TSK

TSK · ಯೆಶಾಯ 30:20

مراجع Treasury of Scripture Knowledge في ಕನ್ನಡ IRV.

العودة إلى المقطع

‘ನಾನು ಸುರಕ್ಷಿತನಾಗಿ ಹಿಂದಿರುಗುವವರೆಗೂ ಇವನನ್ನು ಸೆರೆಯಲ್ಲಿಟ್ಟು ಸೆರೆಮನೆಯ ಅನ್ನಪಾನಗಳನ್ನೇ ಕೊಟ್ಟು ಕುಗ್ಗಿಸಬೇಕೆಂದು ಅರಸನು ಅನ್ನುತ್ತಾನೆ’ ಎಂದು ಹೇಳಿರಿ” ಎಂಬುದಾಗಿ ಆಜ್ಞಾಪಿಸಿದನು.

ಆತನ ಕೋಪವು ಕ್ಷಣಮಾತ್ರವೇ; ಆತನ ಅನುಗ್ರಹವೋ ಜೀವಮಾನವೆಲ್ಲಾ ಇರುವುದು; ಸಂಜೆಗೆ ದುಃಖವೆಂಬುದು ಬಂದು ನಮ್ಮ ಬಳಿಯಲ್ಲಿ ಇಳಿದುಕೊಂಡರೂ, ಮುಂಜಾನೆ ಹರ್ಷಧ್ವನಿಯು ಕೇಳಿಸುವುದು.

ರೋದನವೇ ಅವರ ಆಹಾರವಾಗುವಂತೆಯೂ, ಅಶ್ರುಧಾರೆಯೇ ಅವರ ಪಾನವಾಗುವಂತೆಯೂ ಮಾಡಿದಿ.

ಬೆಳಗಾಗುವುದಕ್ಕಿಂತ ಮುಂಚೆ ಏಳುವವರೇ, ಹೊತ್ತು ಮೀರಿ ಮಲಗುವವರೇ, ನೀವು ಆಹಾರಕ್ಕಾಗಿ ಇಷ್ಟು ಕಷ್ಟಪಡುವುದು ವ್ಯರ್ಥ; ಆತನು ಅದನ್ನು ತನ್ನ ಪ್ರಿಯರಿಗೆ ನಿದ್ರೆಯಲ್ಲಿಯೂ ಕೊಡುತ್ತಾನೆ.

ಸೆರೆಯಲ್ಲಿ ಕುಗ್ಗಿರುವವನು ಸಾಯನು, ಪಾತಾಳಕ್ಕೆ ಇಳಿಯನು, ಬೇಗನೆ ಬಿಡುಗಡೆಯಾಗುವನು. ಅವನಿಗೆ ಅನ್ನದ ಕೊರತೆಯೇ ಇರುವುದಿಲ್ಲ.

ನಾನು ಮಾಡಿದಂತೆ ಆಗ ನೀವೂ ಮಾಡುವಿರಿ, ಅಂದರೆ ಬಟ್ಟೆಯಿಂದ ಬಾಯನ್ನು ಮುಚ್ಚಿಕೊಳ್ಳದೆ, ಮನುಷ್ಯರ ರೊಟ್ಟಿಯನ್ನು ತಿನ್ನದೆ ಇರುವಿರಿ,

‹ಆದುದರಿಂದ ಬೆಳೆಯ ಯಜಮಾನನನ್ನು, ನಿನ್ನ ಬೆಳೆಗೆ ಕೆಲಸದವರನ್ನು ಕಳುಹಿಸಿಕೊಡಬೇಕೆಂದು ಬೇಡಿಕೊಳ್ಳಿರಿ”› ಎಂದು ಹೇಳಿದನು.

ಆತನು ಕೆಲವರನ್ನು ಅಪೊಸ್ತಲರನ್ನಾಗಿಯೂ, ಕೆಲವರನ್ನು ಪ್ರವಾದಿಗಳನ್ನಾಗಿಯೂ, ಕೆಲವರನ್ನು ಸುವಾರ್ತಿಕರನ್ನಾಗಿಯೂ, ಕೆಲವರನ್ನು ಸಭಾಪಾಲಕರನ್ನಾಗಿಯೂ, ಬೋಧಕರನ್ನಾಗಿಯೂ ನೇಮಿಸಿದನು.