TSK

TSK · ಯೆಶಾಯ 31:1

مراجع Treasury of Scripture Knowledge في ಕನ್ನಡ IRV.

العودة إلى المقطع

ಅವರು ತಮ್ಮ ಕುರಿದನಗಳನ್ನು ಯೋಸೇಫನ ಬಳಿಗೆ ತೆಗೆದುಕೊಂಡು ಬರಲು, ಅವನು ಅವರ ಕುದುರೆಗಳನ್ನೂ, ಕುರಿದನಗಳನ್ನೂ, ಕತ್ತೆಗಳನ್ನೂ ತೆಗೆದುಕೊಂಡು ಅವರಿಗೆ ಧಾನ್ಯವನ್ನು ಕೊಟ್ಟನು. ಆ ವರ್ಷದಲ್ಲಿ ಅವರ ಕುರಿದನಗಳನ್ನೆಲ್ಲಾ ತೆಗೆದುಕೊಂಡು ಧಾನ್ಯವನ್ನು ಕೊಟ್ಟು ಅವರನ್ನು ಸಂರಕ್ಷಿಸಿದನು.

ಆ ಕಾಲದಲ್ಲಿ ದರ್ಶಕನಾದ ಹನಾನಿಯು ಯೆಹೂದ್ಯರ ಅರಸನಾದ ಆಸನ ಬಳಿಗೆ ಬಂದು ಅವನಿಗೆ, “ನೀನು ನಿನ್ನ ದೇವರಾದ ಯೆಹೋವನನ್ನು ಆಶ್ರಯಿಸಿಕೊಳ್ಳದೆ ಅರಾಮ್ಯರ ಅರಸನನ್ನು ಆಶ್ರಯಿಸಿಕೊಂಡದ್ದರಿಂದ ಅರಾಮ್ ರಾಜನ ಸೈನ್ಯವು ನಿನ್ನ ಕೈಗೆ ಬೀಳದಂತೆ ತಪ್ಪಿಸಿಕೊಂಡಿತು.

ಬಲ ಹೆಚ್ಚಾಗಿರುವುದರಿಂದ ಅದರಲ್ಲಿ ನಂಬಿಕೆಯಿಟ್ಟು, ನಿನ್ನ ಕೆಲಸವನ್ನು ಅದಕ್ಕೆ ಒಪ್ಪಿಸಿಬಿಡುವೆಯೋ?

ಮಹಾ ಸೇನಾಬಲದಿಂದಲೇ ಯಾವ ಅರಸನಿಗೂ ಜಯವಾಗುವುದಿಲ್ಲ; ಯಾವ ಶೂರನೂ ಅಧಿಕವಾದ ಭುಜಬಲದಿಂದ ಸುರಕ್ಷಿತನಾಗುವುದಿಲ್ಲ.

ಅವರ ದೇಶವು ಬೆಳ್ಳಿಬಂಗಾರಗಳಿಂದ ತುಂಬಿದೆ. ಅವರ ನಿಧಿನಿಕ್ಷೇಪಗಳಿಗೆ ಮಿತಿಯಿಲ್ಲ. ಅವರ ದೇಶವು ಅಶ್ವಬಲದಿಂದ ತುಂಬಿದೆ. ಅವರ ರಥಗಳಿಗೆ ಮಿತಿಯೇ ಇಲ್ಲ.

ಅವರ ಮುಂದೆ ಪೂರ್ವದಿಂದ ಅರಾಮ್ಯರನ್ನು ಮತ್ತು ಅವರ ಹಿಂದೆ ಪಶ್ಚಿಮದಿಂದ ಫಿಲಿಷ್ಟಿಯರನ್ನು ಒಟ್ಟುಗೂಡಿಸುವನು. ಇವರು ಇಸ್ರಾಯೇಲರನ್ನು ಬಾಯಿದೆರೆದು ನುಂಗುವರು. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇದೆ.

ಆ ದಿನದಲ್ಲಿ ಜನರು ತಮ್ಮ ಸೃಷ್ಟಿಕರ್ತನನ್ನೇ ದೃಷ್ಟಿಸುವರು ಮತ್ತು ಇಸ್ರಾಯೇಲಿನ ಸದಮಲಸ್ವಾಮಿಯ ಕಡೆಗೆ ಕಣ್ಣುಗಳನ್ನು ತಿರುಗಿಸುವರು.

ಯೆಹೋವನು ಹೀಗೆ ನುಡಿಯುತ್ತಾನೆ, “ದ್ರೋಹಿಗಳಾದ ನನ್ನ ಮಕ್ಕಳ ಗತಿಯನ್ನು ಏನು ಹೇಳಲಿ” “ಇವರು ನನ್ನನ್ನು ಕೇಳದೆ ಒಂದು ಆಲೋಚನೆಯನ್ನು ಮಾಡಿ, ನನ್ನ ಆತ್ಮದಿಂದ ಪ್ರೇರಿತರಾಗದೆ ಕಪಟ ಉಪಾಯಗಳನ್ನು ಮಾಡಿ ಪಾಪದ ಮೇಲೆ ಪಾಪವನ್ನು ಸೇರಿಸಿಕೊಂಡಿದ್ದಾರೆ.

