TSK

TSK · ಯೆಶಾಯ 30:12

مراجع Treasury of Scripture Knowledge في ಕನ್ನಡ IRV.

العودة إلى المقطع

“ನೋಡಿರಿ, ದೇವರನ್ನು ಆಶ್ರಯಿಸಿಕೊಳ್ಳದೆ, ತನ್ನ ಅಧಿಕವಾದ ಐಶ್ವರ್ಯದಲ್ಲಿ ಭರವಸವಿಟ್ಟು, ತನ್ನ ದುಷ್ಟತ್ವವೇ ತನಗೆ ಬಲವೆಂದು ನಂಬಿಕೊಂಡ ಮೂಢನು ಇವನೇ” ಎಂದು ಹೇಳುವರು.

ಸೇನಾಧೀಶ್ವರನಾದ ಯೆಹೋವನ ದ್ರಾಕ್ಷಿಯ ತೋಟವು ಇಸ್ರಾಯೇಲರ ಮನೆಯೇ, ಯೆಹೂದದ ಜನವೇ, ಆತನ ಇಷ್ಟದ ಗಿಡ. ಆತನು ನ್ಯಾಯವನ್ನು ನಿರೀಕ್ಷಿಸಲು ನರಹತ್ಯೆ, ನೀತಿಯನ್ನು ನಿರೀಕ್ಷಿಸಿಲು ಗೋಳಾಟವೂ ಸಿಕ್ಕಿತ್ತು.

ನೀವು ನಿಮ್ಮೊಳಗೆ, “ಮೃತ್ಯುವಿನಿಂದ ಒಡಂಬಡಿಕೆಯನ್ನು ಪಡೆದುಕೊಂಡು ಪಾತಾಳದೊಡನೆ ಒಪ್ಪಂದ ಮಾಡಿಕೊಂಡಿದ್ದೇವೆ; ವಿಪರೀತ ಬಾಧೆಯು ದೇಶದೊಳಗೆ ಹಾದುಹೋಗುವಾಗ ಅದು ನಮ್ಮನ್ನು ಮುಟ್ಟದು; ನಾವು ಸುಳ್ಳನ್ನೇ ಆಶ್ರಯಿಸಿಕೊಂಡು ಮೋಸದಲ್ಲಿ ಮೊರೆಹೊಕ್ಕಿದ್ದೇವೆ” ಎಂದು ಅಂದುಕೊಂಡಿದ್ದೀರಿ.

ಐಗುಪ್ತದ ಸಹಾಯವು ವ್ಯರ್ಥ ನಿರರ್ಥಕ; ಆದುದರಿಂದ ನಾನು ಅದಕ್ಕೆ ಸುಮ್ಮನೆ ಬಿದ್ದಿರುವ ಜಂಬದ ಮೃಗವೆಂದು ಹೆಸರಿಟ್ಟಿದ್ದೇನೆ.

ಅಯ್ಯೋ, ಸಹಾಯಕ್ಕಾಗಿ ಐಗುಪ್ತವನ್ನು ಸೇರಿ ಅಶ್ವಬಲವನ್ನು ಆಶ್ರಯಿಸುವವರ ಗತಿಯನ್ನು ಏನು ಹೇಳಲಿ! ರಥಗಳು ಬಹಳವೆಂದು ಅವುಗಳಲ್ಲಿ ನಂಬಿಕೆಯಿಟ್ಟು, ಸವಾರರು ಬಹು ಬಲಿಷ್ಠರೆಂದು ಅವರ ಮೇಲೆ ಭರವಸವಿಡುತ್ತಾರೆ. ಆದರೆ ಇಸ್ರಾಯೇಲರ ಸದಮಲಸ್ವಾಮಿಯ ಕಡೆಗೆ ದೃಷ್ಟಿಯಿಡುವುದಿಲ್ಲ, ಯೆಹೋವನನ್ನು ಆಶ್ರಯಿಸುವುದಿಲ್ಲ.

ನೀನು ನನ್ನನ್ನು ಮರೆತು ಸುಳ್ಳನ್ನು ನಂಬಿದ್ದರಿಂದ ಇದೇ ನಿನ್ನ ಪಾಲು, ಇದೇ ನಾನು ನಿನಗೆ ಅಳೆದುಕೊಟ್ಟ ಭಾಗ ಎಂದು ಯೆಹೋವನು ನುಡಿಯುತ್ತಾನೆ.

‹ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನು ಕೇಳುವವನಾಗಿದ್ದಾನೆ, ನಿಮ್ಮನ್ನು ತಿರಸ್ಕರಿಸುವವನು ನನ್ನನ್ನು ತಿರಸ್ಕರಿಸುವವನಾಗಿದ್ದಾನೆ, ನನ್ನನ್ನು ತಿರಸ್ಕಾರ ಮಾಡುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ತಿರಸ್ಕಾರ ಮಾಡುವವನಾಗಿದ್ದಾನೆ”› ಅಂದನು.