ಕಷ್ಟಕಾಲದಲ್ಲಿ ದ್ರೋಹಿಯಲ್ಲಿಡುವ ನಂಬಿಕೆಯು, ಮುರುಕಹಲ್ಲು ಮತ್ತು ಜಾರುವ ಕಾಲು.
TSK
TSK · ಯೆಶಾಯ 30:3
مراجع Treasury of Scripture Knowledge في ಕನ್ನಡ IRV.
ತಮಗೆ ಸಹಾಯವನ್ನೂ, ಪ್ರಯೋಜನವನ್ನೂ ಮಾಡಲಾರದೆ ನಾಚಿಕೆಯನ್ನೂ, ಅವಮಾನವನ್ನೂ ಉಂಟುಮಾಡುವ ವ್ಯರ್ಥವಾದ ಈ ಜನಾಂಗದ ವಿಷಯವಾಗಿ ಎಲ್ಲರೂ ಲಜ್ಜೆಪಡುವರು.”
ವಿಗ್ರಹಗಳನ್ನು ಕೆತ್ತುವವರೆಲ್ಲರೂ ನಾಚಿಕೆಗೀಡಾಗಿ ಮಾನಭಂಗಪಡುವರು. ಹೌದು, ಒಟ್ಟಿಗೆ ಅವಮಾನದಲ್ಲಿ ಮುಳುಗುವರು.
ಯೆಹೋವನು ಹೀಗೆನ್ನುತ್ತಾನೆ, “ಮಾನವ ಮಾತ್ರದವರಲ್ಲಿ ಭರವಸವಿಟ್ಟು, ನರಜನ್ಮದವರನ್ನು ತನ್ನ ಭುಜಬಲವೆಂದು ತಿಳಿದು, ಯೆಹೋವನನ್ನು ತೊರೆಯುವ ಮನಸ್ಸುಳ್ಳವನು ಶಾಪಗ್ರಸ್ಥನು.
“ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, ನನ್ನನ್ನು ವಿಚಾರಿಸುವುದಕ್ಕೆ ನಿಮ್ಮನ್ನು ನನ್ನ ಬಳಿಗೆ ಕಳುಹಿಸಿದ ಯೆಹೂದದ ಅರಸನಿಗೆ ಹೀಗೆ ಹೇಳಿರಿ, ‘ಇಗೋ, ನಿಮ್ಮ ಸಹಾಯಕ್ಕೆ ಹೊರಟಿರುವ ಫರೋಹನ ಸೈನ್ಯವು ಸ್ವದೇಶವಾದ ಐಗುಪ್ತಕ್ಕೆ ಹಿಂದಿರುಗುವುದು.
ಇಸ್ರಾಯೇಲರು ನಿನ್ನ ಮೇಲೆ ಕೈಯಿಡಲು, ನೀನು ಮುರಿದು ಅವರೆಲ್ಲರ ಹೆಗಲನ್ನು ಚುಚ್ಚಿದೆ; ಅವರು ನಿನ್ನ ಮೇಲೆ ಆತುಕೊಳ್ಳುವಾಗ, ನೀನು ಅವರನ್ನು ಒಡೆದು, ಅವರ ಕಾಲುಗಳಿಗೆ ಮತ್ತು ನಡುವಿಗೆ ನಡುಕವನ್ನು ಉಂಟುಮಾಡಿದೆ.
“ಆತನ ಮೇಲೆ ನಂಬಿಕೆಯಿಡುವ ಒಬ್ಬನಾದರೂ ಆಶಾಭಂಗಪಡುವುದಿಲ್ಲವೆಂದು” ಧರ್ಮಶಾಸ್ತ್ರವು ಹೇಳುತ್ತದೆ.