆಲೆಬಾಳುವ ವಸ್ತ್ರಗಳನ್ನು ಧರಿಸಿಕೊಳ್ಳುವುದೂ ಈ ಮೊದಲಾದ ಹೊರಗಣ ಶೃಂಗಾರವೇ ನಿಮ್ಮ ಅಲಂಕಾರವಾಗಿರಬಾರದು.
ಮನುಷ್ಯರು ಬಲವಾದ ಬಿಸಿಲಿನಿಂದ ಸುಟ್ಟುಹೋದಾಗ್ಯೂ ಅವರು ಈ ಉಪದ್ರವಗಳ ಮೇಲೆ ಅಧಿಕಾರ ಹೊಂದಿರುವ ದೇವರ ನಾಮವನ್ನು ದೂಷಿಸಿದಲ್ಲದೆ, ಅವರು ಪಶ್ಚಾತ್ತಾಪಪಡಲಿಲ್ಲ ಆತನಿಗೆ ಮಹಿಮೆಯನ್ನು ಸಲ್ಲಿಸಲಿಲ್ಲ.