¶ “‘ಜಜ್ಜಿದ ದಂಟಿಗೆ ಸಮಾನವಾದ ಐಗುಪ್ತವೆಂಬ ಕೋಲಿನ ಮೇಲೆ ಭರವಸವಿಟ್ಟಿರುತ್ತೀಯಷ್ಟೆ. ಒಬ್ಬನು ಅಂಥ ಕೋಲನ್ನು ಆಧಾರ ಮಾಡಿಕೊಳ್ಳುವುದಾದರೆ ಅದು ಅವನ ಕೈಯನ್ನು ತಿವಿದು ಒಳಕ್ಕೆ ಹೋಗುತ್ತದೆ! ಐಗುಪ್ತದ ಅರಸನಾದ ಫರೋಹನನಲ್ಲಿ ಭರವಸವಿಟ್ಟವರಿಗೆ ಅದೇ ಗತಿಯಾಗುವುದು.

ಬಹು ಸುಗಂಧದ್ರವ್ಯಗಳನ್ನು ಕೂಡಿಸಿ, ತೈಲವನ್ನೂ ತೆಗೆದುಕೊಂಡು, ಪರರಾಜನ ಬಳಿಗೆ ಪ್ರಯಾಣಮಾಡಿದ್ದಿ; ನಿನ್ನ ರಾಯಭಾರಿಗಳನ್ನು ದೂರ ದೂರ ಕಳುಹಿಸಿದ್ದಿ; ನಿನ್ನನ್ನು ಪಾತಾಳದವರೆಗೂ ತಗ್ಗಿಸಿಕೊಂಡಿದ್ದಿ.

“ನನ್ನ ಜನರು ಎರಡು ಅಪರಾಧಗಳನ್ನು ಮಾಡಿದ್ದಾರೆ; ಅವರು ಜೀವಜಲದ ಬುಗ್ಗೆಯಾದ ನನ್ನನ್ನು ಬಿಟ್ಟುಬಿಟ್ಟು ತಮಗೋಸ್ಕರ ತೊಟ್ಟಿಗಳನ್ನು ತೋಡಿಕೊಂಡಿದ್ದಾರೆ. ಅವರು ಬಿರುಕು ಬಿಟ್ಟ, ನೀರು ನಿಲ್ಲದ ತೊಟ್ಟಿಗಳನ್ನು ಕೊರೆದುಕೊಂಡಿದ್ದಾರೆ.

ಆದರೆ ಅವನು ಬಾಬೆಲಿನ ಅರಸನ ಮೇಲೆ ತಿರುಗಿಬಿದ್ದು ಕುದುರೆಗಳನ್ನೂ ಮತ್ತು ಬಹಳ ಮಂದಿ ಸೈನಿಕರನ್ನೂ ನಮಗೆ ಒದಗಿಸೆಂದು ಐಗುಪ್ತಕ್ಕೆ ರಾಯಭಾರಿಗಳನ್ನು ಕಳುಹಿಸಿದನು. ಆದರೂ ಇವನು ಗೆಲ್ಲುವನೋ? ಇಂಥಾ ಕೃತ್ಯಗಳನ್ನು ನಡೆಸಿದವನು ಪಾರಾಗುವನೋ? ಒಡಂಬಡಿಕೆಯನ್ನು ಮೀರಿದವನು ತಪ್ಪಿಸಿಕೊಂಡಾನೇ?”

ಎಲ್ಲರೂ ಒಲೆಯಂತೆ ಝಳವೇರಿ ತಮ್ಮ ನ್ಯಾಯಾಧೀಶ್ವರರನ್ನು ನುಂಗಿಬಿಡುತ್ತಾರೆ; ಅವರ ಸಕಲ ರಾಜರು ಬಿದ್ದಿರುತ್ತಾರೆ, ಅವರೊಳಗೆ ನನ್ನನ್ನು ಪ್ರಾರ್ಥಿಸುವವರೇ ಇಲ್ಲ.

ಇಸ್ರಾಯೇಲ್ ಐಗುಪ್ತ ದೇಶಕ್ಕೆ ಹಿಂದಿರುಗದು; ಅದು ನನ್ನ ಕಡೆಗೆ ಹಿಂದಿರುಗಲು ಒಪ್ಪದ ಕಾರಣ ಅಶ್ಶೂರವೇ ಅದಕ್ಕೆ ರಾಜನಾಗಬೇಕು.

ಯೆಹೋವನು ಇಸ್ರಾಯೇಲರ ವಂಶಕ್ಕೆ ಹೀಗೆ ನುಡಿಯುತ್ತಾನೆ: “ನೀವು ನನ್ನನ್ನು ಆಶ್ರಯಿಸಿ ಬದುಕಿಕೊಳ್ಳಿರಿ!